MK Stalin: ಜಿಮ್​ನಲ್ಲಿ ಬೆವರಿಳಿಸಿದ ಎಂಕೆ ಸ್ಟಾಲಿನ್; ತಮಿಳುನಾಡು ಸಿಎಂ ಫಿಟ್​ನೆಸ್ ವಿಡಿಯೋ ವೈರಲ್

ವೀಕೆಂಡ್​ನಲ್ಲಿ ರಾಜಕೀಯದಿಂದ ದೂರ ಉಳಿದು ಕುಟುಂಬ, ತಮ್ಮ ಫಿಟ್​ನೆಸ್​ ಬಗ್ಗೆ ಹೆಚ್ಚು ಕಾಳಜಿ ವಹಿಸುವ ಸಿಎಂ ಎಂಕೆ ಸ್ಟಾಲಿನ್ ಅವರು ಜಿಮ್​ನಲ್ಲಿ ವರ್ಕ್​ಔಟ್ ಮಾಡುತ್ತಿರುವ ವಿಡಿಯೋವೊಂದು ಎಲ್ಲೆಡೆ ಹರಿದಾಡುತ್ತಿದೆ.

MK Stalin: ಜಿಮ್​ನಲ್ಲಿ ಬೆವರಿಳಿಸಿದ ಎಂಕೆ ಸ್ಟಾಲಿನ್; ತಮಿಳುನಾಡು ಸಿಎಂ ಫಿಟ್​ನೆಸ್ ವಿಡಿಯೋ ವೈರಲ್
ಸಿಎಂ ಎಂಕೆ ಸ್ಟಾಲಿನ್ ಫಿಟ್​ನೆಸ್ ವಿಡಿಯೋ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Aug 21, 2021 | 3:56 PM

ಚೆನ್ನೈ: ತಮಿಳುನಾಡಿನ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ (MK Stalin Fitness) ಫಿಟ್​ನೆಸ್​ ಬಗ್ಗೆ ಬಹಳ ಆಸಕ್ತಿ ವಹಿಸುತ್ತಾರೆ ಎಂಬ ವಿಷಯ ಕೆಲವರಿಗಷ್ಟೇ ಗೊತ್ತಿದೆ. ವೀಕೆಂಡ್​ನಲ್ಲಿ ರಾಜಕೀಯದಿಂದ ದೂರ ಉಳಿದು ಕುಟುಂಬ, ತಮ್ಮ ಫಿಟ್​ನೆಸ್​ ಬಗ್ಗೆ ಹೆಚ್ಚು ಕಾಳಜಿ ವಹಿಸುವ ಸಿಎಂ ಎಂಕೆ ಸ್ಟಾಲಿನ್ ಅವರು ಜಿಮ್​ನಲ್ಲಿ ವರ್ಕ್​ಔಟ್ ಮಾಡುತ್ತಿರುವ ವಿಡಿಯೋವೊಂದು ಎಲ್ಲೆಡೆ ಹರಿದಾಡುತ್ತಿದ್ದು, ಸಿಎಂ ಸ್ಟಾಲಿನ್ ಫಿಟ್​ನೆಸ್ ಗೋಲ್ ನೋಡಿ ಬಹುತೇಕರು ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಜಿಮ್​ನಲ್ಲಿ ವರ್ಕ್​ಔಟ್ ಮಾಡುತ್ತಿರುವ ಎಂಕೆ ಸ್ಟಾಲಿನ್ ತಮ್ಮ ಫಿಟ್​ನೆಸ್ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ. 37 ಸೆಕೆಂಡ್​ಗಳ ಈ ವಿಡಿಯೋದಲ್ಲಿ ಈ ವಯಸ್ಸಿನಲ್ಲೂ ಜಿಮ್​ನಲ್ಲಿ ಬೆವರಿಳಿಸುತ್ತಿರುವ ಮುಖ್ಯಮಂತ್ರಿ ಸ್ಟಾಲಿನ್ ಅವರನ್ನು ನೋಡಿ ನೆಟ್ಟಿಗರು ಖುಷಿಯಾಗಿದ್ದಾರೆ. ಇತ್ತೀಚೆಗಷ್ಟೇ ತಮಿಳುನಾಡಿನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಜಯಭೇರಿ ಬಾರಿಸಿ, ಮುಖ್ಯಮಂತ್ರಿಯಾಗಿ ಅಧಿಕಾರಕ್ಕೆ ಏರಿರುವ ಎಂ.ಕೆ. ಸ್ಟಾಲಿನ್ ಈಗಾಗಲೇ ತಮ್ಮ ಉತ್ತಮ ಕಾರ್ಯವೈಖರಿಯಿಂದ ಭಾರೀ ಸುದ್ದಿಯಾಗುತ್ತಿದ್ದಾರೆ.

