ನವದೆಹಲಿ: ಪ್ರತಿಪಕ್ಷಗಳಿಂದ ತೀವ್ರ ಟೀಕೆಗೆ ಗುರಿಯಾಗಿರುವ ಅಗ್ನಿಪಥ್ ಯೋಜನೆ ಇಂದು ಲೋಕಸಭೆಯಲ್ಲಿ ಕಾಂಗ್ರೆಸ್‌ನ ರಾಹುಲ್ ಗಾಂಧಿ ಮತ್ತು ಕೇಂದ್ರ ಸಚಿವ ರಾಜನಾಥ್ ಸಿಂಗ್ ನಡುವೆ ಬಿಸಿಬಿಸಿ ಚರ್ಚೆಯ ಕೇಂದ್ರವಾಗಿದೆ. ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅಗ್ನಿಪಥ್ ಯೋಜನೆಯ ವಿಚಾರದಲ್ಲಿ ತಪ್ಪು ಮಾಹಿತಿ ನೀಡಿ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದ ಸಚಿವ ರಾಜನಾಥ್ ಸಿಂಗ್, ಸದನದಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡುವುದಾಗಿ ತಿಳಿಸಿದ್ದಾರೆ.
ಲೋಕಸಭಾ ಅಧಿವೇಶನದಲ್ಲಿ ಮಾತನಾಡಿದ ರಾಹುಲ್ ಗಾಂಧಿ ಅಗ್ನಿಪಥ್ ಯೋಜನೆಯು ದೇಶದ ಸೈನಿಕರು ಮತ್ತು ಅವರ ಕುಟುಂಬಗಳ ಆರ್ಥಿಕ ಭದ್ರತೆ ಮತ್ತು ಗೌರವವನ್ನು ಕಸಿದುಕೊಂಡಿದೆ ಎಂದು ಪ್ರತಿಪಾದಿಸಿದ್ದರು. ಈ ಯೋಜನೆಯು ಸರ್ಕಾರದ ಯುವಕರ ವಿರೋಧಿ ಮತ್ತು ರೈತ ವಿರೋಧಿ” ಧೋರಣೆಯನ್ನು ಬಹಿರಂಗಪಡಿಸುತ್ತದೆ ಎಂದು ಅವರು ಆರೋಪಿಸಿದ್ದರು.
ಇದನ್ನೂ ಓದಿ: ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿ ಪೋಸ್ಟ್: ಬಿಜೆಪಿ ಮುಖಂಡ ಸೇರಿ ಇಬ್ಬರ ಬಂಧನ
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಯುವಕರು ಅಗ್ನಿವೀರ ಚಕ್ರವ್ಯೂಹದಲ್ಲಿ ಸಿಕ್ಕಿಬಿದ್ದಿದ್ದಾರೆ ಮತ್ತು ಸರ್ಕಾರ ಯಾವುದೇ ನಿಬಂಧನೆಗಳನ್ನು ಮಾಡಿಲ್ಲ ಎಂದು ಹೇಳಿದ್ದ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಜೆಟ್ ಕುರಿತು ರಾಹುಲ್ ಗಾಂಧಿಯವರು ಹಲವಾರು ತಪ್ಪು ಕಲ್ಪನೆಗಳನ್ನು ಪ್ರಚಾರ ಮಾಡಿದ್ದಾರೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪ್ರತಿಪಾದಿಸಿದ್ದಾರೆ. ರಾಹುಲ್ ಗಾಂಧಿ ಅಗ್ನಿಪಥ್ ಯೋಜನೆಯ ಬಗ್ಗೆ ಸಾರ್ವಜನಿಕರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದಿದ್ದಾರೆ.
WATCH | LoP @RahulGandhi reminds Lok Sabha about the lie the defence minister told on the floor of the house. @rajnathsingh lied that the govt gave ₹1 crore compensation to the Agniveer martyr’s family. He was ably supported by the biased speaker then; he did it again today! pic.twitter.com/czSnwsHvXR
— Congress Kerala (@INCKerala) July 29, 2024
“ರಾಷ್ಟ್ರೀಯ ಭದ್ರತೆಯ ವಿಷಯವು ಸೂಕ್ಷ್ಮವಾಗಿದೆ. ಅಗ್ನಿವೀರ್ ಸೈನಿಕರ ಬಗ್ಗೆ ದೇಶವಾಸಿಗಳನ್ನು ದಾರಿ ತಪ್ಪಿಸುವ ಪ್ರಯತ್ನಗಳು ನಡೆಯುತ್ತಿವೆ. ನೀವು ಕೇಳಿದಾಗ ಸದನದ ಮುಂದೆ ಅಗ್ನಿವೀರ್ ಸೈನಿಕರ ವಿಷಯದ ಬಗ್ಗೆ ನನ್ನ ಹೇಳಿಕೆ ನೀಡಲು ನಾನು ಸಿದ್ಧ” ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.
