ಮನುಸ್ಮೃತಿ ಓದಿ: ಅತ್ಯಾಚಾರ ಸಂತ್ರಸ್ತೆ ಗರ್ಭಪಾತ ಅನುಮತಿಗೆ ಮನವಿ ಮಾಡಿದಾಗ ಕೋರ್ಟ್​ ಹೀಗೆ ಹೇಳಿದ್ದೇಕೆ?

 ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆದುಹೋಗಿದೆ,  7 ತಿಂಗಳ ಗರ್ಭಿಣಿ ಆಕೆ, ಈಗ ತಂದೆಗೆ ವಿಷಯ ತಿಳಿದಿದೆ. ಏಳು ತಿಂಗಳಗರ್ಭವನ್ನು ತೆಗೆಸಲು ಅನುಮತಿ ಕೋರಿ ಕೋರ್ಟ್​ ಮೆಟ್ಟಿಲೇರಿದ್ದಾರೆ. ಆದರೆ ಕೋರ್ಟ್​ ಗರ್ಭಪಾತಕ್ಕೆ ಅನುಮತಿ ನೀದರೆ ಮನುಸ್ಮೃತಿ ಓದುವಂತೆ ಸಲಹೆ ನೀಡಿದೆ.

ಮನುಸ್ಮೃತಿ ಓದಿ: ಅತ್ಯಾಚಾರ ಸಂತ್ರಸ್ತೆ ಗರ್ಭಪಾತ ಅನುಮತಿಗೆ ಮನವಿ ಮಾಡಿದಾಗ ಕೋರ್ಟ್​ ಹೀಗೆ ಹೇಳಿದ್ದೇಕೆ?
ಗರ್ಭಿಣಿ( ಸಾಂದರ್ಭಿಕ ಚಿತ್ರ)
Follow us
ನಯನಾ ರಾಜೀವ್
|

Updated on:Jun 09, 2023 | 9:36 AM

ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆದುಹೋಗಿದೆ,  7 ತಿಂಗಳ ಗರ್ಭಿಣಿ ಆಕೆ, ಈಗ ತಂದೆಗೆ ವಿಷಯ ತಿಳಿದಿದೆ. ಏಳು ತಿಂಗಳಗರ್ಭವನ್ನು ತೆಗೆಸಲು ಅನುಮತಿ ಕೋರಿ ಕೋರ್ಟ್​ ಮೆಟ್ಟಿಲೇರಿದ್ದಾರೆ. ಆದರೆ ಕೋರ್ಟ್​ ಗರ್ಭಪಾತಕ್ಕೆ ಅನುಮತಿ ನೀದರೆ ಮನುಸ್ಮೃತಿ ಓದುವಂತೆ ಸಲಹೆ ನೀಡಿದೆ. ಒಂದಷ್ಟು ವರ್ಷಗಳ ಹಿಂದೆ ಹೆಣ್ಣುಮಕ್ಕಳು-14-15ನೇ ವಯಸ್ಸಿಗೆ ಮದುವೆಯಾಗುತ್ತಿದ್ದರು, 17ನೇ ವಯಸ್ಸಿಗೆ ಮಗುವಿಗೆ ಜನ್ಮ ನೀಡುತ್ತಿದ್ದರು. ನಾವು 21 ನೇ ಶತಮಾನದಲ್ಲಿ ವಾಸಿಸುತ್ತಿದ್ದೇವೆ, ನಿಮ್ಮ ತಾಯಿ ಅಥವಾ ಅಜ್ಜಿಯನ್ನು ಕೇಳಿ, ಮದುವೆಯಾಗಲು ಗರಿಷ್ಠ ವಯಸ್ಸು 14-15 ವರ್ಷಗಳು. ಮಗು 17 ವರ್ಷಕ್ಕಿಂತ ಮುಂಚೆಯೇ ಜನ್ಮ ಪಡೆಯುತ್ತಿತ್ತು ಎಂದು ನ್ಯಾಯಮೂರ್ತಿ ಸಮೀರ್ ಜೆ ದವೆ ಹೇಳಿದ್ದಾರೆ.

ಹುಡುಗರಿಗಿಂತ ಮೊದಲು ಹುಡುಗಿಯರು ಪ್ರಬುದ್ಧರಾಗುತ್ತಾರೆ. ನೀವು ಒಮ್ಮೆ ಮನುಷ್ಮೃತಿಯನ್ನು ಓದಿ ಎಂದು ಹೇಳಿದ್ದಾರೆ. ಅತ್ಯಾಚಾರ ಸಂತ್ರಸ್ತೆಯ ತಂದೆಯ ವಕೀಲರು ಈ ಪ್ರಕರಣದಲ್ಲಿ ಬಾಲಕಿಗೆ ಇನ್ನೂ ಚಿಕ್ಕ ವಯಸ್ಸು ಈ ದೃಷ್ಟಿಯಿಂದ ಗರ್ಭಪಾತಕ್ಕೆ ಅನುಮತಿ ನೀಡಿ ಎಂದು ಕೋರ್ಟ್​ನಲ್ಲಿ ಕೇಳಿಕೊಂಡಿದ್ದರು.

