Take Yoga Break At Chair: ಕೇಂದ್ರ ಉದ್ಯೋಗಿಗಳಿಗೆ ಕುರ್ಚಿಯಲ್ಲಿ ಯೋಗ ಮಾಡಲು ಹೊಸ ಯೋಗ ಪ್ರೋಟೋಕಾಲ್ ಪರಿಚಯಿಸಿದ ಆಯುಷ್ ಸಚಿವಾಲಯ

ಕೇಂದ್ರ ಸರ್ಕಾರವು ತನ್ನ ಉದ್ಯೋಗಿಗಳಿಗೆ ಒತ್ತಡವನ್ನು ಕಡಿಮೆ ಮಾಡಲು, ರಿಫ್ರೆಶ್ ಮೂಡ್​​ನಲ್ಲಿರಲು ಮತ್ತು ತಮ್ಮ ಕೆಲಸದ ಮೇಲೆ ಗಮನ ನೀಡಲು 'ವೈ-ಬ್ರೇಕ್ - ಯೋಗ ಅಟ್ ಆಫೀಸ್ ಚೇರ್' ನ್ನು (Take Yoga Break At Chair) ತೆಗೆದುಕೊಳ್ಳುವಂತೆ ಕೇಳಿಕೊಂಡಿದೆ.

Take Yoga Break At Chair:  ಕೇಂದ್ರ ಉದ್ಯೋಗಿಗಳಿಗೆ ಕುರ್ಚಿಯಲ್ಲಿ ಯೋಗ ಮಾಡಲು ಹೊಸ ಯೋಗ ಪ್ರೋಟೋಕಾಲ್ ಪರಿಚಯಿಸಿದ ಆಯುಷ್ ಸಚಿವಾಲಯ
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on:Jun 13, 2023 | 1:59 PM

ದೆಹಲಿ: ಕೇಂದ್ರ ಸರ್ಕಾರವು ತನ್ನ ಉದ್ಯೋಗಿಗಳಿಗೆ ಒತ್ತಡವನ್ನು ಕಡಿಮೆ ಮಾಡಲು, ರಿಫ್ರೆಶ್ ಮೂಡ್​​ನಲ್ಲಿರಲು ಮತ್ತು ತಮ್ಮ ಕೆಲಸದ ಮೇಲೆ ಗಮನ ನೀಡಲು ‘ವೈ-ಬ್ರೇಕ್ – ಯೋಗ ಅಟ್ ಆಫೀಸ್ ಚೇರ್‘ ನ್ನು (Take Yoga Break At Chair) ತೆಗೆದುಕೊಳ್ಳುವಂತೆ ಕೇಳಿಕೊಂಡಿದೆ. ಕೇಂದ್ರ ಸಿಬ್ಬಂದಿ ಸಚಿವಾಲಯವು ಹೊರಡಿಸಿರುವ ಆದೇಶದಂತೆ ಎಲ್ಲಾ ಕೇಂದ್ರ ಸರ್ಕಾರದ ಸಚಿವಾಲಯಗಳು/ಇಲಾಖೆಗಳು ಕೆಲಸದ ಸ್ಥಳದಲ್ಲಿ ಉದ್ಯೋಗಿಗಳಿಗೆ ಈ ಹೊಸ ಯೋಗ ಪ್ರೋಟೋಕಾಲ್​​ನ್ನು ಅಳವಡಿಸಿಕೊಳ್ಳಲು ಮತ್ತು ಇದರ ಬಗ್ಗೆ ಜಾಗೃತಿ ಮೂಡಿಸುವಂತೆ ಮಾಡಲು ಆದೇಶ ನೀಡಿದೆ. ವೈ-ಬ್ರೇಕ್ ಅಟ್ ವರ್ಕ್‌ಪ್ಲೇಸ್​​ನ್ನು ಆಯುಷ್ ಸಚಿವಾಲಯವು ಪರಿಚಯಿಸಿದೆ, ಇದು ಕೆಲಸದ ಸ್ಥಳದಲ್ಲಿ ಒತ್ತಡ, ರಿಫ್ರೆಶ್ ಮೂಡ್​​ ಮತ್ತು ಕೆಲಸದ ಕಡೆ ಹೆಚ್ಚು ಗಮನ ನೀಡಲು ಅವಕಾಶ ಮಾಡುತ್ತದೆ ಎಂದು ಹೇಳಿದೆ. ಇದರಿಂದ ಉದ್ಯೋಗಿಗಳ ಆರೋಗ್ಯದ ಮೇಲೆ ಒಳ್ಳೆಯ ಪರಿಣಾಮವನ್ನು ಉಂಟು ಮಾಡುತ್ತದೆ. ಮೊರಾರ್ಜಿ ದೇಸಾಯಿ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಯೋಗ ಮತ್ತು ಸಚಿವಾಲಯದ ಸಿಬ್ಬಂದಿಗಳಿಗೆ ಒತ್ತಡ ಕೆಲಸದ ನಡುವೆ ಯೋಗಾಭ್ಯಾಸ ಮಾಡಲು ಸಾಧ್ಯವಾಗದ ಕಾರಣ ಆಯುಷ್ ಈ ಹೊಸ ವೈಶಿಷ್ಟ್ಯಗಳನ್ನು ಪರಿಚಯಸಿದೆ.

