AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jammu and Kashmir Earthquake: ಜಮ್ಮು ಮತ್ತು ಕಾಶ್ಮೀರದಲ್ಲಿ 4.8 ತೀವ್ರತೆಯ ಭೂಕಂಪ

ಜಮ್ಮು ಕಾಶ್ಮೀರದಲ್ಲಿ ಭೂಕಂಪದ ಅನುಭವವಾಗಿದೆ. ಸೋಮವಾರ ಬೆಳಗ್ಗೆ ಭೂಕಂಪನದ ಅನುಭವವಾಗಿದೆ, ಕಣಿವೆ ಪ್ರದೇಶದಲ್ಲಿ ಭೂಕಂಪ ಸಂಭವಿಸಿದೆ. ಇಂದು ಮುಂಜಾನೆ ಕಾಶ್ಮೀರ ಕಣಿವೆಯಲ್ಲಿ ಭೂಮಿ ಕಂಪಿಸಿದ ಅನುಭವವಾದ ಕಾರಣ ಬಾರಾಮುಲ್ಲಾದ ಜನರು ತಮ್ಮ ಮನೆಗಳಿಂದ ಹೊರಗೆ ಓಡಿಬಂದಿದ್ದರು. ಇಲ್ಲಿಯವರೆಗೆ ಯಾವುದೇ ಹಾನಿ ಸಂಭವಿಸಿದ ವರದಿಗಳು ಲಭ್ಯವಾಗಿಲ್ಲ.

Jammu and Kashmir Earthquake: ಜಮ್ಮು ಮತ್ತು ಕಾಶ್ಮೀರದಲ್ಲಿ 4.8 ತೀವ್ರತೆಯ ಭೂಕಂಪ
ಭೂಕಂಪImage Credit source: India TV
ನಯನಾ ರಾಜೀವ್
|

Updated on:Feb 02, 2026 | 7:39 AM

Share

ಶ್ರೀನಗರ, ಫೆಬ್ರವರಿ 02: ಕಳೆದ ಕೆಲವು ದಿನಗಳಿಂದ ದೇಶದ ವಿವಿಧ ಭಾಗಗಳಲ್ಲಿ ಭೂಕಂಪ(Earthquake)ದ ಅನುಭವವಾಗುತ್ತಿದ್ದು, ಭೂಕಂಪದ ಭೀತಿ ಹೆಚ್ಚಾಗಿದೆ. ಸೋಮವಾರ ಬೆಳಗ್ಗೆ ಭೂಕಂಪನದ ಅನುಭವವಾಗಿದೆ, ಕಣಿವೆ ಪ್ರದೇಶದಲ್ಲಿ 4.8 ತೀವ್ರತೆಯ ಭೂಕಂಪ ಸಂಭವಿಸಿದೆ. ಇಂದು ಮುಂಜಾನೆ ಕಾಶ್ಮೀರ ಕಣಿವೆಯಲ್ಲಿ ಭೂಮಿ ಕಂಪಿಸಿದ ಅನುಭವವಾದ ಕಾರಣ ಬಾರಾಮುಲ್ಲಾದ ಜನರು ತಮ್ಮ ಮನೆಗಳಿಂದ ಹೊರಗೆ ಓಡಿಬಂದಿದ್ದರು. ಇಲ್ಲಿಯವರೆಗೆ ಯಾವುದೇ ಹಾನಿ ಸಂಭವಿಸಿದ ವರದಿಗಳು ಲಭ್ಯವಾಗಿಲ್ಲ.

ಸೋಮವಾರ ಬೆಳಗಿನ ಜಾವ ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಭವಿಸಿದ ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.8 ರಷ್ಟಿತ್ತು. ಫೆಬ್ರವರಿ 2, 2026 ರಂದು ಬೆಳಗ್ಗೆ 5.35 ಕ್ಕೆ ಭೂಕಂಪ ಸಂಭವಿಸಿದೆ. ರಾಜ್ಯದ ಹಂಜಿವೇರಾ ಪ್ರದೇಶದಲ್ಲಿ 10 ಕಿಲೋಮೀಟರ್ ಆಳದಲ್ಲಿ ಭೂಕಂಪದ ಕೇಂದ್ರಬಿಂದು ಇತ್ತು. ಇಲ್ಲಿಯವರೆಗೆ ಯಾವುದೇ ಸಾವುನೋವು ಅಥವಾ ಆಸ್ತಿ ಹಾನಿ ವರದಿಯಾಗಿಲ್ಲ.

