ಯುಎಪಿಎ ಅಡಿಯಲ್ಲಿ ಗೋಲ್ಡಿ ಬ್ರಾರ್‌ನ್ನು ಉಗ್ರ ಎಂದು ಘೋಷಿಸಿದ ಕೇಂದ್ರ ಸರ್ಕಾರ

ಗೋಲ್ಡಿ ಬ್ರಾರ್ ಎಂದೇ ಜನಪ್ರಿಯರಾಗಿರುವ ಸತೀಂದರ್ಜಿತ್ ಸಿಂಗ್ 2017 ರಲ್ಲಿ ವಿದ್ಯಾರ್ಥಿ ವೀಸಾದಲ್ಲಿ ಕೆನಡಾಕ್ಕೆ ಹೋಗಿದ್ದ.ಈತ ಕೊಲೆ, ಸುಲಿಗೆ ಸೇರಿದಂತೆ ತನ್ನ ಅಪರಾಧ ಚಟುವಟಿಕೆಗಳನ್ನು ಅಲ್ಲಿಂದಲೇ ನಡೆಸುತ್ತಿದ್ದ. ಈತ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ನಿಕಟ ಸಹಚರ.

ಯುಎಪಿಎ ಅಡಿಯಲ್ಲಿ ಗೋಲ್ಡಿ ಬ್ರಾರ್‌ನ್ನು ಉಗ್ರ ಎಂದು ಘೋಷಿಸಿದ ಕೇಂದ್ರ ಸರ್ಕಾರ
ಗೋಲ್ಡಿ ಬ್ರಾರ್
Follow us
ರಶ್ಮಿ ಕಲ್ಲಕಟ್ಟ
|

Updated on: Jan 01, 2024 | 7:04 PM

ದೆಹಲಿ ಜನವರಿ 01: ಗೃಹ ವ್ಯವಹಾರಗಳ ಸಚಿವಾಲಯವು ಕೆನಡಾ (Canada) ಮೂಲದ ಗ್ಯಾಂಗ್​​ಸ್ಟರ್ ಗೋಲ್ಡಿ ಬ್ರಾರ್​​ನ್ನು (Goldy Brar) ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ (UAPA) ಅಡಿಯಲ್ಲಿ ಭಯೋತ್ಪಾದಕ ಎಂದು ಘೋಷಿಸಿದೆ. ಭಾರತೀಯ ರಾಪ್ ಸ್ಟಾರ್ ಮತ್ತು ಕಾಂಗ್ರೆಸ್ ರಾಜಕಾರಣಿ, ಸಿಧು ಮೂಸೆವಾಲಾ ಹತ್ಯೆಯ ಹೊಣೆಗಾರಿಕೆಯನ್ನು ಬ್ರಾರ್ ವಹಿಸಿಕೊಂಡಿದ್ದ. ಗೋಲ್ಡಿ ಬ್ರಾರ್ ಎಂದೇ ಜನಪ್ರಿಯರಾಗಿರುವ ಸತೀಂದರ್ಜಿತ್ ಸಿಂಗ್ 2017 ರಲ್ಲಿ ವಿದ್ಯಾರ್ಥಿ ವೀಸಾದಲ್ಲಿ ಕೆನಡಾಕ್ಕೆ ಹೋಗಿದ್ದ.ಈತ ಕೊಲೆ, ಸುಲಿಗೆ ಸೇರಿದಂತೆ ತನ್ನ ಅಪರಾಧ ಚಟುವಟಿಕೆಗಳನ್ನು ಅಲ್ಲಿಂದಲೇ ನಡೆಸುತ್ತಿದ್ದ. ಈತ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ನಿಕಟ ಸಹಚರ.

11.04.1994 ರಂದು ಶಂಶೇರ್ ಸಿಂಗ್ ಮತ್ತು ಪ್ರೀತ್ಪಾಲ್ ಕೌರ್ ಅವರ ಪುತ್ರನಾಗಿ  ಜನಿಸಿದ ಸತೀಂದರ್ಜಿತ್ ಸಿಂಗ್ ಅಲಿಯಾಸ್ ಗೋಲ್ಡಿ ಬ್ರಾರ್ ಪ್ರಸ್ತುತ ಕೆನಡಾದ ಬ್ರಾಂಪ್ಟನ್‌ನಲ್ಲಿ ವಾಸಿಸುತ್ತಿದ್ದಾನೆ ಎಂದ ಕೇಂದ್ರ ಈತ ಖಲಿಸ್ತಾನ್ ಪರ ಭಯೋತ್ಪಾದಕ ಗುಂಪು ಬಬ್ಬರ್ ಖಾಲ್ಸಾದೊಂದಿಗೆ ಸಂಬಂಧ ಹೊಂದಿದ್ದಾನೆ ಎಂದಿದೆ.

