ಸಚಿವರು ಜವಾಬ್ದಾರಿಯಿಂದಿರಬೇಕು; ಸೋಫಿಯಾ ಖುರೇಷಿ ಕುರಿತ ವಿವಾದಾತ್ಮಕ ಹೇಳಿಕೆಗೆ ವಿಜಯ್ ಶಾಗೆ ಸುಪ್ರೀಂ ಕೋರ್ಟ್ ತರಾಟೆ

ಮಧ್ಯಪ್ರದೇಶದ ಸಚಿವ ವಿಜಯ್ ಶಾ ಭಾರತೀಯ ಸೇನೆಯ ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಅವರನ್ನು ಭಯೋತ್ಪಾದಕರ ಸಹೋದರಿ ಎಂದು ಕರೆದಿದ್ದರು. ಈ ಹಿನ್ನೆಲೆಯಲ್ಲಿ ಜಬಲ್ಪುರ್ ಹೈಕೋರ್ಟ್ ಅವರ ವಿರುದ್ಧ ಎಫ್​ಐಆರ್ ದಾಖಲಿಸಲು ಸೂಚಿಸಿತ್ತು. ಬಳಿಕ ವಿಜಯ್ ಶಾ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಇಂದು ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಕೂಡ ವಿಜಯ್ ಶಾ ಅವರನ್ನು ತರಾಟೆಗೆ ತೆಗೆದುಕೊಂಡಿದೆ.

ಸಚಿವರು ಜವಾಬ್ದಾರಿಯಿಂದಿರಬೇಕು; ಸೋಫಿಯಾ ಖುರೇಷಿ ಕುರಿತ ವಿವಾದಾತ್ಮಕ ಹೇಳಿಕೆಗೆ ವಿಜಯ್ ಶಾಗೆ ಸುಪ್ರೀಂ ಕೋರ್ಟ್ ತರಾಟೆ
Vijay Shah

Updated on: May 15, 2025 | 12:40 PM

ನವದೆಹಲಿ, ಮೇ 15: ಭಾರತೀಯ ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ (Sofiya Qureshi) ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಮಧ್ಯಪ್ರದೇಶದ ಕ್ಯಾಬಿನೆಟ್ ಸಚಿವ ವಿಜಯ್ ಶಾ ಅವರನ್ನು ಸುಪ್ರೀಂ ಕೋರ್ಟ್ ಇಂದು ತರಾಟೆಗೆ ತೆಗೆದುಕೊಂಡಿದೆ. ಮಧ್ಯಪ್ರದೇಶ ಹೈಕೋರ್ಟ್ ಮೇ 14ರಂದು ತಮ್ಮ ವಿರುದ್ಧ ಎಫ್‌ಐಆರ್ ದಾಖಲಿಸಲು ಆದೇಶಿಸಿದ್ದ ಆದೇಶದ ವಿರುದ್ಧ ವಿಜಯ್ ಶಾ (Vijay Shah) ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಪಾಕಿಸ್ತಾನದ ವಿರುದ್ಧದ ಆಪರೇಷನ್ ಸಿಂಧೂರ್ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದ ಭಾರತೀಯ ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಮಧ್ಯಪ್ರದೇಶದ ಕ್ಯಾಬಿನೆಟ್ ಸಚಿವ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಕುನ್ವರ್ ವಿಜಯ್ ಶಾ ಅವರನ್ನು ಸುಪ್ರೀಂ ಕೋರ್ಟ್ ಇಂದು ತರಾಟೆಗೆ ತೆಗೆದುಕೊಂಡಿದೆ. ಮಧ್ಯಪ್ರದೇಶ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ವಿಜಯ್ ಶಾ ಸಲ್ಲಿಸಿರುವ ಅರ್ಜಿಯನ್ನು ಮೇ 16ರಂದು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ವಿವಾದಾತ್ಮಕ ಹೇಳಿಕೆಯನ್ನು ಸ್ವಯಂಪ್ರೇರಿತವಾಗಿ ಸ್ವೀಕರಿಸಿದ ಮಧ್ಯಪ್ರದೇಶ ಹೈಕೋರ್ಟ್ ಬುಧವಾರ ಸಚಿವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಪೊಲೀಸರಿಗೆ ಆದೇಶಿಸಿದೆ.

