AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Monkeypox ಮಂಕಿಪಾಕ್ಸ್ ಕಾಯಿಲೆ ಬಗ್ಗೆ ಮಾರ್ಗಸೂಚಿ ಪ್ರಕಟಿಸಿದ ಕೇಂದ್ರ ಆರೋಗ್ಯ ಸಚಿವಾಲಯ

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಕಿಪಾಕ್ಸ್ ಕಾಯಿಲೆಯ ಸಾಮಾನ್ಯ ಲಕ್ಷಣಗಳು, ರೋಗ ಬಾಧಿತ ವ್ಯಕ್ತಿಯೊಂದಿಗೆ ಸಂಪರ್ಕಹೊಂದಿದ್ದರೆ ಅಂಥಾ ವ್ಯಕ್ತಿಗಳು ಏನು ಮಾಡಬೇಕು ಎಂಬುದರ ಬಗ್ಗೆ ಮಾರ್ಗಸೂಚಿ ಹೊರಡಿಸಿದೆ.

Monkeypox  ಮಂಕಿಪಾಕ್ಸ್ ಕಾಯಿಲೆ ಬಗ್ಗೆ ಮಾರ್ಗಸೂಚಿ ಪ್ರಕಟಿಸಿದ ಕೇಂದ್ರ ಆರೋಗ್ಯ ಸಚಿವಾಲಯ
ಮಂಕಿಪಾಕ್ಸ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Jul 25, 2022 | 2:36 PM

Share

ಭಾರತದಲ್ಲಿ ಮಂಕಿಪಾಕ್ಸ್ (monkeypox) ಪ್ರಕರಣಗಳ ಸಂಖ್ಯೆ ನಾಲ್ಕಕ್ಕೆ ಏರಿದೆ. ಇಲ್ಲಿಯವರೆಗೆ ಕೇರಳದಲ್ಲಿ ಮೂರು ಮತ್ತು ದೆಹಲಿಯಲ್ಲಿ ಒಂದು ಪ್ರಕರಣ ಪತ್ತೆಯಾಗಿದೆ. ಇದೀಗ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ (Ministry of health and family welfare) ಮಂಕಿಪಾಕ್ಸ್ ಕಾಯಿಲೆಯ ಸಾಮಾನ್ಯ ಲಕ್ಷಣಗಳು, ರೋಗ ಬಾಧಿತ ವ್ಯಕ್ತಿಯೊಂದಿಗೆ ಸಂಪರ್ಕಹೊಂದಿದ್ದರೆ ಅಂಥಾ ವ್ಯಕ್ತಿಗಳು ಏನು ಮಾಡಬೇಕು ಎಂಬುದರ ಬಗ್ಗೆ ಮಾರ್ಗಸೂಚಿ ಹೊರಡಿಸಿದೆ. ಮಂಕಿಪಾಕ್ಸ್​​ನಿಂದ ನೀವು ಸುರಕ್ಷಿತರಾಗಿರಿ. ರೋಗಕ್ಕೆ ಕಾರಣ ಮತ್ತು ರೋಗ ಲಕ್ಷಣಗಳ ಬಗ್ಗೆ ಅರಿತು ಸೋಂಕು ಬಾಧಿಕರಾಗದಂತೆ ಎಚ್ಚರವಹಿಸಿ ಎಂದು ಆರೋಗ್ಯ ಸಚಿವಾಲಯ ಭಾನುವಾರ ಟ್ವಿಟರ್ ಹ್ಯಾಂಡಲ್ ನಲ್ಲಿ ಮಾರ್ಗಸೂಚಿ ಪ್ರಕಟಿಸಿದೆ.

ರೋಗ ಲಕ್ಷಣಗಳು

ಜ್ವರ, ಚರ್ಮದ ಮೇಲೆ ದದ್ದುಗಳು ( ಇವುಗಳು ಮುಖದಲ್ಲಿ ಆರಂಭವಾಗಿ ಆಮೇಲೆ ತೋಳು, ಕಾಲು, ಅಂಗೈ ಮತ್ತು ಹಿಮ್ಮಡಿಗೂ ಹರಡುತ್ತದೆ).

ದುಗ್ಧರಸ ಗ್ರಂಥಿಯ ಹಿರಿದಾಗುವಿಕೆ

ತಲೆನೋವು, ಮಾಂಸಖಂಡಗಳ ನೋವು ಅಥವಾ ಬಳಲಿಕೆ

ಕೆಮ್ಮು, ಗಂಟಲಲ್ಲಿ ನೋವು

ರೋಗ ಬಾಧಿತ ಅಥವಾ ಸೋಂಕಿತರೆಂದು ಶಂಕಿತ ವ್ಯಕ್ತಿಗಳ ಸಂಪರ್ಕಕ್ಕೆ ಬಂದರೆ ಏನು ಮಾಡಬೇಕು?

