
ನವದೆಹಲಿ, ಡಿಸೆಂಬರ್ 30: ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲೀದಾ ಜಿಯಾ ಅವರ ಅಂತ್ಯಕ್ರಿಯೆ ಡಿಸೆಂಬರ್ 31ರಂದು ಬಾಂಗ್ಲಾದೇಶದ (Bangladesh) ಢಾಕಾದಲ್ಲಿ ನಡೆಯಲಿದೆ. ಬಾಂಗ್ಲಾದೇಶದ ವಿದೇಶಾಂಗ ಸಚಿವ ಎಸ್. ಜೈಶಂಕರ್ ನಾಳೆ ಖಲೀದಾ ಜಿಯಾ ಅವರ ಅಂತ್ಯಕ್ರಿಯೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಖಲೀದಾ ಜಿಯಾ ದೀರ್ಘಕಾಲದ ಅನಾರೋಗ್ಯದ ನಂತರ ಇಂದು ತಮ್ಮ 80ನೇ ವಯಸ್ಸಿನಲ್ಲಿ ನಿಧನರಾದರು.
ಬಾಂಗ್ಲಾದೇಶದ ಮಾಜಿ ಪ್ರಧಾನಿ ಮತ್ತು ಬಾಂಗ್ಲಾದೇಶ ರಾಷ್ಟ್ರೀಯವಾದಿ ಪಕ್ಷದ ಅಧ್ಯಕ್ಷೆ ಬೇಗಂ ಖಲೀದಾ ಜಿಯಾ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ವಿದೇಶಾಂಗ ಸಚಿವ ಎಸ್. ಜೈಶಂಕರ್ ಬುಧವಾರ ಬಾಂಗ್ಲಾದೇಶಕ್ಕೆ ಭೇಟಿ ನೀಡಲಿದ್ದಾರೆ. ಖಲೀದಾ ಜಿಯಾ ಅವರ ಅಂತ್ಯಕ್ರಿಯೆ ಬುಧವಾರ ನಡೆಯಲಿದ್ದು, ಅವರ ಪತಿ ಮತ್ತು ಮಾಜಿ ಅಧ್ಯಕ್ಷ ಜಿಯಾವುರ್ ರೆಹಮಾನ್ ಅವರ ಸಮಾಧಿಯ ಪಕ್ಕದಲ್ಲಿಯೇ ಅಂತ್ಯಕ್ರಿಯೆ ನಡೆಯಲಿದೆ.
ಇದನ್ನೂ ಓದಿ: Khaleda Zia Death: ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿಯಾಗಿದ್ದ ಖಲೀದಾ ಜಿಯಾ ನಿಧನ
ಖಲೀದಾ ಜಿಯಾ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ (ಬಿಎನ್‌ಪಿ) ದೀರ್ಘಕಾಲದ ನಾಯಕಿ ಮತ್ತು ಮೂರು ಬಾರಿ ಪ್ರಧಾನಿಯಾಗಿದ್ದರು. ಖಲೀದಾ ಜಿಯಾ ಅವರ ನಿಧನಕ್ಕೆ ಗೌರವ ಸಲ್ಲಿಸಲು ಬಾಂಗ್ಲಾದೇಶದಲ್ಲಿ 3 ದಿನಗಳ ಶೋಕಾಚರಣೆಯನ್ನು ಘೋಷಿಸಲಾಗಿದೆ. ಜೊತೆಗೆ ಅವರ ಅಂತ್ಯಕ್ರಿಯೆಯ ದಿನವಾದ ನಾಳೆ ದೇಶಾದ್ಯಂತ ರಜೆಯನ್ನು ಘೋಷಿಸಲಾಗಿದೆ.
ಇದನ್ನೂ ಓದಿ: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ಹತ್ಯೆ; 2 ವಾರಗಳಲ್ಲಿ ಮೂರನೇ ಘಟನೆ
ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲೀದಾ ಜಿಯಾ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ಸೂಚಿಸಿದ್ದು, ನೆರೆಯ ದೇಶದ ಅಭಿವೃದ್ಧಿಗೆ ಹಾಗೂ ಭಾರತ-ಬಾಂಗ್ಲಾದೇಶ ಸಂಬಂಧಗಳಿಗೆ ಅವರು ನೀಡಿದ ಕೊಡುಗೆಗಳು ಸದಾ ಸ್ಮರಣೀಯ ಎಂದು ಹೇಳಿದ್ದಾರೆ. ಖಲೀದಾ ಜಿಯಾ ಅವರ ಕುಟುಂಬ ಮತ್ತು ಬಾಂಗ್ಲಾದೇಶದ ಎಲ್ಲಾ ಜನರಿಗೆ ನಮ್ಮ ಹೃತ್ಪೂರ್ವಕ ಸಂತಾಪಗಳು. ದೇವರು ಅವರ ಕುಟುಂಬಕ್ಕೆ ಈ ದುಃಖದ ಕ್ಷಣವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ನೀಡಲಿ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