ರಾಜಸ್ಥಾನ ರಾಜ್ಯ ಸರ್ಕಾರದ ವಿರುದ್ಧ ಶಾಸಕನ ಪ್ರತಿಭಟನೆ; ಪಾರ್ಕ್ನಲ್ಲಿ 12 ತಾಸು ಓಡುವುದಾಗಿ ಘೋಷಣೆ
ನಾನು ಅಶೋಕ್ ಗೆಹ್ಲೋಟ್ ಸರ್ಕಾರವನ್ನು ಬೆಂಬಲಿಸುತ್ತೇನೆ. ಆದರೆ ಯುವಜನರ ಸಮಸ್ಯೆಗಳನ್ನು ಎತ್ತಿ ತೋರಿಸಿ, ಅದನ್ನು ಪರಿಹರಿಸಲು ಪ್ರಯತ್ನಿಸುತ್ತೇನೆ ಎಂದು ಯಾದವ್ ಹೇಳಿದ್ದಾರೆ.
ಜೈಪುರ: ಬೆಹ್ರೋರ್ ವಿಧಾನಸಭೆ ಕ್ಷೇತ್ರದ ಸ್ವತಂತ್ರ ಶಾಸಕ ಬಲ್ಜೀತ್ ಯಾದವ್ ಅವರು ಶುಕ್ರವಾರ ಸೆಂಟ್ರಲ್ ಪಾರ್ಕ್ನಲ್ಲಿ ಓಟ ಶುರುಮಾಡಿದ್ದಾರೆ. ರಾಜಸ್ಥಾನ ರಾಜ್ಯದಲ್ಲಿರುವ ನಿರುದ್ಯೋಗ ಮತ್ತು ಭ್ರಷ್ಟಾಚಾರದ ವಿರುದ್ಧವಾಗಿ ನಾನು ಪ್ರತಿಭಟನೆ ನಡೆಸುತ್ತಿದ್ದೇನೆ. ಹೀಗಾಗಿ ಇಲ್ಲಿ 12 ತಾಸು ಓಡಲು ನಿರ್ಧರಿಸಿದ್ದೇನೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಲೈವ್ ಬಂದು ಹೇಳಿದ್ದಾರೆ. ಅದಕ್ಕೂ ಮೊದಲು ಗುರುವಾರ ರಾಜಸ್ಥಾನ ವಿಧಾನಸಭೆಯಲ್ಲಿ ಕೂಡ ಇದೇ ಘೋಷಣೆ ಮಾಡಿದ್ದರು.
Rajasthan | Independent MLA Baljeet Yadav runs in a park in Jaipur demanding the arrest of officials responsible for the leak of REET paper pic.twitter.com/n49Tg4S5zx
— ANI MP/CG/Rajasthan (@ANI_MP_CG_RJ) March 25, 2022
ನಾನು ಅಶೋಕ್ ಗೆಹ್ಲೋಟ್ ಸರ್ಕಾರವನ್ನು ಬೆಂಬಲಿಸುತ್ತೇನೆ. ಆದರೆ ಯುವಜನರ ಸಮಸ್ಯೆಗಳನ್ನು ಎತ್ತಿ ತೋರಿಸಿ, ಅದನ್ನು ಪರಿಹರಿಸಲು ಪ್ರಯತ್ನಿಸುತ್ತೇನೆ. ನಾನೊಬ್ಬ ಸ್ವತಂತ್ರ್ಯ ಅಭ್ಯರ್ಥಿ. ನಾನು ಸದನದಲ್ಲಿ ಜಾಸ್ತಿ ಮಾತನಾಡಲು ಸಾಧ್ಯವಿಲ್ಲ. ಆದರೆ ಹೀಗೆ ಓಡಿ ಪ್ರತಿಭಟನೆ ಮಾಡುವ ಮೂಲಕ ಅಸಮಾಧಾನ ಹೊರಹಾಕುತ್ತಿದ್ದೇನೆ. ಈ ರಾಜ್ಯದಲ್ಲಿ ಯುವಜನರು ಎಷ್ಟು ಕಷ್ಟಪಡುತ್ತಿದ್ದಾರೆ ಎಂಬುದನ್ನು ತೋರಿಸುತ್ತೇನೆ ಎಂದು ಬಲ್ಜಿತ್ ಯಾದವ್ ಹೇಳಿದ್ದಾರೆ. ನಿರುದ್ಯೋಗ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿದ್ದಾರೆ. ಓಟ ಕೈಬಿಡುವಂತೆ ಅನೇಕರು ಹೇಳಿದರೂ ಕೇಳದೆ ಪ್ರತಿಭಟನೆ ಮುಂದುವರಿಸುತ್ತಲೇ ಇದ್ದ ಅವರನ್ನು ನಂತರ ಆಂಬುಲೆನ್ಸ್ ಮೂಲಕ ಕರೆದುಕೊಂಡು ಹೋಗಲಾಗಿದೆ.
ಇದನ್ನೂ ಓದಿ: ಖ್ಯಾತ ಹೀರೋ ಜತೆ ನಿಶ್ಚಿತಾರ್ಥ ಮಾಡಿಕೊಂಡ ಸಂಜನಾ ಗಲ್ರಾನಿ ಸಹೋದರಿ ನಿಕ್ಕಿ
Published On - 9:29 am, Sat, 26 March 22