AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮಕೃಷ್ಣ ಆಶ್ರಮದ ಮೇಲೆ ದುಷ್ಕರ್ಮಿಗಳಿಂದ ದಾಳಿ, ಸನ್ಯಾಸಿಗಳಿಗೆ ಬಂದೂಕು ತೋರಿಸಿ ಬೆದರಿಕೆ

ರಾಮಕೃಷ್ಣ ಮಿಷನ್ ಆಶ್ರಮದ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದು, ಸನ್ಯಾಸಿಗಳಿಗೆ ಬಂದೂಕು ತೋರಿಸಿ ಬೆದರಿಕೆ ಹಾಕಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

ರಾಮಕೃಷ್ಣ ಆಶ್ರಮದ ಮೇಲೆ ದುಷ್ಕರ್ಮಿಗಳಿಂದ ದಾಳಿ, ಸನ್ಯಾಸಿಗಳಿಗೆ ಬಂದೂಕು ತೋರಿಸಿ ಬೆದರಿಕೆ
ನಯನಾ ರಾಜೀವ್
|

Updated on: May 21, 2024 | 2:09 PM

Share

ಪಶ್ಚಿಮ ಬಂಗಾಳ(West Bengal)ದ ಜಲ್ಪೈಗುರಿ ಜಿಲ್ಲೆಯಲ್ಲಿರುವ ರಾಮಕೃಷ್ಣ ಆಶ್ರಮ(Ramakrishna Ashram)ದ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದು, ಸನ್ಯಾಸಿಗಳಿಗೆ ಬಂದೂಕು ತೋರಿಸಿ ಬೆದರಿಕೆ ಹಾಕಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ದುಷ್ಕರ್ಮಿಗಳು ಸ್ಥಳದಿಂದ ಹೋಗುವಂತೆ ನಮ್ಮ ಮಠಾಧೀಶರು ಮತ್ತು ಇತರ ಸಿಬ್ಬಂದಿಗೆ ಬಂದೂಕು ತೋರಿಸಿ ಬೆದರಿಕೆ ಹಾಕಿದ್ದಾರೆ. ಇದೆಲ್ಲದರ ಹಿಂದೆ ಸ್ಥಳೀಯ ಭೂ ಮಾಫಿಯಾ ಕೈವಾಡವಿದೆ ಎಂದು ಆರೋಪಿಸಲಾಗಿದೆ.

ಬೆಳಗಿನ ಜಾವ 3 ಗಂಟೆಗೆ ಸುಮಾರು 10 ಮಂದಿ ಶಸ್ತ್ರಸಜ್ಜಿತ ಯುವಕರು ನಮ್ಮ ಆಶ್ರಮವನ್ನು ಪ್ರವೇಶಿಸಿದರು ಎಂದು ಮಿಷನ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ . ಅವರು ನೇರವಾಗಿ ಮೊದಲ ಮಹಡಿಗೆ ಹೋದರು ನಮ್ಮ ಹಿರಿಯ ಸನ್ಯಾಸಿಗಳು ಸೇರಿದಂತೆ ಅಲ್ಲಿದ್ದ ಎಂಟು ಮಂದಿಯನ್ನು ಆವರಣದಿಂದ ಹೋಗುವಂತೆ ಬಂದೂಕು ತೋರಿಸಿ ಬೆದರಿಕೆ ಹಾಕಿದ್ದಾರೆ.

ಸಿಸಿಟಿವಿ ಕ್ಯಾಮೆರಾಗಳನ್ನೂ ಒಡೆದಿದ್ದಾರೆ, ಹೋಗುವಾಗ ಗೇಟಿಗೂ ಬೀಗ ಹಾಕಿದ್ದರು. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದಾಗ ಅವರು ಬೀಗ ಒಡೆದು ಸಿಕ್ಕಿಬಿದ್ದವರನ್ನು ಹೊರತೆಗೆದಿದ್ದಾರೆ.

ಮತ್ತಷ್ಟು ಓದಿ: ವೋಟ್ ಬ್ಯಾಂಕ್ ಓಲೈಸಲು ಸನ್ಯಾಸಿಗಳ ಮೇಲೆ ಟಿಎಂಸಿ ದಾಳಿ ನಡೆಸುತ್ತಿದೆ: ಮೋದಿ

ಈಗಾಗಲೇ ಸ್ಥಳೀಯ ರೌಡಿ ಹಾಗೂ ಆತನ ಸಹಚರರ ವಿರುದ್ಧ ಭಕ್ತಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದು, ಭದ್ರತೆ ಒದಗಿಸುವ ಭರವಸೆ ನೀಡಿದ್ದಾರೆ. ಪೊಲೀಸ್ ಮತ್ತು ಆಡಳಿತದ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ ಎಂದಿದ್ದಾರೆ.

ನಿನ್ನೆಯಷ್ಟೇ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಸಂದರ್ಭದಲ್ಲಿ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಸಂತರಲ್ಲಿ ಭಯದ ವಾತಾವರಣ ಸೃಷ್ಟಿಸಲು ಟಿಎಂಸಿ ಯತ್ನಿಸುತ್ತಿದೆ ಎಂದು ಪ್ರಧಾನಿ ಆರೋಪಿಸಿದ್ದರು. ರಾಮಕೃಷ್ಣ ಮಿಷನ್ ಮತ್ತು ಭಾರತ್ ಸೇವಾಶ್ರಮ ಸಂಘದ ಸನ್ಯಾಸಿಗಳಿಗೆ ಸ್ವತಃ ಸಿಎಂ ಮಮತಾ ಬ್ಯಾನರ್ಜಿ ಬೆದರಿಕೆ ಹಾಕುತ್ತಿದ್ದಾರೆ.

ಟಿಎಂಸಿ ಗೂಂಡಾಗಳು ರಾಮಕೃಷ್ಣ ಮಿಷನ್‌ನ ಆಶ್ರಮದ ಮೇಲೆ ದಾಳಿ ಮಾಡುವಷ್ಟು ಧೈರ್ಯಶಾಲಿಯಾಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