AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mission Divyastra: ಮಿಷನ್ ದಿವ್ಯಾಸ್ತ್ರ ಯಶಸ್ವಿ ಉಡಾವಣೆ: ಪ್ರಧಾನಿ ಮೋದಿ

Agni-5 missile: ಇಂದು ಮಿಷನ್ ದಿವ್ಯಾಸ್ತ್ರ ಯಶಸ್ವಿ ಉಡಾವಣೆಯಾಗಿದೆ ಎಂದು ಪ್ರಧಾನಿ ಮೋದಿ ಅವರು ಘೋಷಣೆ ಮಾಡಿದ್ದಾರೆ. ಡಿಆರ್‌ಡಿಒ ವಿಜ್ಞಾನಿಗಳು ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಅಗ್ನಿ-5 ಕ್ಷಿಪಣಿಯ ಮೊದಲ ಪರೀಕ್ಷಾರ್ಥ ಹಾರಾಟ ನಡೆಸಿದ್ದಾರೆ. ಈ ಕ್ಷಿಪಣಿ ಮಲ್ಟಿಪಲ್ ಇಂಡಿಪೆಂಡೆಂಟ್ಲಿ ಟಾರ್ಗೆಟೆಬಲ್ ರೀ-ಎಂಟ್ರಿ ವೆಹಿಕಲ್ (ಎಂಐಆರ್‌ವಿ) ತಂತ್ರಜ್ಞಾನವನ್ನು ಹೊಂದಿದೆ.

Mission Divyastra: ಮಿಷನ್ ದಿವ್ಯಾಸ್ತ್ರ ಯಶಸ್ವಿ ಉಡಾವಣೆ: ಪ್ರಧಾನಿ ಮೋದಿ
ಅಕ್ಷಯ್​ ಪಲ್ಲಮಜಲು​​
|

Updated on: Mar 11, 2024 | 6:13 PM

Share

ಮಿಷನ್ ದಿವ್ಯಾಸ್ತ್ರ (Mission Divyastra) ಯಶಸ್ವಿ ಉಡಾವಣೆಯನ್ನು ನಡೆಸಿದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ವಿಜ್ಞಾನಿಗಳಿಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ತಮ್ಮ ಎಕ್ಸ್​​ ಖಾತೆಯಲ್ಲಿ ಅಭಿನಂದನೆ ತಿಳಿಸಿದ್ದಾರೆ. ಡಿಆರ್‌ಡಿಒ ವಿಜ್ಞಾನಿಗಳು ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಅಗ್ನಿ-5 ಕ್ಷಿಪಣಿಯ ಮೊದಲ ಪರೀಕ್ಷಾರ್ಥ ಹಾರಾಟ ನಡೆಸಿದ್ದಾರೆ. ಈ ಕ್ಷಿಪಣಿ ಮಲ್ಟಿಪಲ್ ಇಂಡಿಪೆಂಡೆಂಟ್ಲಿ ಟಾರ್ಗೆಟೆಬಲ್ ರೀ-ಎಂಟ್ರಿ ವೆಹಿಕಲ್ (ಎಂಐಆರ್‌ವಿ) ತಂತ್ರಜ್ಞಾನವನ್ನು ಹೊಂದಿದೆ. ಇದು ನಮ್ಮ ಭಾರತಕ್ಕೆ ಹೆಮ್ಮೆಯ ಕ್ಷಣ ಎಂದು ಮೋದಿ ಹೇಳಿದ್ದಾರೆ.

ಈ ಕ್ಷಿಪಣಿ ಪಾಕಿಸ್ತಾನ ಮತ್ತು ಚೀನಾದಂತಹ ದೇಶಗಳಿಂದ ಬಹು ರಂಗಗಳಲ್ಲಿ ಸವಾಲುಗಳನ್ನು ಎದುರಿಸುತ್ತಿರುವ ಭಾರತೀಯ ರಕ್ಷಣಾ ಪಡೆಗಳಿಗೆ ಉತ್ತೇಜನವಾಗಿದೆ.

ಇದನ್ನೂ ಓದಿ: ಸಿಎಎ ಜಾರಿಗೆ ಕೇಂದ್ರ ಸರ್ಕಾರ ಇಂದು ರಾತ್ರಿ ಅಧಿಸೂಚನೆ ಹೊರಡಿಸುವ ಸಾಧ್ಯತೆ

ಮೋದಿ ಎಕ್ಸ್​​​ ಟ್ವೀಟ್​​ ಇಲ್ಲಿದೆ:

&nbs

ಅಗ್ನಿ-5 ಬ್ಯಾಲಿಸ್ಟಿಕ್ ಕ್ಷಿಪಣಿ

DRDO 2012ರ ಸುಮಾರಿಗೆ ಅಗ್ನಿ-V ಕ್ಷಿಪಣಿಗಳ ಪ್ರಯೋಗವನ್ನು ಪ್ರಾರಂಭಿಸಿತು. ಅಂದಿನಿಂದ, ಇದು ನವೀಕರಿಸಿದ ಸಾಮರ್ಥ್ಯಗಳೊಂದಿಗೆ ಅಗ್ನಿ-Vನ ಬಹು ಆವೃತ್ತಿಗಳನ್ನು ಯಶಸ್ವಿಯಾಗಿ ಅಭಿವೃದ್ಧಿಪಡಿಸಿದೆ. 2021ರಲ್ಲಿ, ಡಿಆರ್‌ಡಿಒ ಒಡಿಶಾದ ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ ಸರ್ಫೇಸ್ ಟು ಸರ್ಫೇಸ್ ಬ್ಯಾಲಿಸ್ಟಿಕ್ ಕ್ಷಿಪಣಿ ಅಗ್ನಿ-5ನ್ನು ಯಶಸ್ವಿಯಾಗಿ ಉಡಾವಣೆ ಮಾಡಿತು. ಮೂರು-ಹಂತದ ಘನ-ಇಂಧನ ಎಂಜಿನ್ ಅನ್ನು ಬಳಸುವ ಕ್ಷಿಪಣಿಯು 5,000 ಕಿಲೋಮೀಟರ್ ವ್ಯಾಪ್ತಿಯಲ್ಲಿರುವ ಗುರಿಗಳನ್ನು ಅತಿ ಹೆಚ್ಚು ನಿಖರತೆಯೊಂದಿಗೆ ತಲುಪುವ ಸಾಮರ್ಥ್ಯವನ್ನು ಹೊಂದಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