ಭಾರತೀಯ ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ಅವರನ್ನು ಉದ್ದೇಶಿಸಿ ಮಾಡಿದ ವಿವಾದಾತ್ಮಕ ಹೇಳಿಕೆಗಳಿಗೆ ಸಂಬಂಧಿಸಿದಂತೆ ಮಧ್ಯಪ್ರದೇಶದ ಸಚಿವ ವಿಜಯ್ ಶಾ ಅವರನ್ನು ಸುಪ್ರೀಂ ಕೋರ್ಟ್ ಇಂದು ತೀವ್ರವಾಗಿ ಖಂಡಿಸಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು ಸಚಿವರ ಹೇಳಿಕೆಗಳನ್ನು ಸ್ವೀಕಾರಾರ್ಹವಲ್ಲ, ಅದು ಸಂವೇದನಾರಹಿತ ಹೇಳಿಕೆ ಎಂದು ಟೀಕಿಸಿದ್ದಾರೆ. ಸಾಂವಿಧಾನಿಕ ಹುದ್ದೆಗಳನ್ನು ಅಲಂಕರಿಸುವ ವ್ಯಕ್ತಿಗಳು ಭಾಷಣದಲ್ಲಿ ಸಂಯಮವನ್ನು ಹೊಂದಿರಬೇಕು ಎಂದು ಹೇಳಿದ್ದಾರೆ. “ನೀವು ಯಾವ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದೀರಿ? ನೀವು ಸ್ವಲ್ಪ ಸಂವೇದನಾಶೀಲತೆಯನ್ನು ತೋರಿಸಬೇಕು. ಹೋಗಿ ಹೈಕೋರ್ಟ್‌ನಲ್ಲಿ ಕ್ಷಮೆಯಾಚಿಸಿ. ಸಚಿವರು ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಲೆಫ್ಟಿನಂಟ್ ಕರ್ನಲ್ ಸೋಫಿಯಾ ಖುರೇಷಿ ಮಾವನ ಮನೆಗೆ ಕಿಡಿಗೇಡಿಗಳ ದಾಳಿ ವದಂತಿ ಹಿನ್ನೆಲೆ ಪೊಲೀಸ್ ಭದ್ರತೆ

ಇದನ್ನೂ ಓದಿ
ಆಪರೇಷನ್ ಸಿಂಧೂರ್ ಕುರಿತು ಭಾರತೀಯ ಸೇನೆಯಿಂದ ಸುದ್ದಿಗೋಷ್ಠಿ
ಹಿಂದೂ ಮಹಿಳೆಯರ ಕುಂಕುಮ ಅಳಿಸಿದವರಿಗೆ ತಕ್ಕ ಶಾಸ್ತಿಯಾಗಿದೆ ಎಂದ ಸೇನೆ
ಪಾಕ್​ನಲ್ಲಿ ಭಾರತದ ದಾಳಿ ಆರಂಭದಿಂದ ಇಲ್ಲಿಯವರೆಗೆ ಏನೇನಾಯ್ತು?
ಪಾಕಿಸ್ತಾನದ ಈ 9 ಸ್ಥಳಗಳ ಮೇಲೆ ಭಾರತದಿಂದ ದಾಳಿ, ಮನೆ ಬಿಟ್ಟು ಓಡಿದ ಜನರು

ಮಧ್ಯಪ್ರದೇಶ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಸುಪ್ರೀಂ ಕೋರ್ಟ್‌ನಲ್ಲಿ ತಮ್ಮ ಅರ್ಜಿಯ ತ್ವರಿತ ವಿಚಾರಣೆಗೆ ವಿಜಯ್ ಶಾ ಒತ್ತಾಯಿಸಿದ್ದರು. ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ಪ್ರಾರಂಭಿಸಲು ಹೈಕೋರ್ಟ್ ನೀಡಿದ ನಿರ್ದೇಶನಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿತು. “ಒಂದು ದಿನದಲ್ಲಿ ನಿಮಗೆ ಏನೂ ಆಗುವುದಿಲ್ಲ. ನೀವು ಯಾರೆಂದು ನಿಮಗೆ ತಿಳಿದಿರಬೇಕು” ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಬಂಧನದಿಂದ ಮಧ್ಯಂತರ ರಕ್ಷಣೆಗಾಗಿ ಸಲ್ಲಿಸಲಾದ ಅರ್ಜಿಯನ್ನು ತಿರಸ್ಕರಿಸಿದೆ. ಸುಪ್ರೀಂ ಕೋರ್ಟ್ ಶುಕ್ರವಾರ ಅರ್ಜಿಯನ್ನು ಆಲಿಸಲು ಒಪ್ಪಿಕೊಂಡಿತು.