ಇದನ್ನೂ ಓದಿ: 6 ಜನ ರಚಿಸಿರುವ ‘ಚಕ್ರವ್ಯೂಹ’ದಲ್ಲಿ ಆಧುನಿಕ ಭಾರತ ಸಿಲುಕಿದೆ; ಲೋಕಸಭೆಯಲ್ಲಿ ರಾಹುಲ್ ಗಾಂಧಿ ವಾಗ್ದಾಳಿ
ತಮ್ಮ ಭಾಷಣದಲ್ಲಿ ರಾಹುಲ್ ಗಾಂಧಿ ಅಗ್ನಿವೀರ್ ಯೋಜನೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಷ್ಟೇ ಅಲ್ಲದೆ, “ದೇಶದಲ್ಲಿ ಭಯದ ವಾತಾವರಣವಿದೆ. ಬಿಜೆಪಿ ಸಂಸದರು ಸಹ ಭಯಭೀತರಾಗಿದ್ದಾರೆ ಎಂದು ಹೇಳಿದ್ದಾರೆ. ಬಿಜೆಪಿಯ ಚಿಹ್ನೆಯನ್ನು ಉಲ್ಲೇಖಿಸಿ ದೇಶ ಈಗ ಕಮಲದ ಚಕ್ರವ್ಯೂಹದಲ್ಲಿ ಸಿಕ್ಕಿಹಾಕಿಕೊಂಡಿದೆ ಎಂದು ಟೀಕಿಸಿದ್ದಾರೆ. 21ನೇ ಶತಮಾನದಲ್ಲಿ ಹೊಸ ಚಕ್ರವ್ಯೂಹವನ್ನು ರಚಿಸಲಾಗಿದೆ ಎಂದು ಹೇಳಿದ್ದಾರೆ.
देश की सुरक्षा का मुद्दा संवेदनशील है. #Agniveer जवानों को लेकर जो देशवासियों को गुमराह करने की कोशिश की जा रही है. मैं कहना चाहता हूं कि जब भी आपका आदेश होगा, मैं सदन के समक्ष अग्निवीरों के मुद्दे पर अपना स्टेटमेंट देने को तैयार हूंः रक्षा मंत्री @rajnathsingh #BudgetSession pic.twitter.com/bLBPdAdHq9
— SansadTV (@sansad_tv) July 29, 2024
ಬಿಜೆಪಿ ರಚಿಸಿರುವ ಚಕ್ರವ್ಯೂಹ ಇಂದಿಗೂ ಆರು ಜನರ ನಿಯಂತ್ರಣದಲ್ಲಿದೆ. ನರೇಂದ್ರ ಮೋದಿ, ಅಮಿತ್ ಶಾ, ಮೋಹನ್ ಭಾಗವತ್, ಅಜಿತ್ ದೋವಲ್, ಅಂಬಾನಿ ಮತ್ತು ಅದಾನಿಯವರ ನಿಯಂತ್ರಣದಲ್ಲಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಇದಕ್ಕೆ ಸ್ಪೀಕರ್ ಓಂ ಬಿರ್ಲಾ ಅವರ ಮಧ್ಯಪ್ರವೇಶದ ನಂತರ, “ನೀವು ಬಯಸಿದರೆ, ನಾನು ಅಜಿತ್ ದೋವಲ್, ಅಂಬಾನಿ ಮತ್ತು ಅದಾನಿ ಅವರ ಹೆಸರನ್ನು ಬಿಟ್ಟುಬಿಡುತ್ತೇನೆ ಮತ್ತು ಕೇವಲ 3 ಹೆಸರುಗಳನ್ನು ತೆಗೆದುಕೊಳ್ಳುತ್ತೇನೆ” ಎಂದು ರಾಹುಲ್ ಗಾಂಧಿ ಹೇಳಿದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:35 pm, Mon, 29 July 24