AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಯೋತ್ಪಾದಕರನ್ನು ಜೈಲಿಗೆ ಅಥವಾ ನರಕಕ್ಕೆ ಕಳಿಸಲಾಗುವುದು: ಕೇಂದ್ರ ಸರ್ಕಾರ

ಮೋದಿ ಸರ್ಕಾರವು ಉಗ್ರರ ಬಗ್ಗೆ ಶೂನ್ಯ ಸಹಿಷ್ಣುತೆಯನ್ನು ಹೊಂದಿದೆ. ನಾವು ಭಯೋತ್ಪಾದನೆಯನ್ನು ಕೊನೆಗೊಳಿಸುತ್ತೇವೆ. ಅವರು (ಭಯೋತ್ಪಾದಕರು) ಜೈಲಿನಲ್ಲಿರುತ್ತಾರೆ ಅಥವಾ ಜಹನ್ನುಮ್ ಗೆ ಹೋಗುತ್ತಾರೆ ಎಂದು ನಾನು ಸದನಕ್ಕೆ ಭರವಸೆ ನೀಡಲು ಬಯಸುತ್ತೇನೆ ಎಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಗಳ ಬಗ್ಗೆ ಸರ್ಕಾರದ ನಿಲುವನ್ನು ವಿವರಿಸಿದ ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ ರಾಯ್ ಹೇಳಿದ್ದಾರೆ

ಭಯೋತ್ಪಾದಕರನ್ನು ಜೈಲಿಗೆ ಅಥವಾ ನರಕಕ್ಕೆ ಕಳಿಸಲಾಗುವುದು: ಕೇಂದ್ರ ಸರ್ಕಾರ
ನಿತ್ಯಾನಂದ ರಾಯ್
ರಶ್ಮಿ ಕಲ್ಲಕಟ್ಟ
|

Updated on: Jul 24, 2024 | 5:50 PM

Share

ದೆಹಲಿ ಜುಲೈ 24: ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಗಳ ಬಗ್ಗೆ ಸರ್ಕಾರದ ನಿಲುವನ್ನು ವಿವರಿಸಿದ ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ ರಾಯ್ (Nityanand Rai), ಸಕ್ರಿಯ ಭಯೋತ್ಪಾದಕರನ್ನು ಜೈಲಿಗೆ ಅಥವಾ ಜಹನ್ನಮ್ (ನರಕ)ಕ್ಕೆ ಕಳುಹಿಸಲಾಗುವುದು ಎಂದು ಹೇಳಿದ್ದಾರೆ. ಕಾಂಗ್ರೆಸ್ (Congress) ಸಂಸದ ಪ್ರಮೋದ್ ತಿವಾರಿ ಕೇಳಿದ ಪೂರಕ ಪ್ರಶ್ನೆಗೆ ಉತ್ತರಿಸಿದ ಸಚಿವರು, ಭಯೋತ್ಪಾದಕರು ಯಶಸ್ವಿಯಾಗುವುದಿಲ್ಲ. ಅವರ ಚಟುವಟಿಕೆಗಳು ಶೀಘ್ರದಲ್ಲೇ ಕೊನೆಗೊಳ್ಳುತ್ತವೆ. ನರೇಂದ್ರ ಮೋದಿ ಸರ್ಕಾರ ಭಯೋತ್ಪಾದನೆಯನ್ನು ಸಹಿಸುವುದಿಲ್ಲ ಎಂದು ನಿತ್ಯಾನಂದ ರಾಯ್ ಹೇಳಿದ್ದಾರೆ.

ಕಳೆದ ಕೆಲವು ದಿನಗಳಿಂದ ಕೇಂದ್ರಾಡಳಿತ ಪ್ರದೇಶದಲ್ಲಿ ಭದ್ರತಾ ಪಡೆಗಳು 28 ಭಯೋತ್ಪಾದಕರನ್ನು ಹತ್ಯೆ ಮಾಡಿವೆ  ಎಂದು ಅವರು ಹೇಳಿದ್ದಾರೆ.

ಮೋದಿ ಸರ್ಕಾರವು ಉಗ್ರರ ಬಗ್ಗೆ ಶೂನ್ಯ ಸಹಿಷ್ಣುತೆಯನ್ನು ಹೊಂದಿದೆ. ನಾವು ಭಯೋತ್ಪಾದನೆಯನ್ನು ಕೊನೆಗೊಳಿಸುತ್ತೇವೆ. ಅವರು (ಭಯೋತ್ಪಾದಕರು) ಜೈಲಿನಲ್ಲಿರುತ್ತಾರೆ ಅಥವಾ ಜಹನ್ನುಮ್ ಗೆ ಹೋಗುತ್ತಾರೆ ಎಂದು ನಾನು ಸದನಕ್ಕೆ ಭರವಸೆ ನೀಡಲು ಬಯಸುತ್ತೇನೆ ಎಂದು ರಾಯ್ ಹೇಳಿದ್ದಾರೆ.

