2047ಕ್ಕೆ ಭಾರತ ಅಭಿವೃದ್ದಿ ಹೊಂದಿದ ದೇಶವಾಗಲಿದೆ, ಗಣಿಗಾರಿಕೆಯಿಂದ ದೇಶದ GDPಗೆ ಶೇ 2.5 ರಷ್ಟು ಕೊಡುಗೆ -ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ

Pralhad Joshi: 2030 ರ ವೇಳೆಗೆ ಭಾರತದ GDP ಯಲ್ಲಿ ಗಣಿ ಮತ್ತು ಖನಿಜಗಳ ಪಾಲು ಶೇ 2.5ಕ್ಕೆ ಹೆಚ್ಚಿಸುವ ನಿಟ್ಟಿನಲ್ಲಿ ಎಲ್ಲ ರಾಜ್ಯಗಳು ಸಹಕರಿಸುವಂತೆ ಸಚಿವ ಪ್ರಲ್ಹಾದ್ ಜೋಶಿ ಕರೆ ನೀಡಿದ್ದಾರೆ.

2047ಕ್ಕೆ ಭಾರತ ಅಭಿವೃದ್ದಿ ಹೊಂದಿದ ದೇಶವಾಗಲಿದೆ, ಗಣಿಗಾರಿಕೆಯಿಂದ ದೇಶದ GDPಗೆ ಶೇ 2.5 ರಷ್ಟು ಕೊಡುಗೆ -ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ
ಗಣಿಗಾರಿಕೆಯಿಂದ ದೇಶದ GDPಗೆ ಶೇ 2.5 ರಷ್ಟು ಕೊಡುಗೆ - ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on: Sep 09, 2022 | 5:58 PM

ಹೈದರಾಬಾದ್: ಇಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಗಣಿಗಾರಿಕೆ ಸಚಿವರ ಸಮಾವೇಶವನ್ನು ಉದ್ಘಾಟಿಸಿ ಜೋಶಿ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿಯವರ ನಿರ್ದೇಶನದಂತೆ, ಆಯಾ ರಾಜ್ಯ ಗಣಿ ಇಲಾಖೆಯ ಸರಕಾರಿ ಕಂಪನಿಗಳು ಮತ್ತು ಸ್ವಾಯತ್ತ ಸಂಸ್ಥೆಗಳ ಜೊತೆ ಚರ್ಚಿಸಿ ಸಮಾವೇಶ ಆಯೋಜಿಸಲಾಗಿದೆ.‌ ಎಲ್ಲ ರಾಜ್ಯಗಳ ಪಾಲ್ಗೊಳ್ಳುವಿಕೆ ಮುಖ್ಯ. ಒಕ್ಕೂಟ ವ್ಯವಸ್ಥೆಯಲ್ಲಿ ನಾವು ಶ್ರದ್ದೆಯಿಂದ ಕೆಲಸ ಮಾಡಿದರೆ 2047 ರೊಳಗೆ ಭಾರತ ಅಭಿವೃದ್ದಿ ಹೊಂದಿದ ಭಾರತವಾಗುವುದರಲ್ಲಿ ಅನುಮಾನ ಬೇಡ ಎಂದು ಪ್ರಲ್ಹಾದ್ ಜೋಶಿ (Union Minister of Coal and Mines Pralhad Joshi ) ಅಭಿಪ್ರಾಯಪಟ್ಟರು.

ಕಲ್ಲಿದ್ದಲು ಉತ್ಪಾದನೆಯಲ್ಲಿ ಭಾರತ ಹೊಸ ಮೈಲುಗಲ್ಲು ಸಾಧಿಸುತ್ತಿದೆ. ಕಲ್ಲಿದ್ದಲು ಉತ್ಪಾದನೆಯಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ‌ ಶೇ 8% ರಷ್ಟು ಹೆಚ್ಚಳವಾಗಿದ್ದು, ಆಗಸ್ಟ್ 2022ರವರೆಗೆ 58 MT ಯಷ್ಟಾಗಿದೆ ಎಂದು ಸಮ್ಮೇಳನದಲ್ಲಿ ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದರು.

ಭಾರತದಲ್ಲಿ ಕಲ್ಲಿದ್ದಲು ಗಣಿಗಾರಿಕೆ ಕ್ಷೇತ್ರದಲ್ಲಿ ಇನ್ನಷ್ಟು ಪ್ರಗತಿ ಸಾಧಿಸಲು ನಮ್ಮ ಪ್ರಯತ್ನ ನಿರಂತರವಾಗಿರುತ್ತದೆ. ಖನಿಜ ಕ್ಷೇತ್ರದಲ್ಲಾದ ಸುಧಾರಣೆ ಭಾರತದ ಆರ್ಥಿಕ ಬೆಳವಣಿಗೆಯಲ್ಲಿ ಕಲ್ಲಿದ್ದಲು ಗಣಿಗಾರಿಕೆಯ ಪಾತ್ರವು ಮುಖ್ಯವಾಗಿದೆ. ಕಳೆದ ವರ್ಷ ಹರಾಜಾದ ಗಣಿಗಳಿಂದ ಸರಕಾರಕ್ಕೆ ಒಟ್ಟು 25,170 ಕೋಟಿ ಆದಾಯ ಬಂದಿದೆ ಎಂದು ಜೋಶಿ ತಿಳಿಸಿದರು.

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