AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಗೀಕಾರ, ಪ್ರಹ್ಲಾದ್ ಜೋಶಿಗೆ ಕೇಂದ್ರ ಶಿಕ್ಷಣ ಖಾತೆ ಹೆಚ್ಚುವರಿ ಹೊಣೆ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ ನಿರಂತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಧರ್ಮೇಂದ್ರ ಪ್ರಧಾನ್ ಅವರು ಕೇಂದ್ರ ಶಿಕ್ಷಣ ಖಾತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದೀಗ ಈ ಖಾತೆ ಹೊಣೆಯನ್ನು ಕನ್ನಡಿಗರೊಬ್ಬರಿಗೆ ನೀಡಲಾಗಿದೆ.

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಗೀಕಾರ, ಪ್ರಹ್ಲಾದ್ ಜೋಶಿಗೆ ಕೇಂದ್ರ ಶಿಕ್ಷಣ ಖಾತೆ ಹೆಚ್ಚುವರಿ ಹೊಣೆ
Pralhad Joshi And Dharmendra Pradhan
ರಮೇಶ್ ಬಿ. ಜವಳಗೇರಾ
|

Updated on:Jul 25, 2026 | 9:19 PM

Share

ಮುಖ್ಯಾಂಶಗಳು

  • ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ
  • ಪ್ರಧಾನ್​ ರಾಜೀನಾಮೆ ಬಳಿಕ ಪ್ರಹ್ಲಾದ್​​ ಜೋಶಿಗೆ ಹೊಣೆಗಾರಿಕೆ
  • ಪ್ರಹ್ಲಾದ್ ಜೋಶಿಗೆ ಕೇಂದ್ರ ಶಿಕ್ಷಣ ಖಾತೆ ಹೆಚ್ಚುವರಿ ಹೊಣೆ

ನವದೆಹಲಿ, (ಜುಲೈ 25): ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ (NEET Case) ಧರ್ಮೇಂದ್ರ ಪ್ರಧಾನ್ (dharmendra pradhan) ನೀಡಿದ್ದ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಗೀಕರಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ಶಿಕ್ಷಣ ಖಾತೆಯನ್ನು ಹೆಚ್ಚುವರಿಯಾಗಿ ಸಚಿವ ಪ್ರಹ್ಲಾದ್ ಜೋಶಿ (pralhad joshi) ಅವರಿಗೆ ವಹಿಸಿದ್ದಾರೆ. ಕೇಂದ್ರ ಆಹಾರ ಮತ್ತು ನಾಗರೀಕ ಸಚಿವರಾಗಿರೂ ಆಗಿರುವ ಪ್ರಹ್ಲಾದ್ ಜೋಶಿ, ತಮ್ಮ ಖಾತೆ ಜೊತೆಗೆ ಇದೀಗ ಹೆಚ್ಚುವಾರಿಯಾಗಿ ನೀಡಲಾಗಿರುವ ಮಹತ್ವದ ಶಿಕ್ಷಣ ಸಚಿವಾಲಯದ ಜವಾಬ್ದಾರಿಯನ್ನು ನಿಭಾಯಿಸಬೇಕಿದೆ.

ಇದನ್ನೂ ಓದಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ನೀಡಿದ 2 ಪುಟಗಳ ರಾಜೀನಾಮೆ ಪತ್ರದಲ್ಲೇನಿದೆ?

