AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶ್ರೀರಾಮನ ಭಕ್ತರು ನೀಡಿದ ದೇಣಿಗೆಯನ್ನು ದುರ್ಬಳಕೆ ಮಾಡಿಕೊಳ್ಳುವುದು ಮಹಾಪಾಪ’-ಪ್ರಿಯಾಂಕಾ ಗಾಂಧಿ ವಾದ್ರಾ

ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಕೂಡ ಇದೊಂದು ಸ್ಕ್ಯಾಮ್​ ಎಂದಿದ್ದಾರೆ. ಹೇ..ರಾಮ. ನೋಡು ಎಂಥ ಕಾಲ ಬಂತು ! ನಿನ್ನ ಹೆಸರಲ್ಲಿ ದೇಣಿಗೆ ಪಡೆದು ಭ್ರಷ್ಟಾಚಾರ ಮಾಡಲಾಗಿದೆ ಎಂದು ವ್ಯಂಗ್ಯಭರಿತವಾಗಿ ಟ್ವೀಟ್ ಮಾಡಿದ್ದಾರೆ.

‘ಶ್ರೀರಾಮನ ಭಕ್ತರು ನೀಡಿದ ದೇಣಿಗೆಯನ್ನು ದುರ್ಬಳಕೆ ಮಾಡಿಕೊಳ್ಳುವುದು ಮಹಾಪಾಪ’-ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಿಯಾಂಕಾ ಗಾಂಧಿ
TV9 Web
| Edited By: |

Updated on:Jun 14, 2021 | 4:13 PM

Share

ಅಯೋಧ್ಯೆಯಲ್ಲಿ ಶ್ರೀರಾಮಜನ್ಮಭೂಮಿ ಟ್ರಸ್ಟ್​ ಭೂಮಿ ಖರೀದಿಯಲ್ಲಿ ಭ್ರಷ್ಟಾಚಾರ ಮಾಡಿದೆ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಈ ಬಗ್ಗೆ ಕಿಡಿಕಾರಿದ್ದಾರೆ. ಭಕ್ತರ ದೇಣಿಗೆಗಳನ್ನು ದುರ್ಬಳಕೆ ಮಾಡಿಕೊಳ್ಳುವುದು ಮಹಾಪಾಪ ಮತ್ತು ಅವರ ನಂಬಿಕೆಗೆ ಅವಮಾನ ಮಾಡಿದಂತೆ ಎಂದು ಹೇಳಿದ್ದಾರೆ.

ಹಿಂದಿಯಲ್ಲಿ ಟ್ವೀಟ್ ಮಾಡಿರುವ ಪ್ರಿಯಾಂಕಾ ಗಾಂಧಿ ವಾದ್ರಾ, ಕೋಟ್ಯಂತರ ಜನರು ಶ್ರೀರಾಮನಿಗಾಗಿ ತಮ್ಮ ಕೈಲಾದಷ್ಟು ಹಣವನ್ನು ದೇಣಿಗೆ ನೀಡಿದ್ದಾರೆ. ಅದು ಅವರ ಭಕ್ತಿ ಮತ್ತು ನಂಬಿಕೆ. ಆದರೆ ಇಲ್ಲಿ ಕೋಟ್ಯಂತರ ಭಕ್ತರ ನಂಬಿಕೆಗೆ ದ್ರೋಹವಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಅಯೋಧ್ಯೆಯಲ್ಲಿ ಶ್ರೀರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್​​ ಭೂಮಿ ಖರೀದಿ ಮಾಡಿದ ಬೆನ್ನಲ್ಲೇ ವಿವಾದ ಸೃಷ್ಟಿಯಾಗಿದ್ದು, ಸಿಬಿಐ, ಇಡಿ ತನಿಖೆಯಾಗಬೇಕು ಎಂದು ಸಮಾಜವಾದಿ ಪಾರ್ಟಿ, ಆಮ್​ ಆದ್ಮಿ ಪಕ್ಷಗಳು ಒತ್ತಾಯಿಸಿವೆ. 2 ಕೋಟಿ ರೂ.ಬೆಲೆಯ ಭೂಮಿಯನ್ನು 18 ಕೋಟಿ ರೂಪಾಯಿ ಕೊಟ್ಟು ಖರೀದಿಸಲಾಗಿದೆ. ಇದರಲ್ಲಿ ಖಂಡಿತ ಹಗರಣ ನಡೆದಿದೆ ಎಂದು ಆರೋಪಿಸಿವೆ. ಇನ್ನು ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಕೂಡ ಇದೊಂದು ಸ್ಕ್ಯಾಮ್​ ಎಂದಿದ್ದಾರೆ. ಹೇ..ರಾಮ. ನೋಡು ಎಂಥ ಕಾಲ ಬಂತು ! ನಿನ್ನ ಹೆಸರಲ್ಲಿ ದೇಣಿಗೆ ಪಡೆದು ಭ್ರಷ್ಟಾಚಾರ ಮಾಡಲಾಗಿದೆ ಎಂದು ವ್ಯಂಗ್ಯಭರಿತವಾಗಿ ಟ್ವೀಟ್ ಮಾಡಿದ್ದಾರೆ. ಇನ್ನು ಈ ಬಗ್ಗೆ ಟ್ರಸ್ಟ್​​ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್​ ಸ್ಪಷ್ಟನೆ ನೀಡಿದ್ದು, ಭೂ ಖರೀದಿಯಲ್ಲಿ ಯಾವುದೇ ಹಗರಣವೂ ನಡೆದಿಲ್ಲ. ರಾಜಕೀಯ ದ್ವೇಷದಿಂದ ಈ ಆರೋಪ ಮಾಡಲಾಗುತ್ತಿದೆ ಎಂದಿದ್ದಾರೆ.

ಇದನ್ನೂ ಓದಿ: ಮತ್ತೆ ವಿವಾದದಲ್ಲಿ ಅಯೋಧ್ಯೆ ಶ್ರೀರಾಮಜನ್ಮಭೂಮಿ; ಸಿಬಿಐ, ಇಡಿ ತನಿಖೆಗೆ ಆಗ್ರಹಿಸಿದ ಎಸ್​ಪಿ, ಆಪ್​ ಪಕ್ಷಗಳು

Misuse of donations of devotees is sin Said priyanka gandhi vadra

Published On - 4:08 pm, Mon, 14 June 21

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?