Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸ್ಸಾಂ ಬಿಜೆಪಿ ಸಂಸದರ ಮನೆಯಲ್ಲಿ ಅಪ್ರಾಪ್ತ ಬಾಲಕನ ಶವ ಪತ್ತೆ, ತನಿಖೆ ಶುರು

ಅಸ್ಸಾಂನ ಕ್ಯಾಚ್ಯಾರ್ ಜಿಲ್ಲೆಯ ಸಂಸದ ರಾಜ್​ದೀಪ್ ರಾಯ್ ಅವರ ನಿವಾಸದಲ್ಲಿ ಮನೆಗೆಲಸದವರ ಮಗ ಶವವಾಗಿ ಪತ್ತೆಯಾಗಿದ್ದು, ತನಿಖೆ ಶುರುವಾಗಿದೆ. ನೇಣುಬಿಗಿದ ಸ್ಥಿತಿಯಲ್ಲಿ 10 ವರ್ಷದ ಬಾಲಕನ ಶವ ಪತ್ತೆಯಾಗಿದೆ ಎಂದು ಕ್ಯಾಚಾರ್ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಬ್ರತಾ ಸೇನ್ ಪಿಟಿಐಗೆ ತಿಳಿಸಿದ್ದಾರೆ. ಸಂತ್ರಸ್ತೆಯ ತಾಯಿ ಬಿಜೆಪಿ ನಾಯಕನ ಮನೆಯಲ್ಲಿ ಎರಡೂವರೆ ವರ್ಷಗಳಿಂದ ಮನೆಗೆಲಸದವಳಾಗಿ ಕೆಲಸ ಮಾಡುತ್ತಿದ್ದಳು ಮತ್ತು ಅವರು ಮೂಲತಃ ಧೋಲೈ ಪ್ರದೇಶದವರು ಎಂದು ಅವರು ಹೇಳಿದರು.

ಅಸ್ಸಾಂ ಬಿಜೆಪಿ ಸಂಸದರ ಮನೆಯಲ್ಲಿ ಅಪ್ರಾಪ್ತ ಬಾಲಕನ ಶವ ಪತ್ತೆ, ತನಿಖೆ ಶುರು
ರಾಜ್​ದೀಪ್ ರಾಯ್Image Credit source: Hindustan Times
Follow us
ನಯನಾ ರಾಜೀವ್
|

Updated on: Aug 27, 2023 | 9:24 AM

ಅಸ್ಸಾಂನ ಕ್ಯಾಚ್ಯಾರ್ ಜಿಲ್ಲೆಯ ಸಂಸದ ರಾಜ್​ದೀಪ್ ರಾಯ್ ಅವರ ನಿವಾಸದಲ್ಲಿ ಮನೆಗೆಲಸದವರ ಮಗ ಶವವಾಗಿ ಪತ್ತೆಯಾಗಿದ್ದು, ತನಿಖೆ ಶುರುವಾಗಿದೆ. ನೇಣುಬಿಗಿದ ಸ್ಥಿತಿಯಲ್ಲಿ 10 ವರ್ಷದ ಬಾಲಕನ ಶವ ಪತ್ತೆಯಾಗಿದೆ ಎಂದು ಕ್ಯಾಚಾರ್ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಬ್ರತಾ ಸೇನ್ ಪಿಟಿಐಗೆ ತಿಳಿಸಿದ್ದಾರೆ. ಸಂತ್ರಸ್ತೆಯ ತಾಯಿ ಬಿಜೆಪಿ ನಾಯಕನ ಮನೆಯಲ್ಲಿ ಎರಡೂವರೆ ವರ್ಷಗಳಿಂದ ಮನೆಗೆಲಸದವಳಾಗಿ ಕೆಲಸ ಮಾಡುತ್ತಿದ್ದಳು ಮತ್ತು ಅವರು ಮೂಲತಃ ಧೋಲೈ ಪ್ರದೇಶದವರು ಎಂದು ಅವರು ಹೇಳಿದರು.

