ರೈತರಿಗೆ ಖುಷಿ ಸುದ್ದಿ; ಪ್ರಧಾನ ಮಂತ್ರಿ ಫಸಲ್ ಬಿಮಾ, ಬೆಳೆ ವಿಮಾ ಯೋಜನೆಯ ಮುಂದುವರಿಕೆಗೆ ಕೇಂದ್ರ ಸಂಪುಟ ಅನುಮೋದನೆ

2021-22ರಿಂದ 2025-26ರವರೆಗೆ ಒಟ್ಟಾರೆ ರೂ 69,515.71 ಕೋಟಿ ವೆಚ್ಚದೊಂದಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಮತ್ತು ಪುನರ್​ರಚಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಮುಂದುವರಿಕೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. 2025-26ರ ವರೆಗೆ ದೇಶದಾದ್ಯಂತ ರೈತರಿಗೆ ತಡೆಗಟ್ಟಲಾಗದ ನೈಸರ್ಗಿಕ ವಿಕೋಪಗಳಿಂದ ಬೆಳೆಗಳ ಅಪಾಯದ ವ್ಯಾಪ್ತಿಗೆ ಇದು ಸಹಾಯ ಮಾಡುತ್ತದೆ ಎಂದು ಕ್ಯಾಬಿನೆಟ್ ಹೇಳಿದೆ.

ರೈತರಿಗೆ ಖುಷಿ ಸುದ್ದಿ; ಪ್ರಧಾನ ಮಂತ್ರಿ ಫಸಲ್ ಬಿಮಾ, ಬೆಳೆ ವಿಮಾ ಯೋಜನೆಯ ಮುಂದುವರಿಕೆಗೆ ಕೇಂದ್ರ ಸಂಪುಟ ಅನುಮೋದನೆ
Crop Insurance
Follow us
ಸುಷ್ಮಾ ಚಕ್ರೆ
|

Updated on:Jan 01, 2025 | 4:42 PM

ನವದೆಹಲಿ: ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಮತ್ತು ಪುನರ್​ರಚನೆ ಮಾಡಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು 2021-22ರಿಂದ 2025-26ರವರೆಗೆ ಒಟ್ಟಾರೆ 69,515.71 ಕೋಟಿ ರೂ.ಗಳೊಂದಿಗೆ 2025-26ರವರೆಗೆ ಮುಂದುವರಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟವು ಅನುಮೋದನೆ ನೀಡಿದೆ.

ಇಂದು ದೆಹಲಿಯಲ್ಲಿ ಸುದ್ದಿಗಾರರಿಗೆ ಈ ಕುರಿತು ಮಾಹಿತಿ ನೀಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, “ಈ ನಿರ್ಧಾರವು 2025-26 ರವರೆಗೆ ದೇಶಾದ್ಯಂತ ರೈತರಿಗೆ ನೈಸರ್ಗಿಕ ವಿಕೋಪಗಳಿಂದ ಉಂಟಾಗುವ ಬೆಳೆಗಳ ನಾಶದಿಂದ ಬಚಾವಾಗಲು ಸಹಾಯ ಮಾಡುತ್ತದೆ.” ಎಂದಿದ್ದಾರೆ.

ತಂತ್ರಜ್ಞಾನವನ್ನು ಬಳಸಿಕೊಂಡು ಕನಿಷ್ಠ ಶೇ. 30ರಷ್ಟು ತೂಕದೊಂದಿಗೆ ಇಳುವರಿ ಅಂದಾಜಿಗಾಗಿ ರಿಮೋಟ್ ಸೆನ್ಸಿಂಗ್ ತಂತ್ರಜ್ಞಾನವನ್ನು ಬಳಸಲಾಗುತ್ತದೆ. 9 ಪ್ರಮುಖ ರಾಜ್ಯಗಳು ಪ್ರಸ್ತುತ ಇದನ್ನು ಜಾರಿಗೊಳಿಸುತ್ತಿವೆ. ಅವುಗಳೆಂದರೆ, ಆಂಧ್ರ ಪ್ರದೇಶ, ಅಸ್ಸಾಂ, ಹರಿಯಾಣ, ಉತ್ತರ ಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರ, ಒಡಿಶಾ, ತಮಿಳುನಾಡು ಮತ್ತು ಕರ್ನಾಟಕ. ಉಳಿದ ರಾಜ್ಯಗಳಲ್ಲೂ ಇದನ್ನು ಶೀಘ್ರದಲ್ಲೇ ಜಾರಿಗೊಳಿಸಲಾಗುವುದು.

