AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್​​ಸ್ಟಾಗ್ರಾಂನಲ್ಲಿ ಪ್ರಧಾನಿ ಮೋದಿ ಹೊಸ ದಾಖಲೆ, 105 ಮಿಲಿಯನ್‌ ತಲುಪಿದ ಫಾಲೋವರ್ಸ್ ಸಂಖ್ಯೆ

ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂನಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಹೊಸ ಇತಿಹಾಸ ಬರೆದಿದ್ದಾರೆ. ಅವರ ಅಧಿಕೃತ ಇನ್‌ಸ್ಟಾಗ್ರಾಂ ಖಾತೆಯ ಫಾಲೋವರ್ಸ್ ಸಂಖ್ಯೆ 105 ಮಿಲಿಯನ್ (10.5 ಕೋಟಿ) ಗಡಿ ದಾಟಿದ್ದು, ಜಾಗತಿಕ ಮಟ್ಟದಲ್ಲಿ ಈ ಮೈಲಿಗಲ್ಲು ತಲುಪಿದ ವಿಶ್ವದ ಮೊದಲ ರಾಜಕೀಯ ನಾಯಕ ಎನಿಸಿಕೊಂಡಿದ್ದಾರೆ. ವಿಶೇಷವೆಂದರೆ, ಕೇವಲ ಒಂದೇ ವಾರದಲ್ಲಿ ಪ್ರಧಾನಿ ಮೋದಿ ಅವರ ಖಾತೆಗೆ 4 ಮಿಲಿಯನ್ (40 ಲಕ್ಷ) ಹೊಸ ಫಾಲೋವರ್ಸ್‌ಗಳು ಸೇರ್ಪಡೆಯಾಗಿದ್ದಾರೆ.

ಇನ್​​ಸ್ಟಾಗ್ರಾಂನಲ್ಲಿ ಪ್ರಧಾನಿ ಮೋದಿ ಹೊಸ ದಾಖಲೆ, 105 ಮಿಲಿಯನ್‌ ತಲುಪಿದ ಫಾಲೋವರ್ಸ್ ಸಂಖ್ಯೆ
ನರೇಂದ್ರ ಮೋದಿ
ನಯನಾ ರಾಜೀವ್
|

Updated on: Jul 28, 2026 | 1:35 PM

Share

ನವದೆಹಲಿ, ಜುಲೈ 28: ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂನಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಹೊಸ ಇತಿಹಾಸ ಬರೆದಿದ್ದಾರೆ. ಅವರ ಅಧಿಕೃತ ಇನ್‌ಸ್ಟಾಗ್ರಾಂ ಖಾತೆಯ ಫಾಲೋವರ್ಸ್ ಸಂಖ್ಯೆ 105 ಮಿಲಿಯನ್ (10.5 ಕೋಟಿ) ಗಡಿ ದಾಟಿದ್ದು, ಜಾಗತಿಕ ಮಟ್ಟದಲ್ಲಿ ಈ ಮೈಲಿಗಲ್ಲು ತಲುಪಿದ ವಿಶ್ವದ ಮೊದಲ ರಾಜಕೀಯ ನಾಯಕ ಎನಿಸಿಕೊಂಡಿದ್ದಾರೆ. ವಿಶೇಷವೆಂದರೆ, ಕೇವಲ ಒಂದೇ ವಾರದಲ್ಲಿ ಪ್ರಧಾನಿ ಮೋದಿ ಅವರ ಖಾತೆಗೆ 4 ಮಿಲಿಯನ್ (40 ಲಕ್ಷ) ಹೊಸ ಫಾಲೋವರ್ಸ್‌ಗಳು ಸೇರ್ಪಡೆಯಾಗಿದ್ದಾರೆ.

ಫಾಲೋವರ್ಸ್ ಏರಿಕೆಗೆ ಪ್ರಮುಖ ಕಾರಣವೇನು? ದೇಶಾದ್ಯಂತ ನಡೆಯುತ್ತಿರುವ ನೀಟ್ ಯುಜಿ ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಮತ್ತು ‘ಜೆನ್ ಝಿ’ಗಳು (Gen Z) ನಡೆಸುತ್ತಿದ್ದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಪ್ರಧಾನಿ ಮೋದಿ ಅವರು ‘ಸೆಲ್ಫಿ ವೀಡಿಯೊ’ ಮಾದರಿಯಲ್ಲಿ ಇನ್‌ಸ್ಟಾಗ್ರಾಂ ರೀಲ್ಸ್ ಬಿಡುಗಡೆ ಮಾಡಿದ್ದರು.

