ಅತ್ಯಾಚಾರ ಸಂತ್ರಸ್ತೆಯನ್ನು ಮದುವೆಯಾಗ್ತೀರಾ ಎಂಬ ವಿಚಾರಕ್ಕೆ ಸಂಬಂಧಿಸಿದ ತಪ್ಪು ವರದಿ ಬಗ್ಗೆ ಸುಪ್ರೀಂ ಕೋರ್ಟ್​ ಅಸಮಾಧಾನ

ಮಾರ್ಚ್‌ 1ರಂದು ಸಾಕ್ಷ್ಯ ಕಾಯ್ದೆಯಲ್ಲಿನ ಅಂಶಗಳನ್ನು ಆಧರಿಸಿ, ಆರೋಪಿ ನೀಡಿದ ಮುಚ್ಚಳಿಕೆಯನ್ನು ಉಲ್ಲೇಖಿಸಿದ ನ್ಯಾಯಪೀಠ ಅತ್ಯಾಚಾರ ಸಂತ್ರಸ್ತೆಯನ್ನು ನೀವು ಮದುವೆಯಾಗುತ್ತೀರಾ ಎಂಬ ಪ್ರಶ್ನೆ ಕೇಳಿತ್ತು. ಆದರೆ ಈ ವಿಷಯವನ್ನು ಸಂಪೂರ್ಣ ತಪ್ಪಾಗಿ ವರದಿ ಮಾಡಲಾಗಿದೆ’ ಎಂದು ಪೀಠ ಅಸಮಾಧಾನ ಹೊರಹಾಕಿದೆ.

ಅತ್ಯಾಚಾರ ಸಂತ್ರಸ್ತೆಯನ್ನು ಮದುವೆಯಾಗ್ತೀರಾ ಎಂಬ ವಿಚಾರಕ್ಕೆ ಸಂಬಂಧಿಸಿದ ತಪ್ಪು ವರದಿ ಬಗ್ಗೆ ಸುಪ್ರೀಂ ಕೋರ್ಟ್​ ಅಸಮಾಧಾನ
ಸುಪ್ರೀಂಕೋರ್ಟ್​
Follow us
Skanda
| Updated By: ganapathi bhat

Updated on: Mar 09, 2021 | 11:41 AM

ದೆಹಲಿ: ಅತ್ಯಾಚಾರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಳೆದ ವಾರ ಸುಪ್ರೀಂ ಕೋರ್ಟ್​ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಆಡಿದ್ದಾರೆ ಎನ್ನಲಾದ ಮಾತುಗಳು ದೇಶವ್ಯಾಪಿ ತೀವ್ರ ಚರ್ಚೆಗೆ ಕಾರಣವಾಗಿತ್ತು. ಆದರೆ, ಈ ಕುರಿತು ಮಹಿಳಾ ದಿನಾಚರಣೆಯಂದೇ (ಮಾರ್ಚ್​ 8) ಸ್ಪಷ್ಟನೆ ನೀಡಿರುವ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ ಅವರನ್ನು ಒಳಗೊಂಡ ಪೀಠ ಸದರಿ ಪ್ರಕರಣದಲ್ಲಿ ವಿಚಾರಣೆ ಸಂದರ್ಭದ ಮಾತುಗಳನ್ನು ಸಂಪೂರ್ಣ ತಪ್ಪು ಸ್ವರೂಪದಲ್ಲಿ ವರದಿ ಮಾಡಲಾಗಿದೆ ಎಂದು ತಿಳಿಸಿದೆ.

ಅತ್ಯಾಚಾರ ಸಂತ್ರಸ್ತೆಯನ್ನು ನೀವು ಮದುವೆಯಾಗುತ್ತೀರಾ? ಎಂದು ಆರೋಪಿಯ ಬಳಿ ಕೇಳಿದ್ದೆವಷ್ಟೇ. ಆದರೆ, ಎಲ್ಲಿಯೂ ಆಕೆಯನ್ನು ಮದುವೆಯಾಗಿ ಎಂದು ನಾವು ಆದೇಶಿಸಿಲ್ಲ. ನ್ಯಾಯಾಂಗದ ಗೌರವ ಇರುವುದು ವಕೀಲರ ಕೈಯಲ್ಲಿ ಎಂದು ಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ. ಅತ್ಯಾಚಾರಕ್ಕೊಳಗಾಗಿ 26 ವಾರದ ಗರ್ಭಿಣಿಯಾಗಿರುವ 14 ವರ್ಷದ ಬಾಲಕಿ, ತನ್ನ ಉದರದಲ್ಲಿರುವ ಭ್ರೂಣವನ್ನು ಹೊರತೆಗೆಯಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಇತರ ಇಬ್ಬರು ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ವಿ.ರಾಮಸುಬ್ರಮಣಿಯನ್ ಅವರಿದ್ದ ಪೀಠ ಈ ವಿಚಾರವನ್ನು ಸ್ಪಷ್ಟಪಡಿಸಿದೆ.