ಅಧಿಕಾರಿಗಳು ಈಗ ತಮ್ಮ ಕಚೇರಿಯ ಕುರ್ಚಿಯಲ್ಲಿ ಕುಳಿತುಕೊಂಡು “ವೈ-ಬ್ರೇಕ್ ವರ್ಕ್‌ಪ್ಲೇಸ್ ಯೋಗ” ಎಂಬ ಅಲ್ಪಾವಧಿಯ ಯೋಗವನ್ನು ಕುರ್ಚಿಯಲ್ಲಿ ಅಭ್ಯಾಸ ಮಾಡುವ ಮೂಲಕ ತಮ್ಮ ಆರೋಗ್ಯವನ್ನು ಕಾಪಾಡಬಹುದು ಎಂದು ಜೂನ್ 12 ರಂದು (ಸೋಮವಾರ) ಆದೇಶದಲ್ಲಿ ತಿಳಿಸಲಾಗಿದೆ. ಯೋಗ ಅಟ್ ಚೇರ್​​ಗಳನ್ನು ತಮ್ಮ ಎಲ್ಲ ಉದ್ಯೋಗಿಗಳು ಅಳವಡಿಸಿಕೊಳ್ಳುವಂತೆ ಕೇಂದ್ರ ಸರ್ಕಾರವು ಆದೇಶ ನೀಡಿದ್ದು, ಈ ಬಗ್ಗೆ ಎಲ್ಲರಿಗೂ ಜಾಗೃತಿ ಮೂಡಿಸುವಂತೆ ಕೇಳಿಕೊಂಡಿದೆ.

ಇದನ್ನೂ ಓದಿ:Yoga: ಒತ್ತಡ ಹೆಚ್ಚಾದಾಗ ನೀವು ಈ 4 ಯೋಗಾಸನಗಳನ್ನು ಮಾಡಿ

ಈ ಚೇರ್​ ಬಗ್ಗೆ ಈ YouTube ಲಿಂಕ್​​​ನಲ್ಲಿ ನೋಡಬಹುದು https://youtu.be/1qQQ3yUjnyM, https://youtu.be/2zBEUqc7nCc, https://youtu.be/aqYJR8HnSJI, https://youtu.be/I8YBnxWjHbg, ಮತ್ತು ಯೋಗ ಪೋರ್ಟಲ್ ಈ YouTube ಲಿಂಕ್​ಗೆ ಹೋಗಿ https://yoga.ayush.gov.in/Y-Break/

ಇದು ಕೆಲಸದಿಂದ ವಿರಾಮವನ್ನು ತೆಗೆದುಕೊಳ್ಳುವ ಸಮಯದಲ್ಲಿ ಇದನ್ನು ಮಾಡಬಹುದು. ಇದು ಕೆಲವು ಸರಳ ಯೋಗ ಅಭ್ಯಾಸಗಳನ್ನು ಒಳಗೊಂಡಿದೆ, ಇದರಲ್ಲಿ ‘ಆಸನಗಳು’ (ಭಂಗಿಗಳು), ‘ಪ್ರಾಣಾಯಾಮ’ (ಉಸಿರಾಟದ ತಂತ್ರಗಳು) ಮತ್ತು ‘ಧ್ಯಾನ’ ಗಳನ್ನು ಒಳಗೊಂಡಿದೆ. ಇದನ್ನು ಪ್ರಖ್ಯಾತ ತಜ್ಞರು ಅಭಿವೃದ್ಧಿಪಡಿಸಲಾಗಿದೆ. ಈ ಬಗ್ಗೆ ಆಯುಷ್ ಸಚಿವಾಲಯದ ವೆಬ್‌ಸೈಟ್‌ನಲ್ಲಿ ವಿವರಗಳನ್ನು ನೀಡಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:57 am, Tue, 13 June 23

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