AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನಲ್ಲಿದ್ದ ಲವರ್​​ ಭೇಟಿಯಾಗಲು 10 ಜೀವಂತ ಗುಂಡುಗಳ ಸಮೇತ ಬಂದ ಅಪ್ರಾಪ್ತೆ: ಮುಂದಾಗಿದ್ದೇನು?

ಉತ್ತರ ಪ್ರದೇಶದ ಗೋಂಡಾ ಜಿಲ್ಲೆಯ ವಿಭಾಗೀಯ ಜೈಲಿನಲ್ಲಿರುವ ತನ್ನ ಪ್ರಿಯಕರನನ್ನು ಭೇಟಿಯಾಗಲು ಬಂದಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಬಳಿ ಬರೋಬ್ಬರಿ 10 ಜೀವಂತ ಗುಂಡುಗಳು ಹಾಗೂ ನಕಲಿ ಆಧಾರ್ ಕಾರ್ಡ್ ಪತ್ತೆಯಾಗಿರುವ ಘಟನೆ ನಡೆದಿದೆ. ವಿಚಾರಣೆ ವೇಳೆ ಬಾಲಕಿ ತನ್ನ ನಿಜವಾದ ಗುರುತನ್ನು ಬಹಿರಂಗಪಡಿಸಿದ್ದಾಳೆ. ಪತ್ತೆಯಾದ ಗುಂಡುಗಳು ತನ್ನ ತಂದೆಯ ಪರವಾನಗಿ ಹೊಂದಿರುವ ಪಿಸ್ತೂಲ್‌ಗೆ ಸೇರಿದ್ದವು ಎಂದು ಆಕೆ ಪೊಲೀಸರಿಗೆ ತಿಳಿಸಿದ್ದಾಳೆ ಎನ್ನಲಾಗಿದೆ.

ಜೈಲಿನಲ್ಲಿದ್ದ ಲವರ್​​ ಭೇಟಿಯಾಗಲು 10 ಜೀವಂತ ಗುಂಡುಗಳ ಸಮೇತ ಬಂದ ಅಪ್ರಾಪ್ತೆ: ಮುಂದಾಗಿದ್ದೇನು?
ಜೈಲಿನಲ್ಲಿದ್ದ ಲವರ್​​ ಭೇಟಿಯಾಗಲು 10 ಜೀವಂತ ಗುಂಡುಗಳ ಸಮೇತ ಬಂದ ಅಪ್ರಾಪ್ತೆImage Credit source: NDTV
ಪ್ರಸನ್ನ ಹೆಗಡೆ
|

Updated on:Aug 09, 2026 | 8:47 AM

Share

ಮುಖ್ಯಾಂಶಗಳು

  • ಅಪ್ರಾಪ್ತ ಬಾಲಕಿಯ ಬಳಿ ಜೀವಂತ ಗುಂಡುಗಳು ಪತ್ತೆ
  • ಉತ್ತರ ಪ್ರದೇಶದ ಗೋಂಡಾದಲ್ಲಿ ನಡೆದಿರುವ ಘಟನೆ
  • ಪ್ರಿಯಕರನ ಭೇಟಿಯಾಗಲು ಜೈಲಿಗೆ ಬಂದಿದ್ದ ಬಾಲಕಿ

ಲಖನೌ, ಆಗಸ್ಟ್​​ 09: ಜೈಲಿನಲ್ಲಿದ್ದ ಪ್ರಿಯಕರನನ್ನು ಭೇಟಿಯಾಗಲು ಬಂದಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಬಳಿ 10 ಜೀವಂತ ಗುಂಡುಗಳು ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಗೋಂಡಾದಲ್ಲಿ ನಡೆದಿದೆ. ಬಾಲಕಿಯ ಬಳಿ ನಕಲಿ ಆಧಾರ್‌ ಕಾರ್ಡ್‌ ಹಾಗೂ ನಗದು ಹಣವೂ ಪತ್ತೆಯಾಗಿದ್ದು, ಆಕೆಯನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ಗೋಂಡಾ ವಿಭಾಗೀಯ ಜೈಲಿನಲ್ಲಿರುವ ಹರಷು ಕಶ್ಯಪ್‌ ಎಂಬ ಕೈದಿಯನ್ನು ಭೇಟಿಯಾಗಲು ಬಾಲಕಿ ಬಂದಿದ್ದಳು ಎಂದು ಜೈಲರ್‌ ಅಫ್ತಾಬ್‌ ಆಲಂ ಅನ್ಸಾರಿ ತಿಳಿಸಿದ್ದಾರೆ.

