ಕೇಂದ್ರೀಯ ತನಿಖಾ ಸಂಸ್ಥೆಗಳ ದುರ್ಬಳಕೆ: ಕಾಂಗ್ರೆಸ್ ಬಿಟ್ಟು 8 ಪ್ರತಿಪಕ್ಷಗಳಿಂದ ಪ್ರಧಾನಿ ಮೋದಿಗೆ ಪತ್ರ

ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ಪ್ರಧಾನಿ ನರೇಂದ್ರ ಮೋದಿಗೆ ಪ್ರತಿಪಕ್ಷ ನಾಯಕರು ಪತ್ರ ಬರೆದಿದ್ದಾರೆ. ಪತ್ರಿಪಕ್ಷಗಳ ನಾಯಕರನ್ನು ಟಾರ್ಗೆಟ್ ಮಾಡಿ ರಾಜಕೀಯ ಉದ್ದೇಶಗಳಿಗೆ ಸಿಬಿಐ, ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ಇಲಾಖೆಗಳನ್ನು ಉಪಯೋಗಿಸಲಾಗುತ್ತಿದೆ.

ಕೇಂದ್ರೀಯ ತನಿಖಾ ಸಂಸ್ಥೆಗಳ ದುರ್ಬಳಕೆ: ಕಾಂಗ್ರೆಸ್ ಬಿಟ್ಟು 8 ಪ್ರತಿಪಕ್ಷಗಳಿಂದ ಪ್ರಧಾನಿ ಮೋದಿಗೆ ಪತ್ರ
ಪ್ರಧಾನಿ ನರೇಂದ್ರ ಮೋದಿ
Follow us
ನಯನಾ ರಾಜೀವ್
|

Updated on: Mar 05, 2023 | 11:24 AM

ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ಪ್ರಧಾನಿ ನರೇಂದ್ರ ಮೋದಿಗೆ ಪ್ರತಿಪಕ್ಷ ನಾಯಕರು ಪತ್ರ ಬರೆದಿದ್ದಾರೆ. ಪತ್ರಿಪಕ್ಷಗಳ ನಾಯಕರನ್ನು ಟಾರ್ಗೆಟ್ ಮಾಡಿ ರಾಜಕೀಯ ಉದ್ದೇಶಗಳಿಗೆ ಸಿಬಿಐ, ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ಇಲಾಖೆಗಳನ್ನು ಉಪಯೋಗಿಸಲಾಗುತ್ತಿದೆ. ಈ ಬಗ್ಗೆ ಪ್ರಧಾನಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಕಾಂಗ್ರೆಸ್​ ಹೊರತುಪಡಿಸಿ 8 ಪ್ರತಿಪಕ್ಷ ನಾಯಕರುಗಳು ಮೋದಿಗೆ ಪತ್ರ ಬರೆದಿದ್ದಾರೆ.

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮನೀಶ್ ಸಿಸೋಡಿಯಾ ಅವರ ಬಂಧನದ ರಾಜಕೀಯ ಗುದ್ದಾಟದ ನಡುವೆಯೇ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಆರೋಪಿಸಿ ಎಂಟು ವಿರೋಧ ಪಕ್ಷಗಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿವೆ.

ಮತ್ತಷ್ಟು ಓದಿ: Manish Sisodia: ಮನೀಶ್ ಸಿಸೋಡಿಯಾ ಸಿಬಿಐ ಕಸ್ಟಡಿ ಮತ್ತೆರಡು ದಿನ ವಿಸ್ತರಣೆ

ಮುಖ್ಯಮಂತ್ರಿಗಳಾದ ಕೆ ಚಂದ್ರಶೇಖರ್ ರಾವ್, ಮಮತಾ ಬ್ಯಾನರ್ಜಿ, ಭಗವಂತ್ ಮಾನ್ ಮತ್ತು ಅರವಿಂದ್ ಕೇಜ್ರಿವಾಲ್ ಸೇರಿದಂತೆ ವಿಪಕ್ಷ ನಾಯಕರು ಸಹಿ ಹಾಕಿದ್ದು, ಕಾಂಗ್ರೆಸ್ ಇದರಿಂದ ದೂರ ಉಳಿದಿದೆ.

