ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆದುಹೋಗಿದೆ, 7 ತಿಂಗಳ ಗರ್ಭಿಣಿ ಆಕೆ, ಈಗ ತಂದೆಗೆ ವಿಷಯ ತಿಳಿದಿದೆ. ಏಳು ತಿಂಗಳಗರ್ಭವನ್ನು ತೆಗೆಸಲು ಅನುಮತಿ ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಆದರೆ ಕೋರ್ಟ್ ಗರ್ಭಪಾತಕ್ಕೆ ಅನುಮತಿ ನೀದರೆ ಮನುಸ್ಮೃತಿ ಓದುವಂತೆ ಸಲಹೆ ನೀಡಿದೆ.
ಒಂದಷ್ಟು ವರ್ಷಗಳ ಹಿಂದೆ ಹೆಣ್ಣುಮಕ್ಕಳು-14-15ನೇ ವಯಸ್ಸಿಗೆ ಮದುವೆಯಾಗುತ್ತಿದ್ದರು, 17ನೇ ವಯಸ್ಸಿಗೆ ಮಗುವಿಗೆ ಜನ್ಮ ನೀಡುತ್ತಿದ್ದರು.
ನಾವು 21 ನೇ ಶತಮಾನದಲ್ಲಿ ವಾಸಿಸುತ್ತಿದ್ದೇವೆ, ನಿಮ್ಮ ತಾಯಿ ಅಥವಾ ಅಜ್ಜಿಯನ್ನು ಕೇಳಿ, ಮದುವೆಯಾಗಲು ಗರಿಷ್ಠ ವಯಸ್ಸು 14-15 ವರ್ಷಗಳು. ಮಗು 17 ವರ್ಷಕ್ಕಿಂತ ಮುಂಚೆಯೇ ಜನ್ಮ ಪಡೆಯುತ್ತಿತ್ತು ಎಂದು ನ್ಯಾಯಮೂರ್ತಿ ಸಮೀರ್ ಜೆ ದವೆ ಹೇಳಿದ್ದಾರೆ.
ಹುಡುಗರಿಗಿಂತ ಮೊದಲು ಹುಡುಗಿಯರು ಪ್ರಬುದ್ಧರಾಗುತ್ತಾರೆ. ನೀವು ಒಮ್ಮೆ ಮನುಷ್ಮೃತಿಯನ್ನು ಓದಿ ಎಂದು ಹೇಳಿದ್ದಾರೆ. ಅತ್ಯಾಚಾರ ಸಂತ್ರಸ್ತೆಯ ತಂದೆಯ ವಕೀಲರು ಈ ಪ್ರಕರಣದಲ್ಲಿ ಬಾಲಕಿಗೆ ಇನ್ನೂ ಚಿಕ್ಕ ವಯಸ್ಸು ಈ ದೃಷ್ಟಿಯಿಂದ ಗರ್ಭಪಾತಕ್ಕೆ ಅನುಮತಿ ನೀಡಿ ಎಂದು ಕೋರ್ಟ್ನಲ್ಲಿ ಕೇಳಿಕೊಂಡಿದ್ದರು.
ಭ್ರೂಣವು 7 ತಿಂಗಳಿಗಿಂತ ಹೆಚ್ಚು ವಯಸ್ಸಾಗಿರುವ ಕಾರಣ ಗರ್ಭಪಾತ ಮಾಡಬಹುದೇ ಎಂದು ಈ ವಿಷಯದಲ್ಲಿ ವೈದ್ಯರನ್ನೂ ಸಂಪರ್ಕಿಸಿದ್ದೇವೆ ಎಂದು ಹೈಕೋರ್ಟ್ ಹೇಳಿದೆ. ಅಪ್ರಾಪ್ತ ಮತ್ತು ಭ್ರೂಣ ಇಬ್ಬರ ಜೀವಕ್ಕೂ ಅಪಾಯವಿದ್ದಲ್ಲಿ ಗರ್ಭಪಾತಕ್ಕೆ ಅವಕಾಶ ನೀಡುವಂತಿಲ್ಲ ಎಂದೂ ನ್ಯಾಯಾಲಯ ಸ್ಪಷ್ಟಪಡಿಸಿದೆ.
ಮತ್ತಷ್ಟು ಓದಿ: Bengaluru News: ಸ್ನೇಹಿತನ ಜತೆ ಸೇರಿ ಪ್ರೇಯಸಿ ಮೇಲೆ ಅತ್ಯಾಚಾರ ಎಸಗಿದ ಪ್ರಿಯಕರ
ಅಪ್ರಾಪ್ತ ಬಾಲಕಿಯ ವೈದ್ಯಕೀಯ ಪರೀಕ್ಷೆಗೆ ನ್ಯಾಯಾಲಯ ಆದೇಶಿಸಿದೆ. ವೈದ್ಯರು ವರದಿ ನೀಡಿದ ಬಳಿಕವಷ್ಟೇ ಗುಜರಾತ್ ಹೈಕೋರ್ಟ್ ಈ ವಿಚಾರದಲ್ಲಿ ನಿರ್ಧಾರ ಕೈಗೊಳ್ಳಲಿದೆ. ಪ್ರಕರಣದ ಮುಂದಿನ ವಿಚಾರಣೆ ಜೂನ್ 15 ರಂದು ನಡೆಯಲಿದೆ.
ಏನಿದು ವಿಚಾರ?
ಸಂತ್ರಸ್ತ ಪರ ವಕೀಲರ ಪರವಾಗಿ ಪ್ರತಿಕ್ರಿಯಿಸಿ, ಮುಸ್ಲಿಂ ಕಾನೂನಿನ ಪ್ರಕಾರ ಮದುವೆ ವಯಸ್ಸು 13 ವರ್ಷ. ಅಪ್ರಾಪ್ತ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯ ತಂದೆಗೆ 7 ತಿಂಗಳ ನಂತರ ಆಕೆ ಗರ್ಭಿಣಿಯಾಗಿರುವ ವಿಷಯ ತಿಳಿಯಿತು. ಇದಾದ ಬಳಿಕ ಗುಜರಾತ್ ಹೈಕೋರ್ಟ್‌ನಲ್ಲಿ ಅಪ್ರಾಪ್ತ ಬಾಲಕಿಯ ಗರ್ಭಪಾತಕ್ಕೆ ಅರ್ಜಿ ಸಲ್ಲಿಸಿದ್ದರು.
ಈ ಹಿಂದೆ ಭಾರತದಲ್ಲಿ, ಕೆಲವು ಸಂದರ್ಭಗಳಲ್ಲಿ 20 ವಾರಗಳವರೆಗೆ ಗರ್ಭಪಾತಕ್ಕೆ ಅವಕಾಶ ನೀಡಲಾಗಿತ್ತು, ಆದರೆ 2021 ರಲ್ಲಿ ಈ ಕಾನೂನಿನ ತಿದ್ದುಪಡಿಯ ನಂತರ, ಈ ಸಮಯದ ಮಿತಿಯನ್ನು 24 ವಾರಗಳಿಗೆ ಹೆಚ್ಚಿಸಲಾಯಿತು. ಆದಾಗ್ಯೂ, ಕೆಲವು ವಿಶೇಷ ಪ್ರಕರಣಗಳಲ್ಲಿ, 24 ವಾರಗಳ ನಂತರವೂ ಗರ್ಭಪಾತಕ್ಕೆ ನ್ಯಾಯಾಲಯದಿಂದ ಅನುಮತಿ ತೆಗೆದುಕೊಳ್ಳಬಹುದು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 9:35 am, Fri, 9 June 23