AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶ: ಬಿಎಸ್​ಎಫ್​ ಅಕಾಡೆಮಿಯಿಂದ ಇಬ್ಬರು ಮಹಿಳಾ ಕಾನ್​ಸ್ಟೆಬಲ್​ಗಳು ನಾಪತ್ತೆ

ಮಧ್ಯಪ್ರದೇಶದ ಗ್ವಾಲಿಯರ್​ನ ಬಿಎಸ್ ಎಫ್ ಶಿಬಿರದಿಂದ ಇಬ್ಬರು ಮಹಿಳಾ ಕಾನ್​ಸ್ಟೆಬಲ್​ಗಳು ನಾಪತ್ತೆಯಾಗಿರುವ ಪ್ರಕರಣದ ತನಿಖೆಯಲ್ಲಿ ದಿನಕ್ಕೊಂದು ಹೊಸ ಮಾಹಿತಿಗಳು ಬೆಳಕಿಗೆ ಬರುತ್ತಿವೆ. ಇವರಿಬ್ಬರೂ ಏಪ್ರಿಲ್ ತಿಂಗಳಿನಲ್ಲಿ ಒಟ್ಟಿಗೆ ವಿಹಾರಕ್ಕೆ ತೆರಳಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ. ಶಹಾನಾ ಖಾತೂನ್ ಮೊದಲು ಆಕಾಂಕ್ಷಾ ಅವರ ಮನೆಗೆ ಹೋಗಿದ್ದರು, ನಂತರ ಇಬ್ಬರೂ ಪಶ್ಚಿಮ ಬಂಗಾಳದಲ್ಲಿ ಸುಮಾರು 15 ದಿನಗಳ ಕಾಲ ಇದ್ದರು.

ಮಧ್ಯಪ್ರದೇಶ: ಬಿಎಸ್​ಎಫ್​ ಅಕಾಡೆಮಿಯಿಂದ ಇಬ್ಬರು ಮಹಿಳಾ ಕಾನ್​ಸ್ಟೆಬಲ್​ಗಳು ನಾಪತ್ತೆ
ಬಿಎಸ್​ಎಫ್​ ಕಾನ್​ಸ್ಟೆಬಲ್​ಗಳು
Follow us
ನಯನಾ ರಾಜೀವ್
|

Updated on:Jul 07, 2024 | 9:57 AM

ಮಧ್ಯಪ್ರದೇಶದ ಗ್ವಾಲಿಯರ್​ನಲ್ಲಿ ಬಿಎಸ್​ಎಫ್​ನ ಇಬ್ಬರು ಮಹಿಳಾ ಕಾನ್​ಸ್ಟೆಬಲ್​ಗಳು ನಾಪತ್ತೆಯಾಗಿದ್ದಾರೆ. ಬಿಎಸ್‌ಎಫ್ ಅಕಾಡೆಮಿ ಟೆಕನ್‌ಪುರ್ ಗ್ವಾಲಿಯರ್‌ನಲ್ಲಿ ನಿಯೋಜಿಸಲಾದ ಇಬ್ಬರು ಮಹಿಳಾ ಕಾನ್‌ಸ್ಟೆಬಲ್‌ಗಳ ಹುಡುಕಾಟವು ಈಗ ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶದ ಗಡಿಯನ್ನು ತಲುಪಿದೆ. ಈ ಬಗ್ಗೆ ತನಿಖೆ ನಡೆಸಲು ಎಸ್‌ಐಟಿ ಕೂಡ ರಚಿಸಲಾಗಿದೆ. ಪೊಲೀಸರೊಂದಿಗೆ ಎಸ್‌ಐಟಿ ಮತ್ತು ಬಿಎಸ್‌ಎಫ್ ಗುಪ್ತಚರ ದಳವೂ ಅವರಿಗಾಗಿ ಹುಡುಕಾಟ ನಡೆಸುತ್ತಿದೆ. ನಾಪತ್ತೆಯಾದ ಮಹಿಳಾ ಪೇದೆಯ ತಾಯಿ ನೀಡಿದ ದೂರಿನ ಮೇರೆಗೆ ಬಿಲುವಾ ಪೊಲೀಸ್ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಾಗಿದೆ.

ಮಹಿಳಾ ಕಾನ್‌ಸ್ಟೆಬಲ್‌ಗಳಾದ ಆಕಾಂಕ್ಷಾ ನಿಖರ್ ಮತ್ತು ಶಹಾನಾ ಖಾತೂನ್ ಜೂನ್ 6 ರಂದು ನಾಪತ್ತೆಯಾಗಿದ್ದಾರೆ. ಬಿಎಸ್ ಎಫ್ ಅಕಾಡೆಮಿಯ ಹಾಸ್ಟೆಲ್ ಕೊಠಡಿಯಲ್ಲಿ ಮೊಬೈಲ್ ಬಿಟ್ಟು ಹೋಗಿದ್ದಾಳೆ. ಆಕಾಂಕ್ಷಾ ಮಧ್ಯಪ್ರದೇಶದ ಜಬಲ್‌ಪುರ ನಿವಾಸಿಯಾಗಿದ್ದು, ಶಹಾನಾ ಖಾತೂನ್ ಪಶ್ಚಿಮ ಬಂಗಾಳದ ನಿವಾಸಿಯಾಗಿದ್ದಾರೆ.

