ಊಟಿ ಬಳಿ 120 ಅಡಿ ಆಳಕ್ಕೆ ಬಿದ್ದ ಮಿನಿಬಸ್; 32 ಜನರಿಗೆ ಗಾಯ
ತಮಿಳುನಾಡಿನ ಊಟಿಯಿಂದ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ 120 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದಿದೆ. 17 ಪುರುಷರು, 12 ಮಹಿಳೆಯರು ಮತ್ತು ಮೂವರು ಮಕ್ಕಳು ಸೇರಿದಂತೆ 32 ಪ್ರಯಾಣಿಕರು ಗಾಯಗೊಂಡಿದ್ದಾರೆ. ಅವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ. ಅವರೆಲ್ಲರಿಗೂ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಅಪಘಾತದ ಕಾರಣವನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಊಟಿ, ಜನವರಿ 7: ತಮಿಳುನಾಡಿನ ಊಟಿ ಬಳಿ 120 ಅಡಿ ಕಂದಕಕ್ಕೆ ಮಿನಿ ಬಸ್ ಬಿದ್ದು ಅಪಘಾತಕ್ಕೀಡಾಗಿದೆ. ಈ ಅಪಘಾತದಲ್ಲಿ (Accident) 32 ಜನರು ಗಾಯಗೊಂಡಿದ್ದಾರೆ. ಅವರಲ್ಲಿ 3 ಜನರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸಕ್ರಿಯ ತನಿಖೆ ನಡೆಸುತ್ತಿದ್ದಾರೆ.
ನೀಲಗಿರಿ ಜಿಲ್ಲೆಯ ಉಡಗೈನ ಕಲ್ಲಕೊರೈ ಹಾಡ ಬಳಿ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಮಿನಿ ಬಸ್ ಚಾಲಕನ ನಿಯಂತ್ರಣ ತಪ್ಪಿ 120 ಅಡಿ ಆಳಕ್ಕೆ ಉರುಳಿ ಬಿದ್ದು ಅಪಘಾತ ಸಂಭವಿಸಿದೆ. ಅಪಘಾತಕ್ಕೀಡಾದವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ: ದೆಹಲಿ-ಮುಂಬೈ ಎಕ್ಸ್ಪ್ರೆಸ್ವೇನಲ್ಲಿ ಸಂಭವಿಸಿದ ಭೀಕರ ಅಪಘಾತದ ವಿಡಿಯೋ ಇಲ್ಲಿದೆ
#WATCH | Tamil Nadu: A private bus travelling from Ooty fell into a 100-ft gorge near Manalada after the driver lost control of the vehicle. 32 passengers, including 17 men, 12 women and three children, were injured. The people of the area rescued them and provided them with… pic.twitter.com/6HRVUdcTW0
— ANI (@ANI) January 7, 2026
ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು, ಆಂಬ್ಯುಲೆನ್ಸ್ ಮೂಲಕ ಗಾಯಾಳುಗಳನ್ನು ಊಟಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕಳುಹಿಸಿದರು. ಪ್ರಸ್ತುತ ಅವರಿಗೆ ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ಅವರಲ್ಲಿ 3 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಅಪಘಾತದ ಕಾರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
