ಉತ್ತರ ಪ್ರದೇಶದ ಕಾಡಿನಲ್ಲಿ ಶಿಕ್ಷಕ, ವಿದ್ಯಾರ್ಥಿನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ; ಅನೈತಿಕ ಸಂಬಂಧದ ಶಂಕೆ
ಉತ್ತರ ಪ್ರದೇಶದ ರಸೂಲ್‌ಪುರ ಗ್ರಾಮದ ನಿವಾಸಿಯಾಗಿರುವ ಶಿಕ್ಷಕ ತಾನು ಕೆಲಸ ಮಾಡುತ್ತಿದ್ದ ಶಾಲೆಯಲ್ಲೇ ಓದುತ್ತಿದ್ದ ಬಾಲಕಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಅವರಿಬ್ಬರೂ ಸೆಪ್ಟೆಂಬರ್ 3ರಿಂದ ಕಾಣೆಯಾಗಿದ್ದರು.
ಸಹರಾನ್‌ಪುರ: 40 ವರ್ಷದ ಶಾಲಾ ಶಿಕ್ಷಕ ಮತ್ತು ಅವರ ವಿದ್ಯಾರ್ಥಿನಿ ಉತ್ತರ ಪ್ರದೇಶದ (Uttar Pradesh) ಸಹರಾನ್ಪುರದ ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರ ನಡುವೆ ಅನೈತಿಕ ಸಂಬಂಧವಿತ್ತು (Extra Marital Affair) ಎಂದು ಹೇಳಲಾಗಿದೆ. ಶಾಲೆಯ ಶಿಕ್ಷಕ ವೀರೇಂದ್ರ ಮತ್ತು 9ನೇ ತರಗತಿಯ ವಿದ್ಯಾರ್ಥಿನಿಯಾಗಿರುವ 17 ವರ್ಷದ ಬಾಲಕಿ ಮಂಗಳವಾರ ತಡರಾತ್ರಿ ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ರಸೂಲ್‌ಪುರ ಗ್ರಾಮದ ನಿವಾಸಿಯಾಗಿರುವ ಶಿಕ್ಷಕ ತಾನು ಕೆಲಸ ಮಾಡುತ್ತಿದ್ದ ಶಾಲೆಯಲ್ಲೇ ಓದುತ್ತಿದ್ದ ಬಾಲಕಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಅವರಿಬ್ಬರೂ ಸೆಪ್ಟೆಂಬರ್ 3ರಿಂದ ಕಾಣೆಯಾಗಿದ್ದಾರೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ವಿಪಿನ್ ತಾಡಾ ತಿಳಿಸಿದ್ದಾರೆ.
ಇದನ್ನೂ ಓದಿ: Tamil Nadu: ತಮಿಳುನಾಡಿನ ಹಾಸ್ಟೆಲ್ ಟಾಯ್ಲೆಟ್ನಲ್ಲಿ 12ನೇ ತರಗತಿ ವಿದ್ಯಾರ್ಥಿನಿ ಶವವಾಗಿ ಪತ್ತೆ
ಬಾಲಕಿಯ ಕುಟುಂಬಸ್ಥರು ಅಪಹರಣದ ವರದಿಯನ್ನು ದಾಖಲಿಸಿದ್ದಾರೆ. ಪೊಲೀಸರು ಅವರಿಗಾಗಿ ಹುಡುಕಲು ಪ್ರಾರಂಭಿಸಿದ್ದರು. ಆದರೆ ಅವರು ಸ್ಥಳವನ್ನು ಬದಲಾಯಿಸಿದ್ದರಿಂದ ಅವರನ್ನು ಪತ್ತೆಹಚ್ಚಲು ಸಾಧ್ಯವಾಗಲಿಲ್ಲ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. ಅವರು ಮೃತಪಟ್ಟಿರುವ ಪ್ರದೇಶದಲ್ಲಿ ದುರ್ವಾಸನೆ ಹೊರಹೊಮ್ಮಲು ಪ್ರಾರಂಭಿಸಿದಾಗ ಅಕ್ಕಪಕ್ಕದವರು ಪೊಲೀಸರಿಗೆ ವಿಷಯ ತಿಳಿಸಿದ್ದರು. ಪೊಲೀಸ್ ತಂಡವು ಕಾಡಿಗೆ ಹೋದಾಗ 2 ಮೃತದೇಹಗಳು ಅತ್ಯಂತ ಕೆಟ್ಟ ಸ್ಥಿತಿಯಲ್ಲಿ ಪತ್ತೆಯಾಗಿವೆ.
10 ದಿನಗಳ ಹಿಂದೆಯೇ ಅವರಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಆ ಸ್ಥಳದಿಂದ ಮೃತ ಶಿಕ್ಷಕನ ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದ್ದು, ಯಾವುದೇ ಸೂಸೈಡ್ ನೋಟ್ ಪತ್ತೆಯಾಗಿಲ್ಲ. ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.