ಬಿಎಸ್‌ಎಫ್‌ನಿಂದ ಮಾಹಿತಿ ಪಡೆದು ಗ್ವಾಲಿಯರ್‌ನ ಬಿಲುವಾ ಠಾಣೆ ಪೊಲೀಸರು ತನಿಖೆ ನಡೆಸಿದಾಗ, ಗ್ವಾಲಿಯರ್ ರೈಲು ನಿಲ್ದಾಣದಲ್ಲಿ ಇಬ್ಬರು ಕಾಣಿಸಿಕೊಂಡಿದ್ದಾರೆ ಎನ್ನಲಾಗಿದೆ.ಅಷ್ಟೇ ಅಲ್ಲ ಗ್ವಾಲಿಯರ್ ರೈಲು ನಿಲ್ದಾಣದ ಆವರಣದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಇಬ್ಬರ ಚಿತ್ರಗಳೂ ಸೆರೆಯಾಗಿವೆ.

ಮತ್ತಷ್ಟು ಓದಿ: ವಿವಾಹಿತ ಪುರುಷನೊಂದಿಗೆ ಯುವತಿ ನಾಪತ್ತೆ ಪ್ರಕರಣ: ಇಬ್ಬರ ಶವ ಕೆರೆಯಲ್ಲಿ ಪತ್ತೆ

ಇವರಿಬ್ಬರೂ ಗ್ವಾಲಿಯರ್‌ನಿಂದ ದೆಹಲಿಗೆ ರೈಲು ಹಿಡಿದಿದ್ದರು ಎಂಬುದು ಈವರೆಗಿನ ತನಿಖೆಯಿಂದ ತಿಳಿದುಬಂದಿದೆ. ದೆಹಲಿಯ ಎಟಿಎಂನಿಂದ ಹಣ ಡ್ರಾ ಮಾಡಿ ಕೋಲ್ಕತ್ತಾಗೆ ತೆರಳಿದ್ದಾರೆ. ಕೋಲ್ಕತ್ತಾದಿಂದ ಮುರ್ಷಿದಾಬಾದ್ ತಲುಪಿದೆ.

ಇಬ್ಬರೂ 2021 ರಿಂದ ಅಕಾಡೆಮಿಯ ಸಹಾಯಕ ತರಬೇತಿ ಕೇಂದ್ರದಲ್ಲಿ ಬೋಧಕ (ತರಬೇತುದಾರ) ಹುದ್ದೆಯನ್ನು ಹೊಂದಿದ್ದಾರೆ. ಶಹಾನಾ ಖಾತೂನ್, ಅವರ ಅಕ್ಕ ಮತ್ತು ಇತರ ಕುಟುಂಬ ಸದಸ್ಯರು ತಮ್ಮ ಮಗಳನ್ನು ಅಪಹರಿಸಿದ್ದಾರೆ ಎಂದು ಆರೋಪಿಸಿದರು.

ಈ ಸಂಪೂರ್ಣ ಪ್ರಕರಣದಲ್ಲಿ, ಕಾಣೆಯಾದ ಮಹಿಳಾ ಕಾನ್‌ಸ್ಟೆಬಲ್ ಆಕಾಂಕ್ಷಾ ಅವರ ತಾಯಿಯ ದೂರಿನ ಮೇರೆಗೆ ಬಿಲುವಾ ಪೊಲೀಸ್ ಠಾಣೆಯಲ್ಲಿ ಶಹಾನಾ ಖಾತೂನ್, ಅಕ್ಕ ಮತ್ತು ಅವರ ಕುಟುಂಬದ ವಿರುದ್ಧ ಅಪಹರಣ ಪ್ರಕರಣ ದಾಖಲಾಗಿದ್ದು, ಪೊಲೀಸ್ ತಂಡವನ್ನು ಬಂಗಾಳಕ್ಕೆ ಕಳುಹಿಸಲಾಗಿದೆ. ಮತ್ತೊಂದೆಡೆ, ಎಸ್‌ಐಟಿ ಮತ್ತು ಬಿಎಸ್‌ಎಫ್ ಗುಪ್ತಚರ ಘಟಕ ಕೂಡ ಆಕಾಂಕ್ಷಾಗಾಗಿ ಹುಡುಕಾಟ ನಡೆಸುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:57 am, Sun, 7 July 24

ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು