ನಿರ್ಭಯಾ ಮಾದರಿ ಕೇಸ್​: ಬಿಹಾರದಲ್ಲಿ ಚಲಿಸುತ್ತಿದ್ದ ಬಸ್​ನಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ

Gangrape: ಚಲಿಸುತ್ತಿದ್ದ ಬಸ್​ನಲ್ಲಿ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಹೃದಯ ವಿದ್ರಾವಕ ಘಟನೆ ಬಿಹಾರದಲ್ಲಿ ನಡೆದಿದೆ.

ನಿರ್ಭಯಾ ಮಾದರಿ ಕೇಸ್​: ಬಿಹಾರದಲ್ಲಿ ಚಲಿಸುತ್ತಿದ್ದ ಬಸ್​ನಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ
BusImage Credit source: ANI
Follow us
TV9 Web
| Updated By: ನಯನಾ ರಾಜೀವ್

Updated on:Jun 08, 2022 | 11:16 AM

ಪಾಟ್ನಾ: ಚಲಿಸುತ್ತಿದ್ದ ಬಸ್​ನಲ್ಲಿ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಹೃದಯ ವಿದ್ರಾವಕ ಘಟನೆ ಬಿಹಾರದಲ್ಲಿ ನಡೆದಿದೆ. ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯ ಬೆಟ್ಟಯಾದಲ್ಲಿ ಕೃತ್ಯನಡೆದಿದ್ದು, ಬಸ್‌ನಲ್ಲಿ ಅರೆಪ್ರಜ್ಞಾವಸ್ಥೆಯಲ್ಲಿ ಸಂತ್ರಸ್ತ ಬಾಲಕಿ ಪತ್ತೆಯಾಗಿದ್ದಳು. ಚಾಲಕ, ಕ್ಲೀನರ್ ಸೇರಿ ಮೂವರು ಸಾಮೂಹಿಕ ಅತ್ಯಾಚಾರ ನಡೆದಿದ್ದು,ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಖಾಸಗಿ ಬಸ್ ಜಪ್ತಿ ಮಾಡಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸಂತ್ರಸ್ತೆ ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ತಾನು ಪಾಟ್ನಾಗೆ ಬಸ್ ಹತ್ತಿದ್ದೆ, ಆದರೆ ಬಸ್‌ನ ಚಾಲಕ, ಕ್ಲೀನರ್ ಮತ್ತು ಇನ್ನೊಬ್ಬ ವ್ಯಕ್ತಿ ತನ್ನನ್ನು ನೀರು ಕೊಟ್ಟು ಪ್ರಜ್ಞಾಹೀನಗೊಳಿಸಿದರು. ಮತ್ತು ಅತ್ಯಾಚಾರ ಎಸಗಿದರು ಎಂದು ಸಂತ್ರಸ್ತೆ ಹೇಳಿಕೆ ನೀಡಿದ್ದಾಳೆ.

ಸಂತ್ರಸ್ತ ಬಾಲಕಿಯ ಹೇಳಿಕೆ ಮೇರೆಗೆ ತಕ್ಷಣ ಕ್ರಮ ಕೈಗೊಂಡ ಪೊಲೀಸರು ಆರೋಪಿ ಚಾಲಕ ಮತ್ತು ಸಹಾಯಕನನ್ನು ಬಂಧಿಸಿದ್ದಾರೆ. ಘಟನೆ ನಡೆದ ಬಸ್ಸನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳಿಬ್ಬರನ್ನೂ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಬಾಲಕಿಯನ್ನು ಪೊಲೀಸ್ ಕಸ್ಟಡಿಯಲ್ಲಿ ಇರಿಸಲಾಗಿದೆ ಮತ್ತು ಆಕೆಯ ವೈದ್ಯಕೀಯ ಪರೀಕ್ಷೆ ಮಾಡಲಾಗುತ್ತಿದೆ. ಬೆಟ್ಟಿಯಾ ಬಸ್ ನಿಲ್ದಾಣದಲ್ಲಿ ಪಾಟ್ನಾಗೆ ಹೋಗುವ ಬಸ್‌ನಿಂದ ಅಪ್ರಾಪ್ತೆಯನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ರಾತ್ರಿ ಪಾಟ್ನಾಗೆ ತೆರಳಲು ಆಕೆ ಬಸ್ ಹತ್ತಿದ್ದಳು, ಆದರೆ ಆಕೆಯನ್ನು ಒಬ್ಬಂಟಿಯಾಗಿ ನೋಡಿದ ಚಾಲಕ ಮತ್ತು ಸಹಾಯಕರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ನಂತರ ಬಸ್​ ಅನ್ನು ಮುಚ್ಚಿ ಪರಾರಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಮಂಗಳವಾರ ಬೆಳಗ್ಗೆ ಅರೆಪ್ರಜ್ಞಾವಸ್ಥೆಯಲ್ಲಿದ್ದ ಸಂತ್ರಸ್ತ ಬಾಲಕಿಯನ್ನು ಸ್ಥಳೀಯರು ಬಸ್‌ನಿಂದ ಹೊರತೆಗೆದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ನಗರ ಠಾಣೆ ಮತ್ತು ಮಹಿಳಾ ಠಾಣೆಯ ತಂಡ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಇದೇ ವೇಳೆ ತಲೆಮರೆಸಿಕೊಂಡಿರುವ ಮೂರನೇ ಆರೋಪಿಯನ್ನು ಬಂಧಿಸಲು ಪೊಲೀಸರು ಸನ್ನದ್ಧರಾಗಿದ್ದಾರೆ. ಆದರೆ ಸಂತ್ರಸ್ತೆಯ ವೈದ್ಯಕೀಯ ವರದಿ ಮತ್ತು ಆರೋಪಿಯ ವಿಚಾರಣೆಯ ನಂತರವೇ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:13 am, Wed, 8 June 22

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