ಯಾವುದೇ ವ್ಯಕ್ತಿ ಕಳೆದ 21ದಿನಗಳಲ್ಲಿ ರೋಗಬಾಧಿತ ಅಥವಾ ಸೋಂಕಿತರೆಂದು ಶಂಕಿತ ವ್ಯಕ್ತಿಯ ಸಂಪರ್ಕಕ್ಕೆ ಬಂದಿದ್ದರೆ ಅವರು ಆರೋಗ್ಯವನ್ನು ಸೂಕ್ಷ್ಮವಾಗಿ ಗಮನಿಸಬೇಕು. ಅವರಲ್ಲಿ ಯಾವುದಾದರೂ ರೋಗ ಲಕ್ಷಣಗಳು ಕಂಡು ಬಂದರೆ ತಕ್ಷಣವೇ ವೈದ್ಯಕೀಯ ಸಲಹೆ ಪಡೆಯಬೇಕು.

ಉನ್ನತ ಮಟ್ಟದ ಸಭೆ ನಡೆಸಿದ ಕೇಂದ್ರ ಸರ್ಕಾರ

ದೇಶದಲ್ಲಿ ನಾಲ್ಕನೇ ಮಂಕಿಪಾಕ್ಸ್ ಪ್ರಕರಣ ಪತ್ತೆಯಾದ ಬಳಿಕ ಕೇಂದ್ರ ಸರ್ಕಾರ ಭಾನುವಾರ ಉನ್ನತ ಮಟ್ಟದ ಅವಲೋಕನ ಸಭೆ ನಡೆಸಿದೆ. ನಾಲ್ಕನೇ ಪ್ರಕರಣದಲ್ಲಿ ಯಾವುದೇ ಪ್ರಯಾಣದ ಹಿಸ್ಟರಿ ಇಲ್ಲದ ವ್ಯಕ್ತಿಗೆ ಸೋಂಕು ತಗಲಿದೆ. ಕೇಂದ್ರ ಸರ್ಕಾರದ ಉನ್ನತ ಮಟ್ಟದ ಸಭೆಯ ನೇತೃತ್ವವನ್ನು ಆರೋಗ್ಯ ಸೇವೆಗಳ ಮಹಾ ನಿರ್ದೇಶನಾಲಯ ವಹಿಸಿದ್ದು, ಆರೋಗ್ಯ ಸಚಿವಾಲಯ, ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್ (NCDC) ಮತ್ತು ಐಸಿಎಂಆರ್ ಭಾಗವಹಿಸಿದೆ.

ರೋಗಿಯು ಲೋಕ ನಾಯಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಇತ್ತೀಚೆಗೆ ಹಿಮಾಚಲ ಪ್ರದೇಶದ ಮನಾಲಿಯಲ್ಲಿನ ಸ್ಟಾಗ್ ಪಾರ್ಟಿಯಲ್ಲಿ ಭಾಗಿಯಾಗಿದ್ದರು ಎಂದು ಅಧಿಕಾರಿಗಳು ಪಿಟಿಐಗೆ ಹೇಳಿದ್ದಾರೆ. ಪಶ್ಚಿಮ ಬಂಗಾಳದ ಈ ವ್ಯಕ್ತಿಯನ್ನು ಆಸ್ಪತ್ರೆಯಲ್ಲಿ ಮೂರು ದಿನ ಐಸೋಲೇಟ್ ಮಾಡಿದಾಗ ಅವರಲ್ಲಿ ರೋಗ ಲಕ್ಷಣ ಕಾಣಿಸಿತ್ತು. ಈ ವ್ಯಕ್ತಿಯ ಮಾದರಿಯನ್ನು ಶನಿವಾರ ನ್ಯಾಷನಲ್ ಇನ್ಸಿಟ್ಯೂಟ್ ಆಫ ವೈರಾಲಜಿ(NIV) ಪುಣೆಗೆ ಕಳುಹಿಸಿದ್ದು, ಅಲ್ಲಿ ಅದು ಪಾಸಿಟಿವ್ ಎಂದು ತೋರಿಸಿತ್ತು ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಧಿಕಾರಿಗಳು ಹೇಳಿದ್ದಾರೆ. ಸೋಂಕಿತ ವ್ಯಕ್ತಿಯ ಸಂಪರ್ಕಕ್ಕೆ ಬಂದವರನ್ನೂ ಕ್ವಾರಂಟೈನ್​​ನಲ್ಲಿರಿಸಲಾಗಿದೆ ಎಂದು ಆರೋಗ್ಯ ಸಚಿವಾಲಯದ ಹೇಳಿಕೆ ತಿಳಿಸಿದೆ.

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