Video: ಅಪಘಾತದಲ್ಲಿ ಗಾಯಗೊಂಡ ಹಿರಿಯ ನಾಗರಿಕನನ್ನು ರಕ್ಷಿಸಲು ಹೋದವರ ಮೇಲೆ ಗುಂಪು ಹಲ್ಲೆ; ಪ್ರಾಣವನ್ನೇ ಕಳೆದುಕೊಂಡ ಯುವಕ

ಅನಿಮೇಶ್​ ಮತ್ತು ಇತರರ ಮೇಲೆ ಹಲ್ಲೆ ನಡೆಸಿದ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾಗಳಲ್ಲಿ ಸಿಕ್ಕಾಪಟೆ ವೈರಲ್​ ಆಗಿದೆ. ಪೊಲೀಸರ ಎದುರೇ ಈ ಹೊಡೆದಾಟ ನಡೆದಿದೆ ಎಂದೂ ಹೇಳಲಾಗಿದೆ.

Video: ಅಪಘಾತದಲ್ಲಿ ಗಾಯಗೊಂಡ ಹಿರಿಯ ನಾಗರಿಕನನ್ನು ರಕ್ಷಿಸಲು ಹೋದವರ ಮೇಲೆ ಗುಂಪು ಹಲ್ಲೆ; ಪ್ರಾಣವನ್ನೇ ಕಳೆದುಕೊಂಡ ಯುವಕ
ಅಸ್ಸಾಂನಲ್ಲಿ ಹಲ್ಲೆಯ ಚಿತ್ರ
Follow us
TV9 Web
| Updated By: Lakshmi Hegde

Updated on: Nov 30, 2021 | 8:42 AM

ರಸ್ತೆಯಲ್ಲಿ ಅಪಘಾತವಾಗಿ ಗಾಯಗೊಂಡು ಬಿದ್ದಿದ್ದ ಹಿರಿಯ ನಾಗರಿಕನಿಗೆ ನೆರವು ನೀಡಲು ಮುಂದಾದವರ ಮೇಲೆ ಗುಂಪೊಂದು ಹಲ್ಲೆ ಮಾಡಿದ ಪರಿಣಾಮ ಒಬ್ಬ ಮೃತಪಟ್ಟ ದುರ್ಘಟನೆ ಅಸ್ಸಾಂನ ಜೊಹ್ರತ್​​ನಲ್ಲಿ ನಡೆದಿದೆ. ಹೀಗೆ ಮೃತಪಟ್ಟವನು ಆಲ್ ಅಸ್ಸಾಂ ವಿದ್ಯಾರ್ಥಿ ಒಕ್ಕೂಟದ ನಾಯಕ (AASU). ಈ ಗುಂಪು ಹಲ್ಲೆಯಲ್ಲಿ ಒಬ್ಬ ಪತ್ರಕರ್ತ ಸೇರಿ ಇಬ್ಬರು ಗಾಯಗೊಂಡಿದ್ದಾರೆ. 

ಮೃತ ಯವಕನನ್ನು ಅನಿಮೇಶ್​ ಭೂಯಾನ್​ (24) ಎಂದು ಗುರುತಿಸಲಾಗಿದೆ. ನಿರ್ಮಲ್​ ಚರಿಯಾಲಿ ಎಂಬಲ್ಲಿ ಒಂದು ರಸ್ತೆ ಅಪಘಾತವಾಗಿತ್ತು. ಅದರಲ್ಲಿ ಹಿರಿಯ ನಾಗರಿಕರೊಬ್ಬರಿಗೆ ಗಾಯವಾಗಿತ್ತು. ಗಾಯಗೊಂಡು ಬಿದ್ದಿದ್ದ ಅವರನ್ನು ರಕ್ಷಿಸಲು ಮುಂದಾಗ ಅನಿಮೇಶ್​ ಭೂಯಾನ್​ ಮತ್ತು ಇತರ ಇಬ್ಬರ ಮೇಲೆ ಅಲ್ಲಿಯೇ ಇದ್ದ ಗುಂಪೊಂದು ದಾಳಿ ನಡೆಸಿದೆ.

ಅನಿಮೇಶ್​ ಮತ್ತು ಇತರರ ಮೇಲೆ ಹಲ್ಲೆ ನಡೆಸಿದ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾಗಳಲ್ಲಿ ಸಿಕ್ಕಾಪಟೆ ವೈರಲ್​ ಆಗಿದೆ. ಪೊಲೀಸರ ಎದುರೇ ಈ ಹೊಡೆದಾಟ ನಡೆದಿದೆ ಎಂದೂ ಹೇಳಲಾಗಿದೆ. ಇನ್ನು ಗಾಯಗೊಂಡ ಮೂವರನ್ನೂ ಪೊಲೀಸರು ಜೊಹ್ರತ್​ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಿದ್ದರು. ಇವರಲ್ಲಿ ಅನಿಮೇಶ್​ ಸ್ಥಿತಿ ಗಂಭೀರವಾಗಿದ್ದು, ಹೋಗುವಷ್ಟರಲ್ಲೇ ಮೃತಪಟ್ಟಿದ್ದರು.

ಘಟನೆಗೆ ಸಂಬಂಧಪಟ್ಟಂತೆ ಪೊಲೀಸರು ಇದೀಗ 10 ಮಂದಿಯನ್ನು ಬಂಧಿಸಿದ್ದಾರೆ.  ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಯುತ್ತಿದೆ. ಇನ್ನುಳಿದವರನ್ನು ಪತ್ತೆ ಮಾಡಲು ಕಾರ್ಯಾಚರಣೆ  ನಡೆಯುತ್ತಿದೆ ಎಂದು ಸ್ಥಳೀಯ ಪೊಲೀಸ್​ ಅಧಿಕಾರಿ ತಿಳಿಸಿದ್ದಾರೆ. ಆರೋಪಿಗಳನ್ನು ಇನ್ನು 24 ಗಂಟೆಯಲ್ಲಿ ಬಂಧಿಸುವಂತೆ ಜೊಹ್ರತ್​ ಜಿಲ್ಲಾ ಎಎಎಸ್​ಯು ಆಗ್ರಹ ಮಾಡಿದೆ.

ಇದನ್ನೂ ಓದಿ: ಚೆನ್ನಾಗಿ ನಿದ್ರೆ ಮಾಡಬೇಕಾದರೆ, ಹಾಸಿಗೆಗೆ ತೆರಳುವ 4-5 ಗಂಟೆ ಮೊದಲು ರಾತ್ರಿಯೂಟ ಸೇವಿಸಬೇಕು: ಡಾ ಸೌಜನ್ಯ ವಶಿಷ್ಠ

Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