ಬಾಲಕಿ, ಮತ್ತೋರ್ವ ವಶಕ್ಕೆ

ಜೈಲಿನ ಮುಖ್ಯ ದ್ವಾರದಲ್ಲಿ ಕಡ್ಡಾಯ ಭದ್ರತಾ ತಪಾಸಣೆ ನಡೆಸುವ ವೇಳೆ ಬಾಲಕಿ ನೀಡಿದ ಗುರುತಿನ ವಿವರಗಳಲ್ಲಿ ವ್ಯತ್ಯಾಸ ಕಂಡುಬಂದಿದೆ. ಆಕೆ ತನ್ನ ಆಧಾರ್‌ ಕಾರ್ಡ್‌ನಲ್ಲಿದ್ದ ಹೆಸರಿಗಿಂತ ಭಿನ್ನವಾದ ಹೆಸರನ್ನು ಅಧಿಕಾರಿಗಳಿಗೆ ತಿಳಿಸಿದ್ದಳು. ಇದರಿಂದ ಅನುಮಾನಗೊಂಡ ಭದ್ರತಾ ಸಿಬ್ಬಂದಿ ತಪಾಸಣೆ ನಡೆಸಿದ್ದಾರೆ. ಈ ವೇಳೆ ಬಾಲಕಿಯ ಜೇಬಿನಲ್ಲಿ 10 ಜೀವಂತ ಗುಂಡುಗಳು ಪತ್ತೆಯಾಗಿವೆ ಎಂದು ಜೈಲರ್‌ ತಿಳಿಸಿದ್ದಾರೆ. ಬಳಿಕ ಜೈಲು ಪೊಲೀಸ್‌ ಹೊರಠಾಣೆಯ ಉಸ್ತುವಾರಿಯನ್ನು ಸ್ಥಳಕ್ಕೆ ಕರೆಸಲಾಗಿದ್ದು, ಬಾಲಕಿ ಹಾಗೂ ಆಕೆಯೊಂದಿಗೆ ಬಂದಿದ್ದ ವ್ಯಕ್ತಿಯನ್ನು ವಶಪಡಿಸಿಕೊಂಡ ವಸ್ತುಗಳ ಸಮೇತ ಪೊಲೀಸರಿಗೆ ಒಪ್ಪಿಸಲಾಗಿದೆ.

ಇದನ್ನೂ ಓದಿ: ವಿದೇಶಿ ಉದ್ಯೋಗದ ಆಮಿಷ; ಪೋರ್ಚುಗಲ್‌ನಲ್ಲಿ ಭಾರತೀಯ ಯುವತಿಯನ್ನು ಬಿಯರ್ ಶಾಪ್ ಮಾಲೀಕನಿಗೆ ಮಾರಿದ ಏಜೆನ್ಸಿ!

ವಿಚಾರಣೆ ವೇಳೆ ಬಾಲಕಿ ತನ್ನ ನಿಜವಾದ ಗುರುತನ್ನು ಬಹಿರಂಗಪಡಿಸಿದ್ದಾಳೆ. ಪತ್ತೆಯಾದ ಗುಂಡುಗಳು ತನ್ನ ತಂದೆಯ ಪರವಾನಗಿ ಹೊಂದಿರುವ ಪಿಸ್ತೂಲ್‌ಗೆ ಸೇರಿದ್ದವು ಎಂದು ಆಕೆ ಪೊಲೀಸರಿಗೆ ತಿಳಿಸಿದ್ದಾಳೆ. ತಂದೆಗೆ ಬೇಗ ಕೋಪ ಬರುತ್ತದೆ. ತಾನು ಜೈಲಿನಲ್ಲಿರುವ ಪ್ರಿಯಕರನನ್ನು ಭೇಟಿಯಾಗಲು ಬಂದಿರುವ ವಿಷಯ ತಿಳಿದರೆ ಅವರು ಯಾವುದಾದರೂ ಅಪಾಯಕಾರಿ ನಿರ್ಧಾರ ಕೈಗೊಳ್ಳಬಹುದು ಎಂಬ ಭಯದಿಂದ ಪಿಸ್ತೂಲ್‌ನಲ್ಲಿದ್ದ ಗುಂಡುಗಳನ್ನು ತೆಗೆದುಕೊಂಡು ಬಂದಿದ್ದಾಗಿ ಬಾಲಕಿ ಹೇಳಿದ್ದಾಳೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಜೈಲರ್‌ ತಿಳಿಸಿದ್ದಾರೆ. ಗುಂಡುಗಳು ನಿಜವಾಗಿಯೂ ಆಕೆಯ ತಂದೆಯ ಪರವಾನಗಿ ಹೊಂದಿರುವ ಶಸ್ತ್ರಾಸ್ತ್ರಕ್ಕೆ ಸೇರಿದ್ದವೇ ಹಾಗೂ ನಕಲಿ ಗುರುತಿನ ದಾಖಲೆ ಆಕೆಗೆ ಹೇಗೆ ದೊರೆಯಿತು ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ನ್ಯಾಯ ಸಂಹಿತೆ (BNS) ಹಾಗೂ ಶಸ್ತ್ರಾಸ್ತ್ರ ಕಾಯ್ದೆಯ (Arms Act) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 8:45 am, Sun, 9 August 26

Follow Us
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