ನ್ಯಾಷನಲ್ ಕಾನ್ಫರೆನ್ಸ್‌ನ ಫಾರೂಕ್ ಅಬ್ದುಲ್ಲಾ, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್, ಶಿವಸೇನೆಯ ಉದ್ದವ್ ಠಾಕ್ರೆ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಪತ್ರಕ್ಕೆ ಸಹಿ ಹಾಕಿದ್ದಾರೆ.

2014 ರಿಂದ ನಿಮ್ಮ ಆಡಳಿತದ ಅಡಿಯಲ್ಲಿ ತನಿಖಾ ಸಂಸ್ಥೆಗಳು ಬುಕ್ ಮಾಡಿದ, ಬಂಧಿಸಿದ, ದಾಳಿ ಮಾಡಿದ ಅಥವಾ ವಿಚಾರಣೆಗೆ ಒಳಗಾದ ಒಟ್ಟು ಪ್ರಮುಖ ರಾಜಕಾರಣಿಗಳ ಪೈಕಿ, ಗರಿಷ್ಠ ಪ್ರತಿಪಕ್ಷಗಳಿಗೆ ಸೇರಿದೆ.

ಕುತೂಹಲಕಾರಿಯಾಗಿ, ಬಿಜೆಪಿಗೆ ಸೇರುವ ವಿರೋಧ ಪಕ್ಷದ ರಾಜಕಾರಣಿಗಳ ವಿರುದ್ಧದ ಪ್ರಕರಣಗಳ ಬಗ್ಗೆ ತನಿಖಾ ಸಂಸ್ಥೆಗಳು ನಿಧಾನವಾಗುತ್ತವೆ ಎಂದು ಪತ್ರದಲ್ಲಿ ಹೇಳಲಾಗಿದೆ.

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಕಾಂಗ್ರೆಸ್‌ನಲ್ಲಿದ್ದಾಗ ಶಾರದಾ ಚಿಟ್ ಫಂಡ್ ಹಗರಣದ ಕುರಿತು 2014 ಮತ್ತು 2015 ರಲ್ಲಿ ಸಿಬಿಐ ಮತ್ತು ಇಡಿ ಸ್ಕ್ಯಾನರ್‌ಗೆ ಒಳಗಾದ ಉದಾಹರಣೆಯನ್ನು ವಿರೋಧ ಪಕ್ಷದ ನಾಯಕರು ಉಲ್ಲೇಖಿಸಿದ್ದಾರೆ.

2014 ರಿಂದ, ಪ್ರತಿಪಕ್ಷ ನಾಯಕರ ವಿರುದ್ಧ ದಾಳಿಗಳು, ಪ್ರಕರಣಗಳು ಮತ್ತು ಬಂಧನಗಳ ಸಂಖ್ಯೆಯಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ. ಲಾಲು ಪ್ರಸಾದ್ ಯಾದವ್ (ರಾಷ್ಟ್ರೀಯ ಜನತಾ ದಳ), ಸಂಜಯ್ ರಾವತ್ (ಶಿವಸೇನೆ), ಅಜಮ್ ಖಾನ್ (ಸಮಾಜವಾದಿ ಪಕ್ಷ) ), ನವಾಬ್ ಮಲಿಕ್, ಅನಿಲ್ ದೇಶಮುಖ್ (ಎನ್‌ಸಿಪಿ), ಅಭಿಷೇಕ್ ಬ್ಯಾನರ್ಜಿ (ಟಿಎಂಸಿ), ಬ್ಯಾನರ್ಜಿ ವಿರುದ್ಧ ತನಿಖೆಗಳು ನಡೆದಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