ಗಡಿಯಾಚೆಗಿನ ಏಜೆನ್ಸಿಯ ಬೆಂಬಲವಿರುವ ಗೋಲ್ಡಿ ಬ್ರಾರ್ ಅನೇಕ ಹತ್ಯೆಗಳಲ್ಲಿ ತೊಡಗಿಸಿಕೊಂಡಿದ್ದಾನೆ ಮತ್ತು “ಆಮೂಲಾಗ್ರ ಸಿದ್ಧಾಂತವನ್ನು ಪ್ರತಿಪಾದಿಸುತ್ತಾನೆ. ರಾಷ್ಟ್ರೀಯವಾದಿ ಪರ ನಾಯಕರಿಗೆ ಬೆದರಿಕೆ ಕರೆಗಳನ್ನು ಮಾಡುವಲ್ಲಿ ಕಾಣಿಸಿಕೊಂಡಿದ್ದಾನೆ. ಬೃಹತ್ ಮೊತ್ತಕ್ಕಾಗಿ ಒತ್ತಾಯಿಸುತ್ತಾನೆ ಮತ್ತು ವಿವಿಧ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ಹತ್ಯೆಗಳ ಹೊಣೆಗಳನ್ನು ಹೊತ್ತುಕೊಳ್ಳುತ್ತಾನೆ.

ಗೋಲ್ಡಿ ಬ್ರಾರ್ ಗಡಿಯಾಚೆಯಿಂದ ಡ್ರೋನ್‌ಗಳ ಮೂಲಕ ಉನ್ನತ ದರ್ಜೆಯ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಸ್ಫೋಟಕ ವಸ್ತುಗಳನ್ನು ಕಳ್ಳಸಾಗಣೆಯಲ್ಲಿ ತೊಡಗಿಸಿಕೊಂಡಿದ್ದು ಹಿಂಸಾತ್ಮಕ ಚಟುವಟಿಕೆಗಳಿಗೆ ಅವುಗಳನ್ನು ಪೂರೈಸುತ್ತಿದ್ದಾನೆ ಎಂದು ಕೇಂದ್ರ ಹೇಳಿದೆ.

ಬ್ರಾರ್ ಪಂಜಾಬ್‌ನ ಶಾಂತಿ, ಕೋಮು ಸೌಹಾರ್ದತೆ ಮತ್ತು ಕಾನೂನು ಮತ್ತು ಸುವ್ಯವಸ್ಥೆ ಕದಡಲು “ವಿಧ್ವಂಸಕ ಕೃತ್ಯಗಳು, ಭಯೋತ್ಪಾದನಾ ಘಟಕಗಳನ್ನು ಹೆಚ್ಚಿಸುವುದು, ಉದ್ದೇಶಿತ ಹತ್ಯೆಗಳು ಮತ್ತು ಇತರ ದೇಶ ವಿರೋಧಿ ಚಟುವಟಿಕೆಗಳ ಮೂಲಕ ಸಂಚು ರೂಪಿಸುತ್ತಿದ್ದಾನೆ ಎಂದು ಅದು ಹೇಳಿದೆ. ಕಳೆದ ವರ್ಷ ಕೇಂದ್ರವು ಇಂಟರ್‌ಪೋಲ್‌ಗೆ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಿತ್ತು.

ಇದನ್ನೂ ಓದಿ: ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಗೋಲ್ಡಿ ಬ್ರಾರ್​​ ಬಂಧನ

ಗೋಲ್ಡಿ ಬ್ರಾರ್ ಭಯೋತ್ಪಾದನೆಯಲ್ಲಿ ಭಾಗಿಯಾಗಿದ್ದಾನೆ ಎಂದು ಕೇಂದ್ರ ಸರ್ಕಾರ ನಂಬುತ್ತದೆ. ಆತನನ್ನು ಭಯೋತ್ಪಾದಕರಾಗಿ ಈ ಕಾಯ್ದೆಗೆ ನಾಲ್ಕನೇ ಶೆಡ್ಯೂಲ್‌ನಲ್ಲಿ ಸೇರಿಸಲಾಗುವುದು ಎಂದು ಅದು ಹೇಳಿದೆ. 2022 ರಲ್ಲಿ ಪಂಜಾಬ್‌ನ ಮಾನ್ಸಾದಲ್ಲಿ ಗಾಯಕನ ಹತ್ಯೆಯ ಹೊಣೆಗಾರಿಕೆಯನ್ನು ಬ್ರಾರ್ ವಹಿಸಿಕೊಂಡಿದ್ದ. ಮೂಸ್ ವಾಲಾ ಹತ್ಯೆ ಪ್ರಕರಣದಲ್ಲಿ 1,850 ಪುಟಗಳ ಚಾರ್ಜ್‌ಶೀಟ್‌ನ ಪ್ರಕಾರ, ಬ್ರಾರ್ ಈ ಹತ್ಯೆಯ ಹಿಂದಿನ ಮಾಸ್ಟರ್‌ಮೈಂಡ್. ವಿದ್ಯಾರ್ಥಿ ನಾಯಕ ವಿಕ್ಕಿ ಮಿಡ್ದುಖೇರಾ ಹತ್ಯೆಗೆ ಸೇಡು ತೀರಿಸಿಕೊಳ್ಳಲು ಗಾಯಕನನ್ನು ಕೊಲ್ಲಲಾಯಿತು ಎಂದು ಆತ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಹೇಳಿಕೊಂಡಿದ್ದಾನೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್