ಮಾರ್ಚ್‌ 1ರಂದು ಸಾಕ್ಷ್ಯ ಕಾಯ್ದೆಯಲ್ಲಿನ ಅಂಶಗಳನ್ನು ಆಧರಿಸಿ, ಆರೋಪಿ ನೀಡಿದ ಮುಚ್ಚಳಿಕೆಯನ್ನು ಉಲ್ಲೇಖಿಸಿದ ನ್ಯಾಯಪೀಠ ಅತ್ಯಾಚಾರ ಸಂತ್ರಸ್ತೆಯನ್ನು ನೀವು ಮದುವೆಯಾಗುತ್ತೀರಾ ಎಂಬ ಪ್ರಶ್ನೆ ಕೇಳಿತ್ತು. ಆದರೆ ಈ ವಿಷಯವನ್ನು ಸಂಪೂರ್ಣ ತಪ್ಪಾಗಿ ವರದಿ ಮಾಡಲಾಗಿದೆ’ ಎಂದು ಪೀಠ ಅಸಮಾಧಾನ ಹೊರಹಾಕಿದೆ.

ಮುಖ್ಯ ನ್ಯಾಯಮೂರ್ತಿ ಅವರಿಂದಲೇ ಈ ತೆರನಾದ ಹೇಳಿಕೆ ಬಂದ ಕಾರಣಕ್ಕೆ ದೇಶವ್ಯಾಪಿ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಸಿಪಿಎಂ ಪ್ಯಾಲಿಟ್‌ ಬ್ಯೂರೊ ಸದಸ್ಯೆ ಬೃಂದಾ ಕಾರಟ್‌ ಅವರು ಮುಖ್ಯ ನ್ಯಾಯಮೂರ್ತಿ ತಕ್ಷಣ ತಮ್ಮ ಹೇಳಿಕೆ ಹಿಂಪಡೆಯಬೇಕೆಂದು ಆಗ್ರಹಿಸಿ ಪತ್ರವನ್ನೂ ಬರೆದಿದ್ದರು. ವಿವಿಧ ಸಂಘಟನೆಗಳು, ವ್ಯಕ್ತಿಗಳು ಮುಖ್ಯ ನ್ಯಾಯಮೂರ್ತಿಗಳು ಕ್ಷಮೆ ಕೇಳಬೇಕೆಂದು ಆಗ್ರಹಿಸಿದ್ದರು. ಆದರೆ ವಕೀಲರ ಸಂಘ ಮಾತ್ರ ಮುಖ್ಯ ನ್ಯಾಯಮೂರ್ತಿ ಅವರಿಂದ ಯಾವುದೇ ತಪ್ಪು ಆಗಿಲ್ಲ ಎಂದು ಸಮರ್ಥನೆ ನೀಡಿತ್ತು. ಇದಾದ ಬೆನ್ನಲ್ಲೇ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ ಅವರನ್ನು ಒಳಗೊಂಡ ಪೀಠ ನಾವು ಹೇಳಿರುವುದನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂಬ ಅಸಮಾಧಾನ ವ್ಯಕ್ತಪಡಿಸಿದೆ.

ಇದನ್ನೂ ಓದಿ: ವಿಚ್ಛೇದಿತ ಮಗಳ ಹಕ್ಕುಗಳ ಪರಿಶೀಲನೆಗೆ ಸುಪ್ರೀಂಕೋರ್ಟ್ ಒಪ್ಪಿಗೆ

ಶೇ. 50ಕ್ಕಿಂತ ಹೆಚ್ಚು ಮೀಸಲಾತಿ ಬೇಕಾ? ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಪ್ರಶ್ನೆ