ಜಮ್ಮು ಮತ್ತು ಕಾಶ್ಮೀರದಲ್ಲಿ ತೀವ್ರ ಚಳಿ ಇದೆ. ಇದರ ಜೊತೆಗೆ, ಅನೇಕ ಪ್ರದೇಶಗಳಲ್ಲಿ ಭಾರೀ ಹಿಮಪಾತವಾಗುತ್ತಿದೆ. ಈ ಭೂಕಂಪವು ನಿವಾಸಿಗಳಲ್ಲಿ ತೊಂದರೆಯನ್ನುಂಟುಮಾಡಿದೆ, ಜನರು ಬೆಳಗ್ಗೆ ಚಳಿಯಲ್ಲಿ ತಮ್ಮ ಮನೆಗಳನ್ನು ಬಿಡಬೇಕಾಯಿತು.

ಸೋಮವಾರ ಮುಂಜಾನೆ ನೆರೆಯ ಬಾಂಗ್ಲಾದೇಶದಲ್ಲಿ ಕಂಪನದ ಅನುಭವವಾಗಿತ್ತು. ಭಾನುವಾರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಭೂಕಂಪನವು ಭೂಮಿಯನ್ನು ನಡುಗಿಸಿತು. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ಪ್ರಕಾರ, ಭೂಕಂಪವು 20 ಕಿಲೋಮೀಟರ್ ಆಳದಲ್ಲಿ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.0 ತೀವ್ರತೆ ದಾಖಲಾಗಿದೆ. ಫಿಲಿಪೈನ್ಸ್‌ನ ಮಿಂಡಾನಾವೊ ದ್ವೀಪದಲ್ಲಿ ಬುಧವಾರ ಪ್ರಬಲ ಭೂಕಂಪದ ವರದಿಯಾಗಿದ್ದು, ರಿಕ್ಟರ್ ಮಾಪಕದಲ್ಲಿ 6.0 ತೀವ್ರತೆ ದಾಖಲಾಗಿದೆ.

ಮತ್ತಷ್ಟು ಓದಿ: Assam Earthquake: ಅಸ್ಸಾಂನಲ್ಲಿ 5.1 ತೀವ್ರತೆಯ ಪ್ರಬಲ ಭೂಕಂಪ

ಭೂಮಿಯ ಹೊರಪದರವನ್ನು ರೂಪಿಸುವ ಏಳು ಪ್ರಮುಖ ಟೆಕ್ಟೋನಿಕ್ ಪ್ಲೇಟ್‌ಗಳ ಚಲನೆಯಿಂದಾಗಿ ಭೂಕಂಪಗಳು ಸಂಭವಿಸುತ್ತವೆ. ಈ ಪ್ಲೇಟ್‌ಗಳು ಆಯಾ ವಲಯಗಳಲ್ಲಿ ತೇಲುತ್ತಲೇ ಇರುತ್ತವೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಸೋಮವಾರ ಬೆಳಗ್ಗೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮತ್ತೊಂದು ಭೂಕಂಪ ಸಂಭವಿಸಿದೆ. ಬೆಳಗಿನ ಜಾವ 3.31 ಕ್ಕೆ ಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆ ದಾಖಲಾಗಿದೆ. ಭೂಕಂಪದ ಕೇಂದ್ರಬಿಂದು ನಿಕೋಬಾರ್ ಪ್ರದೇಶದಲ್ಲಿ 10 ಕಿಲೋಮೀಟರ್ ಆಳದಲ್ಲಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:37 am, Mon, 2 February 26

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