ಬಾಲಕ 5ನೇ ತರಗತಿಯಲ್ಲಿ ಓದುತ್ತಿದ್ದ, ಶವವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಮರಣೋತ್ತರ ಪರೀಕ್ಷೆಗಾಗಿ ಸಿಲ್ಚಾರ್ ವೈದ್ಯಕೀಯ ಕಾಳೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವು ವರ್ಷಗಳಿಂದ ತನ್ನ ತಾಯಿ ಮತ್ತು ಅಕ್ಕನೊಂದಿಗೆ ಸಂಸದರ ಮನೆಯಲ್ಲಿ ವಾಸಿಸುತ್ತಿದ್ದ ಎಂದು ಅವರ ಕುಟುಂಬದವರು ತಿಳಿಸಿದ್ದಾರೆ.

ತನ್ನ ಇಬ್ಬರು ಮಕ್ಕಳ ಉತ್ತಮ ಶಿಕ್ಷಣಕ್ಕಾಗಿ, ಮಹಿಳೆ ಅವರನ್ನು ಕೆಲವು ವರ್ಷಗಳ ಹಿಂದೆ ಸಿಲ್ಚಾರ್‌ಗೆ ಕರೆತಂದರು. ಬಾಗಿಲು ಒಳಗಿನಿಂದ ಮುಚ್ಚಿತ್ತು, ಬಾಗಿಲು ಮುರಿದು ಒಳಗೆ ತೆರಳಿದಾಗ ಬಾಲಕ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ, ತಕ್ಷಣ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

ಮತ್ತಷ್ಟು ಓದಿ: ಛತ್ತೀಸ್​ಗಢ: 5 ವರ್ಷಗಳಿಂದ ನಾಪತ್ತೆಯಾಗಿದ್ದ ಸುದ್ದಿ ನಿರೂಪಕಿಯ ಹುಡುಕಾಟದ ವೇಳೆ ಶವ ಪತ್ತೆ

ಪ್ರಾಥಮಿಕ ತನಿಖೆಯಲ್ಲಿ ಇದು ಆತ್ಮಹತ್ಯೆ ಎಂದು ಕಂಡುಬರುತ್ತಿದೆ, ವಿಡಿಯೋ ಗೇಮ್ ಆಡಲು ಮೊಬೈಲ್ ಕೇಳಿದಾಗ ತಾಯಿ ಕೊಡದಿದ್ದಕ್ಕೆ ಕೋಪಗೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬುದು ತಿಳಿದುಬಂದಿದೆ.

ಬಾಲಕನ ತಾಯಿ ಆತನ ಸಹೋದರಿಯೊಂದಿಗೆ ದಿನಸಿ ಖರೀದಿಸಲು ಹೋಗಿದ್ದರು, ಅವರು 40 ನಿಮಿಷಗಳ ಕಾಲ ಹೊರಗಿದ್ದರು. ಆ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬುದು ತಿಳಿದುಬಂದಿದೆ.

ಸಂಸದರು ಮಾತನಾಡಿ, ಬಾಲಕ ಓದಿನಲ್ಲಿ ತುಂಬಾ ಚುರುಕು, ಆತನ ಕೈಬರಹವನ್ನು ಕೂಡ ನೋಡಿದ್ದೇನೆ, ಈ ಸಾವು ನನಗೂ ನೋವು ತಂದಿದೆ, ವೈಯಕ್ತಿಕವಾಗಿ ನನಗೂ ನಷ್ಟವಾಗಿದೆ, ನಮ್ಮ ಕುಟುಂಬವು ಆತಂಕ್ಕೊಳಗಾಗಿದೆ ಎಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಹಿಂದಿನಿಂದ ಗುದ್ದಿದ ಮಿನಿಬಸ್ ಚಾಲಕ
ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಹಿಂದಿನಿಂದ ಗುದ್ದಿದ ಮಿನಿಬಸ್ ಚಾಲಕ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?