ಭ್ರೂಣವು 7 ತಿಂಗಳಿಗಿಂತ ಹೆಚ್ಚು ವಯಸ್ಸಾಗಿರುವ ಕಾರಣ ಗರ್ಭಪಾತ ಮಾಡಬಹುದೇ ಎಂದು ಈ ವಿಷಯದಲ್ಲಿ ವೈದ್ಯರನ್ನೂ ಸಂಪರ್ಕಿಸಿದ್ದೇವೆ ಎಂದು ಹೈಕೋರ್ಟ್ ಹೇಳಿದೆ. ಅಪ್ರಾಪ್ತ ಮತ್ತು ಭ್ರೂಣ ಇಬ್ಬರ ಜೀವಕ್ಕೂ ಅಪಾಯವಿದ್ದಲ್ಲಿ ಗರ್ಭಪಾತಕ್ಕೆ ಅವಕಾಶ ನೀಡುವಂತಿಲ್ಲ ಎಂದೂ ನ್ಯಾಯಾಲಯ ಸ್ಪಷ್ಟಪಡಿಸಿದೆ.

ಮತ್ತಷ್ಟು ಓದಿ: Bengaluru News: ಸ್ನೇಹಿತನ ಜತೆ ಸೇರಿ ಪ್ರೇಯಸಿ ಮೇಲೆ ಅತ್ಯಾಚಾರ ಎಸಗಿದ ಪ್ರಿಯಕರ

ಅಪ್ರಾಪ್ತ ಬಾಲಕಿಯ ವೈದ್ಯಕೀಯ ಪರೀಕ್ಷೆಗೆ ನ್ಯಾಯಾಲಯ ಆದೇಶಿಸಿದೆ. ವೈದ್ಯರು ವರದಿ ನೀಡಿದ ಬಳಿಕವಷ್ಟೇ ಗುಜರಾತ್ ಹೈಕೋರ್ಟ್ ಈ ವಿಚಾರದಲ್ಲಿ ನಿರ್ಧಾರ ಕೈಗೊಳ್ಳಲಿದೆ. ಪ್ರಕರಣದ ಮುಂದಿನ ವಿಚಾರಣೆ ಜೂನ್ 15 ರಂದು ನಡೆಯಲಿದೆ.

ಏನಿದು ವಿಚಾರ? ಸಂತ್ರಸ್ತ ಪರ ವಕೀಲರ ಪರವಾಗಿ ಪ್ರತಿಕ್ರಿಯಿಸಿ, ಮುಸ್ಲಿಂ ಕಾನೂನಿನ ಪ್ರಕಾರ ಮದುವೆ ವಯಸ್ಸು 13 ವರ್ಷ. ಅಪ್ರಾಪ್ತ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯ ತಂದೆಗೆ 7 ತಿಂಗಳ ನಂತರ ಆಕೆ ಗರ್ಭಿಣಿಯಾಗಿರುವ ವಿಷಯ ತಿಳಿಯಿತು. ಇದಾದ ಬಳಿಕ ಗುಜರಾತ್ ಹೈಕೋರ್ಟ್‌ನಲ್ಲಿ ಅಪ್ರಾಪ್ತ ಬಾಲಕಿಯ ಗರ್ಭಪಾತಕ್ಕೆ ಅರ್ಜಿ ಸಲ್ಲಿಸಿದ್ದರು.

ಈ ಹಿಂದೆ ಭಾರತದಲ್ಲಿ, ಕೆಲವು ಸಂದರ್ಭಗಳಲ್ಲಿ 20 ವಾರಗಳವರೆಗೆ ಗರ್ಭಪಾತಕ್ಕೆ ಅವಕಾಶ ನೀಡಲಾಗಿತ್ತು, ಆದರೆ 2021 ರಲ್ಲಿ ಈ ಕಾನೂನಿನ ತಿದ್ದುಪಡಿಯ ನಂತರ, ಈ ಸಮಯದ ಮಿತಿಯನ್ನು 24 ವಾರಗಳಿಗೆ ಹೆಚ್ಚಿಸಲಾಯಿತು. ಆದಾಗ್ಯೂ, ಕೆಲವು ವಿಶೇಷ ಪ್ರಕರಣಗಳಲ್ಲಿ, 24 ವಾರಗಳ ನಂತರವೂ ಗರ್ಭಪಾತಕ್ಕೆ ನ್ಯಾಯಾಲಯದಿಂದ ಅನುಮತಿ ತೆಗೆದುಕೊಳ್ಳಬಹುದು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:35 am, Fri, 9 June 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