ಹೈಕೋರ್ಟ್ ಆದೇಶದ ನಂತರ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 152, 196(1)(ಬಿ), ಮತ್ತು 197(1)(ಸಿ) ಅಡಿಯಲ್ಲಿ ಸಚಿವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಹೈಕೋರ್ಟ್‌ನ ವಿಭಾಗೀಯ ಪೀಠವು ಅವರ ವಿರುದ್ಧ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡು ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ತಕ್ಷಣ ಎಫ್‌ಐಆರ್ ದಾಖಲಿಸುವಂತೆ ಸೂಚಿಸಿದೆ.

ಇದನ್ನೂ ಓದಿ: ಕರ್ನಲ್ ಸೋಫಿಯಾ ಖುರೇಷಿ ಕುರಿತ ಹೇಳಿಕೆ; ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಮೊರೆಹೋದ ಸಚಿವ ವಿಜಯ್ ಶಾ

ವಿಜಯ್ ಶಾ ಹೇಳಿದ್ದೇನು?:

ಭಾರತೀಯ ಸಶಸ್ತ್ರ ಪಡೆಗಳು ಪ್ರಾರಂಭಿಸಿದ ‘ಆಪರೇಷನ್ ಸಿಂಧೂರ್’ ಬಗ್ಗೆ ಕರ್ನಲ್ ಸೋಫಿಯಾ ಖುರೇಷಿ ಪತ್ರಿಕಾಗೋಷ್ಠಿಗಳಲ್ಲಿ ವಿವರಗಳನ್ನು ಹಂಚಿಕೊಂಡಿದ್ದರು. ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಕೂಡ ಈ ಪತ್ರಿಕಾಗೋಷ್ಠಿಗಳಲ್ಲಿ ಅವರೊಂದಿಗೆ ಇದ್ದರು. ಈ ಹಿನ್ನೆಲೆಯಲ್ಲಿ ಬುಧವಾರ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಸಚಿವ ವಿಜಯ್ ಶಾ, “ಪಾಕಿಸ್ತಾನದ ಭಯೋತ್ಪಾದಕರು ನಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳ ಸಿಂಧೂರವನ್ನು ಅಳಿಸಿದ್ದಾರೆ. ಅದಕ್ಕೆ ಪ್ರತಿಯಾಗಿ ನಾವು ಅವರ ಸಹೋದರಿಯನ್ನು ಮುಂದಿಟ್ಟುಕೊಂಡು ತಕ್ಕ ತಿರುಗೇಟು ನೀಡಿದ್ದೇವೆ. ಅವರು ಹಿಂದೂಗಳನ್ನು ವಿವಸ್ತ್ರಗೊಳಿಸಿ ಕೊಂದರು. ಅವರಿಗೆ ಉತ್ತರ ನೀಡಲು ಮೋದಿ ಅವರ ಸಹೋದರಿಯನ್ನೇ ಕಳುಹಿಸಿದರು. ನಾವು ಪಾಕಿಸ್ತಾನದವರನ್ನು ವಿವಸ್ತ್ರಗೊಳಿಸಲು ಸಾಧ್ಯವಾಗಲಿಲ್ಲ. ಆದ್ದರಿಂದ ನಾವು ಅವರ ಸಮುದಾಯದ ಮಗಳನ್ನು ಅವರ ಮೇಲಿನ ದಾಳಿಗೆ ಕಳುಹಿಸಿದ್ದೇವೆ. ನಿಮ್ಮದೇ ಸಮುದಾಯದ ಸಹೋದರಿ ನಿಮ್ಮನ್ನು ವಿವಸ್ತ್ರಗೊಳಿಸುತ್ತಾಳೆ. ನಿಮ್ಮ ಜಾತಿಯ ಹೆಣ್ಣುಮಕ್ಕಳನ್ನು ಸೇಡು ತೀರಿಸಿಕೊಳ್ಳಲು ಪಾಕಿಸ್ತಾನಕ್ಕೆ ಕಳುಹಿಸಬಹುದು ಎಂದು ಮೋದಿ ಸಾಬೀತುಪಡಿಸಿದ್ದಾರೆ” ಎಂದು ಹೇಳಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 12:39 pm, Thu, 15 May 25