ಫ್ರೆಂಡ್ಸ್ ಎಂದು ಆತ್ಮೀಯವಾಗಿ ಯುವಜನತೆಯನ್ನು ಉದ್ದೇಶಿಸಿ ಮಾತನಾಡಿದ್ದ ಈ ವೀಡಿಯೊದಲ್ಲಿ, ಪರೀಕ್ಷಾ ಮಾಫಿಯಾ ವಿರುದ್ಧ ಕಠಿಣ ಕಾನೂನು ತರುವುದು ಹಾಗೂ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಗಳನ್ನು ಸ್ಥಾಪಿಸುವ ಭರವಸೆ ನೀಡಿದ್ದರು. ಈ ವೀಡಿಯೊ ಬಿಡುಗಡೆಯಾದ ಕೇವಲ 24 ಗಂಟೆಗಳಲ್ಲಿ 300 ಮಿಲಿಯನ್‌ಗಿಂತಲೂ (30 ಕೋಟಿ) ಹೆಚ್ಚು ವೀಕ್ಷಣೆಗಳನ್ನು ಗಳಿಸಿ ಇನ್‌ಸ್ಟಾಗ್ರಾಂ ಇತಿಹಾಸದಲ್ಲೇ ಭಾರಿ ಸದ್ದು ಮಾಡಿತು. ಇದರಿಂದಾಗಿ ಲಕ್ಷಾಂತರ ಯುವಕರು ಒಂದೇ ರಾತ್ರಿಯಲ್ಲಿ ಮೋದಿಯವರ ಖಾತೆಯನ್ನು ಫಾಲೋ ಮಾಡಲು ಪ್ರಾರಂಭಿಸಿದರು.

ಮತ್ತಷ್ಟು ಓದಿ: ಮೋದಿ ವಿಡಿಯೋ ಡಿಲೀಟ್, ಮೆಟಾ ಸಂಸ್ಥೆಯ ಗ್ಲೋಬಲ್ ಪಬ್ಲಿಕ್ ಪಾಲಿಸಿ ಹೆಡ್‌ಗೆ ಸಮನ್ಸ್: ‘ಮೆಟಾ’ ವಿವರಣೆಗೆ ಕೇಂದ್ರ ಅಸಮಾಧಾನ

ಇನ್‌ಸ್ಟಾಗ್ರಾಂನಲ್ಲಿ ವಿಶ್ವದ ಯಾವುದೇ ರಾಜಕೀಯ ನಾಯಕನಿಗಿಂತ ಮೋದಿ ಅತ್ಯಂತ ಮುಂಚೂಣಿಯಲ್ಲಿದ್ದಾರೆ. ಎರಡನೇ ಸ್ಥಾನದಲ್ಲಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುಮಾರು 43.2 ಮಿಲಿಯನ್ ಫಾಲೋವರ್ಸ್‌ಗಳನ್ನು ಹೊಂದಿದ್ದು, ಅವರಿಗಿಂತ ಮೋದಿ ಅವರ ಫಾಲೋವರ್ಸ್ ಸಂಖ್ಯೆ ದುಪ್ಪಟ್ಟು ಅಧಿಕವಾಗಿದೆ.

ಭಾರತೀಯ ರಾಜಕಾರಣದಲ್ಲಿ ಭಾರಿ ಅಂತರ: ಭಾರತದ ಇತರ ಪ್ರಮುಖ ರಾಜಕಾರಣಿಗಳಾದ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ (16.1 ಮಿಲಿಯನ್) ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (12.6 ಮಿಲಿಯನ್) ಅವರಿಗಿಂತ ಮೋದಿ ಮುಂಚೂಣಿಯಲ್ಲಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಲಷ್ಕರ್ ಟಾಪ್ ಕಮಾಂಡರ್ ಫೌಜಿ ಮೂಸಾ ಎನ್‌ಕೌಂಟರ್‌ನಲ್ಲಿ ಹತ
ಲಷ್ಕರ್ ಟಾಪ್ ಕಮಾಂಡರ್ ಫೌಜಿ ಮೂಸಾ ಎನ್‌ಕೌಂಟರ್‌ನಲ್ಲಿ ಹತ