ಅಷ್ಟೇ ಅಲ್ಲದೆ, ಇತ್ತೀಚೆಗೆ ರಸ್ತೆಯಲ್ಲಿ ಸೈಕಲ್ ತುಳಿದುಕೊಂಡು ಹೋಗುವ ಮೂಲಕ ತಮ್ಮ ಎಸ್ಕಾರ್ಟ್​ನೆಲ್ಲ ದೂರವಿಟ್ಟು ಸಿಎಂ ಸ್ಟಾಲಿನ್ ಗಮನ ಸೆಳೆದಿದ್ದರು. ಮಾಮಲ್ಲಾಪುರಂನ ರಸ್ತೆಯಲ್ಲಿ ಸಾಮಾನ್ಯರಂತೆ ಸೈಕಲ್ ತುಳಿದುಕೊಂಡು ಹೋಗುತ್ತಿದ್ದ ಮುಖ್ಯಮಂತ್ರಿ ಸ್ಟಾಲಿನ್ ರಸ್ತೆಯಲ್ಲಿ ಸಿಕ್ಕವರ ಜೊತೆ ಸೆಲ್ಫೀ ಫೋಟೋ ಕೂಡ ಕ್ಲಿಕ್ಕಿಸಿಕೊಂಡಿದ್ದರು. ತಮ್ಮ ಊರಿನ ರಸ್ತೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸೈಕಲ್​ನಲ್ಲಿ ಹೋಗುತ್ತಿರುವುದನ್ನು ಕಂಡ ಜನರು ಶಾಕ್ ಆಗಿದ್ದರು. ಇದಿಷ್ಟೇ ಅಲ್ಲದೆ, ಸೈಕಲ್​ನಲ್ಲಿ ಹೋದ ಸ್ಟಾಲಿನ್ ರಸ್ತೆ ಪಕ್ಕದ ಟೀ ಅಂಗಡಿಯಲ್ಲಿ ಟೀ ಕುಡಿದ ಫೋಟೋ, ವಿಡಿಯೋಗಳು ಕೂಡ ವೈರಲ್ ಆಗಿದ್ದವು. ಎಂ.ಕೆ. ಸ್ಟಾಲಿನ್ ಅವರ ಸರಳತೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿತ್ತು.

ಫೆಬ್ರವರಿಯಲ್ಲಿ ಖಾಸಗಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಯೋಗದ ಅಗತ್ಯ ಮತ್ತು ಉಪಯೋಗದ ಬಗ್ಗೆ ಮಾತನಾಡಿದ್ದರು. ಯೋಗ ಮತ್ತು ವ್ಯಾಯಾಮ ಹೇಗೆ ತಮ್ಮ ದಿನನಿತ್ಯದ ಚಟುವಟಿಕೆಯ ಭಾಗವಾಗಿದೆ ಎಂಬುದನ್ನು ವಿವರಿಸಿದ್ದರು. ಅದಕ್ಕೆ ಪೂರಕವಾಗಿ ಇದೀಗ ಸ್ಟಾಲಿನ್ ಜಿಮ್​ನಲ್ಲಿ ವರ್ಕ್​ಔಟ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ.

ಇದನ್ನೂ ಓದಿ: Viral Video: ಒಂದು ಜಿಂಕೆಗಾಗಿ 6 ಸಿಂಹಗಳ ಕಿತ್ತಾಟ; ಭಯಾನಕ ವಿಡಿಯೋ ವೈರಲ್

Viral Video: ಸ್ವಾತಂತ್ರ್ಯ ದಿನಾಚರಣೆಗೆ ಧ್ವಜಸ್ಥಂಭ ಹತ್ತಿ ಬಾವುಟ ಹಾರಿಸಿದ ದೇಶಪ್ರೇಮಿ ಕೋತಿ!

(MK Stalin Fitness Video Tamil Nadu CM MK Stalin Hits Gym In Viral Video Sets Fitness Goals)

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