ಯುಪಿಎ ಆಡಳಿತದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆಯ ಘಟನೆಗಳು 7,217 ರಿಂದ ಈ ವರ್ಷದ ಜುಲೈನಲ್ಲಿ 2259 ಕ್ಕೆ ಇಳಿದಿದೆ. ಇವುಗಳು ನಡೆಯಬಾರದಿತ್ತು. ಇದು ದುರದೃಷ್ಟಕರ ಆದರೆ ಅವರು (ಪ್ರತಿಪಕ್ಷಗಳು) ಅದರ ಮೇಲೆ ರಾಜಕೀಯ ಮಾಡಬಾರದು” ಎಂದು ಸಚಿವರು ಹೇಳಿದ್ದಾರೆ. 2004 ರಿಂದ 2014 ರ ನಡುವೆ 2,829 ನಾಗರಿಕರು ಮತ್ತು ಭದ್ರತಾ ಸಿಬ್ಬಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ರಾಯ್ ಸದನಕ್ಕೆ ತಿಳಿಸಿದರು. ಈ ಸಂಖ್ಯೆ 2014 ರಿಂದ 67 ರಷ್ಟು ಕಡಿಮೆಯಾಗಿದೆ. ಭಯೋತ್ಪಾದಕ ಘಟನೆಗಳಲ್ಲಿ 69 ರಷ್ಟು ಇಳಿಕೆಯಾಗಿದೆ. ಕಳೆದ ಕೆಲವು ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ 28 ಉಗ್ರರನ್ನು ಹತ್ಯೆ ಮಾಡಲಾಗಿದೆ. ವಿಷಾದದ ಸಂಗತಿಯೆಂದರೆ, ನಮ್ಮ ಕೆಲವು ಸೈನಿಕರು ಸಹ ಗುಂಡಿನ  ಚಕಮಕಿಯಲ್ಲಿ  ಹುತಾತ್ಮರಾಗಿದ್ದಾರೆ. ಉಗ್ರರ ಗುಂಡೇಟಿಗೆ ಬಲಿಯಾದ ಯೋಧರ ಸಂಖ್ಯೆ ಕಡಿಮೆ ಇದೆ.

2023 ರಲ್ಲಿ, 2 ಕೋಟಿ 11 ಸಾವಿರ ಪ್ರವಾಸಿಗರು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ. ಅಲ್ಲಿ ಶಾಂತಿಯನ್ನು ಪುನಃಸ್ಥಾಪಿಸಲಾಗಿದೆ, ಇದರಿಂದಾಗಿ ಪ್ರವಾಸಿಗರು ಹೆಚ್ಚಾಗುತ್ತಿದ್ದಾರೆ” ಎಂದು ಅವರು ಹೇಳಿದರು.

ಸಚಿವರ ಪ್ರಕಾರ ಜನವರಿಯಿಂದ ಜೂನ್ 2024 ರ ನಡುವೆ ಜಮ್ಮು ಕಾಶ್ಮೀರಕ್ಕೆ ಒಟ್ಟು 1,08,41,009 ಪ್ರವಾಸಿಗರು ಮತ್ತು 2023 ರಲ್ಲಿ 2,11,24,674 ಪ್ರವಾಸಿಗರು ಭೇಟಿ ನೀಡಿದ್ದಾರೆ. ಇದು ಇದುವರೆಗಿನ ಸಾರ್ವಕಾಲಿಕ ಗರಿಷ್ಠ . 2022 ರಲ್ಲಿ 1,88,64,332 , 2021 ರಲ್ಲಿ 1,13,14,884 ಮತ್ತು 2020 ರಲ್ಲಿ 34,70,834 ಪ್ರವಾಸಿಗರು ಭೇಟಿ ನೀಡಿದ್ದಾರೆ.

ಇದನ್ನೂ ಓದಿ: ಸರ್ಕಾರದ ಮೇಲೆ ಒತ್ತಡ ಹೇರುತ್ತೇವೆ: ರೈತರೊಂದಿಗೆ ಸಭೆ ನಡೆಸಿದ ನಂತರ ರಾಹುಲ್ ಗಾಂಧಿ ಭರವಸೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿ, ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿತು. ಈ ನಿರ್ಧಾರವು ಭಯೋತ್ಪಾದನೆಯನ್ನು ನಿಯಂತ್ರಣಕ್ಕೆ ತಂದಿದೆ ಎಂದು ಸರ್ಕಾರ ಹೇಳುತ್ತದೆ. ಆದರೆ, ಇತ್ತೀಚಿನ ಭಯೋತ್ಪಾದನಾ ಘಟನೆಗಳ ನಂತರ ಕೇಂದ್ರದ ಹಕ್ಕುಗಳನ್ನು ಪ್ರತಿಪಕ್ಷಗಳು ಪ್ರಶ್ನಿಸಿವೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್