ಪ್ರಹ್ಲಾದ್ ಜೋಶಿಗೆ ಹೆಚ್ಚುವರಿ ಹೊಣೆ

ಕೇಂದ್ರ ಆಹಾರ ಮತ್ತು ನಾಗರೀಕ ಸಚಿವರಾಗಿರೂ ಆಗಿರುವ ಪ್ರಹ್ಲಾದ್ ಜೋಶಿ ಅವರಿಗೆ ಇದೀಗ ಶಿಕ್ಷಣ ಖಾತೆ ಹೆಚ್ಚುವರಿಯಾಗಿ ನೀಡಲಾಗಿದೆ. ಶಿಕ್ಷಣ ಇಲಾಖೆಯ ಜವಾಬ್ದಾರಿ ವಹಿಸಿಕಳ್ಳುವಂತೆ ಪ್ರಹ್ಲಾದ್ ಜೋಶಿ ಅವರಿಗೆ ಖುದ್ದು ಪ್ರಧಾನಿ ನರೇಂದ್ರ ಮೋದಿ ಅವರೇ ನಿರ್ದೇಶನ ನೀಡಿದ್ದಾರೆ. ಕರ್ನಾಟಕದ ಧಾರವಾಡ ಲೋಕಸಭಾ ಕ್ಷೇತ್ರದ ಸಂಸದರಾಗಿರುವ ಪ್ರಹ್ಲಾದ್ ಜೋಶಿ ಅವರು, ಪ್ರಸ್ತುತ ಕೇಂದ್ರ ಸರ್ಕಾರದಲ್ಲಿ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ನವೀಕರಿಸಬಹುದಾದ ಇಂಧನ (MNRE) ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದರ ಜೊತೆಗೆ, ಅವರು ‘ಅಂತರರಾಷ್ಟ್ರೀಯ ಸೌರ ಒಕ್ಕೂಟದ’ (International Solar Alliance) ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.

ಇದೀಗ ದೇಶದ ಶಿಕ್ಷಣ ಕ್ಷೇತ್ರದಲ್ಲಿ ಹಲವು ಪ್ರಮುಖ ಸುಧಾರಣೆಗಳು ಹಾಗೂ ಸವಾಲುಗಳು ಎದುರಾಗಿರುವ ಈ ನಿರ್ಣಾಯಕ ಸಮಯದಲ್ಲಿ ಪ್ರಹ್ಲಾದ್ ಜೋಶಿ ಅವರಿಗೆ ಈ ಮಹತ್ವದ ಶಿಕ್ಷಣ ಖಾತೆಯ ಉಸ್ತುವಾರಿಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.

ನರೇಂದ್ರ ಮೋದಿ ಸರ್ಕಾರದಲ್ಲಿ ಪ್ರಮುಖ ನಾಯಕನಾಗಿ ಗುರುತಿಸಿಕೊಂಡಿರುವ ಪ್ರಹ್ಲಾದ್ ಜೋಶಿ, ಕಳೆದ ಅವಧಿಯಲ್ಲಿ ಕಲ್ಲಿದಲ್ಲು, ಗಣಿ ಹಾಗೂ ಸಂಸದೀಯ ವ್ಯವಹಾರ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಹೀಗಾಗಿ ಅವರಿಗಿರುವ ಅನುಭವದ ಗುರುತಿಸಿ ಹೆಚ್ಚುವರಿಯಾಗಿ ಶಿಕ್ಷಣ ಖಾತೆಯ ಜವಾಬ್ದಾರಿ ವಹಿಸಲಾಗಿದೆ.

ಕೆಲ ದಿನಗಳಿಂದ ಕೇಂದ್ರ ಸಂಪುಟದಲ್ಲಿ ಕೆಲ ಬದಲಾವಣೆಯಾಗಲಿವೆ ಎನ್ನುವ ಚರ್ಚೆಗಳು ನಡೆದಿದ್ದವು. ಕೆಲವು ಸಚಿವರನ್ನು ಕೈಬಿಟ್ಟು ಬೇರೆ ಮುಖಗಳಿಗೆ ಮಣೆಹಾಕಲಾಗುತ್ತದೆ ಎನ್ನುವ ಸುದ್ದಿ ಹರಿದಾಡಿದ್ದವು. ಒಂದು ವೇಳೆ ಅಂತಹ ಬದಲಾವಣೆಗಳು ಆದರೆ ಹೆಚ್ಚುವರಿ ಖಾತೆಯನ್ನು ಹೊಸಬರಿಗೆ ಹಸ್ತಾಂತರಿಸಬಹುದು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:13 pm, Sat, 25 July 26

Follow Us