Mizoram Assembly Election: ಮಿಜೋರಾಂ ವಿಧಾನಸಭಾ ಚುನಾವಣೆಗೆ 12 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

|

Updated on: Oct 18, 2023 | 11:44 AM

ಮಿಜೋರಾಂ(Mizoram) ವಿಧಾನಸಭಾ ಚುನಾವಣೆಗೆ ಬಿಜೆಪಿ 12 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮಿಜೋರಾಂನ ಎಲ್ಲಾ 40 ವಿಧಾನಸಭಾ ಸ್ಥಾನಗಳಿಗೆ ನವೆಂಬರ್ 7 ರಂದು ಮತದಾನ ನಡೆಯಲಿದೆ ಮತ್ತು ಅದರ ಫಲಿತಾಂಶಗಳು ಡಿಸೆಂಬರ್ 3 ರಂದು ಬಹಿರಂಗಗೊಳ್ಳಲಿವೆ. ಬಿಜೆಪಿಯ ವಿರೋಧ ಪಕ್ಷ ಕಾಂಗ್ರೆಸ್ ಮಂಗಳವಾರ (13 ಅಕ್ಟೋಬರ್ 2023) ಒಟ್ಟು 40 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿತ್ತು.

Mizoram Assembly Election: ಮಿಜೋರಾಂ ವಿಧಾನಸಭಾ ಚುನಾವಣೆಗೆ 12 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ
ಬಿಜೆಪಿ
Follow us on

ಮಿಜೋರಾಂ(Mizoram) ವಿಧಾನಸಭಾ ಚುನಾವಣೆಗೆ ಬಿಜೆಪಿ 12 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮಿಜೋರಾಂನ ಎಲ್ಲಾ 40 ವಿಧಾನಸಭಾ ಸ್ಥಾನಗಳಿಗೆ ನವೆಂಬರ್ 7 ರಂದು ಮತದಾನ ನಡೆಯಲಿದೆ ಮತ್ತು ಅದರ ಫಲಿತಾಂಶಗಳು ಡಿಸೆಂಬರ್ 3 ರಂದು ಬಹಿರಂಗಗೊಳ್ಳಲಿವೆ. ಬಿಜೆಪಿಯ ವಿರೋಧ ಪಕ್ಷ ಕಾಂಗ್ರೆಸ್ ಮಂಗಳವಾರ (13 ಅಕ್ಟೋಬರ್ 2023) ಒಟ್ಟು 40 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿತ್ತು.

ಮಿಜೋರಾಂ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಸೋಮವಾರ ಎಲ್ಲಾ 40 ಸ್ಥಾನಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಇವುಗಳಲ್ಲಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಲಾಲಸವತಾ ಅವರ ಹೆಸರೂ ಸೇರಿದೆ. ಮೊದಲು ಪಕ್ಷವು 39 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿತು ಮತ್ತು ನಂತರ ಸಂಜೆಯ ನಂತರ ಉಳಿದ ಒಂದು ಸ್ಥಾನಕ್ಕೂ ಅಭ್ಯರ್ಥಿಗಳನ್ನು ಘೋಷಿಸಲಾಯಿತು. ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮಿಜೋರಾಂ ಪ್ರವಾಸದಲ್ಲಿದ್ದ ದಿನವೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ.

ಛತ್ತೀಸ್‌ಗಢ, ಮಧ್ಯಪ್ರದೇಶ, ಮಿಜೋರಾಂ, ರಾಜಸ್ಥಾನ ಮತ್ತು ತೆಲಂಗಾಣ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದ್ದಾರೆ. ಮಿಜೋರಾಂ, ಮಧ್ಯ ಪ್ರದೇಶ, ರಾಜಸ್ಥಾನ ಮತ್ತು ತೆಲಂಗಾಣದಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ನಕ್ಸಲ್ ಸಂಘರ್ಷ ಪೀಡಿತ ಛತ್ತೀಸ್ ಘಡದಲ್ಲಿ ಮಾತ್ರ 2 ಹಂತದಲ್ಲಿ ಮತದಾನ ನಡೆಸಲು ಚುನಾವಣಾ ಆಯೋಗ ಯೋಜಿಸಿದೆ.

ಮತ್ತಷ್ಟು ಓದಿ:Assembly Elections 2023: ಪಂಚರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸಿದ ಕೇಂದ್ರ ಚುನಾವಣಾ ಆಯೋಗ

ಅದರಂತೆ ಮಿಜೋರಾಂ ನಲ್ಲಿ ನವೆಂಬರ್ 7 ರಂದು ಮತದಾನ ನಡೆಯಲಿದ್ದು, ಛತ್ತೀಸ್ ಘಡದಲ್ಲಿ ನವೆಂಬರ್ 7 ಮತ್ತು 17ರಂದು 2 ಹಂತದಲ್ಲಿ ಮತದಾನ ನಡೆಯಲಿದೆ.

ಉಳಿದಂತೆ ಮಧ್ಯಪ್ರದೇಶದಲ್ಲಿ ನವೆಂಬರ್ 17 ರಂದು, ರಾಜಸ್ಥಾನದಲ್ಲಿ ನವೆಂಬರ್ 23ರಂದು ಮತ್ತು ತೆಲಂಗಾಣದಲ್ಲಿ ನವೆಂಬರ್ 30ರಂದು ಮತದಾನ ನಡೆಯಲಿದೆ. ಎಲ್ಲ ರಾಜ್ಯಗಳ ಚುನಾವಣಾ ಫಲಿತಾಂಶ ಡಿಸೆಂಬರ್ 3ರಂದು ಪ್ರಕಟವಾಗಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಮಾಹಿತಿ ನೀಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