ಇದನ್ನೂ ಓದಿ: ಫಸಲ್ ಬಿಮಾ ಯೋಜನೆಯಲ್ಲಿ ರಾಜ್ಯಕ್ಕೆ ಬೀದರ್ ನಂಬರ್ ಒನ್​: ರೈತರ ಆಸಕ್ತಿಗೆ ಪ್ರಧಾನಿ ಮೋದಿ ಶ್ಲಾಘನೆ

ಈ 2 ಯೋಜನೆಯ ಅನುಷ್ಠಾನದಲ್ಲಿ ದೊಡ್ಡ ಪ್ರಮಾಣದ ತಂತ್ರಜ್ಞಾನ ಬಳಕೆಗೆ ಅನುಕೂಲವಾಗುವಂತೆ 824.77 ಕೋಟಿ ರೂ. ಹಣವನ್ನು ನೀಡಲಾಗುವುದು. ಇದು ಪಾರದರ್ಶಕತೆಯನ್ನು ಹೆಚ್ಚಿಸುತ್ತದೆ. ಈ ಕಾರ್ಯಕ್ರಮದೊಳಗೆ YESTECH ಮತ್ತು WINDSನಂತಹ ತಾಂತ್ರಿಕ ಉಪಕ್ರಮಗಳನ್ನು ಬೆಂಬಲಿಸಲು ನಿಧಿಯನ್ನು ಬಳಸಲಾಗುತ್ತದೆ. ಇದರ ಜೊತೆಗೆ ಸಂಶೋಧನೆ ಮತ್ತು ಅಭಿವೃದ್ಧಿ ಅಧ್ಯಯನಗಳನ್ನು ನಡೆಸಲಾಗುತ್ತದೆ.

ಹವಾಮಾನ ಮಾಹಿತಿ ಮತ್ತು ನೆಟ್‌ವರ್ಕ್ ಡೇಟಾ ಸಿಸ್ಟಮ್ಸ್ (WINDS) ಯೋಜನೆಯು ಬ್ಲಾಕ್ ಮಟ್ಟದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರಗಳನ್ನು (AWS) ಮತ್ತು ಪಂಚಾಯತ್ ಮಟ್ಟದಲ್ಲಿ ಸ್ವಯಂಚಾಲಿತ ಮಳೆಮಾಪಕಗಳನ್ನು (ARGs) ಸ್ಥಾಪಿಸಲು ಯೋಜನೆ ರೂಪಿಸಿದೆ. ಹೈಪರ್-ಲೋಕಲ್ ಹವಾಮಾನ ಡೇಟಾವನ್ನು ಸಂಗ್ರಹಿಸಲು ಪ್ರಸ್ತುತ ನೆಟ್‌ವರ್ಕ್ ಸಾಂದ್ರತೆಯನ್ನು ಗಣನೀಯವಾಗಿ ಹೆಚ್ಚಿಸುವುದು WINDSನ ಗುರಿಯಾಗಿದೆ. ಈ ಉಪಕ್ರಮದ ಭಾಗವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಡೇಟಾ ಬಾಡಿಗೆ ವೆಚ್ಚಗಳನ್ನು ಮಾತ್ರ ಭರಿಸುತ್ತವೆ.

ಇದನ್ನೂ ಓದಿ: PMFBY: ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆ ಪರಿಣಾಮಕಾರಿ ಅನುಷ್ಠಾನದಲ್ಲಿ ಕರ್ನಾಟಕ ನಂ.1

ಕೇರಳ, ಉತ್ತರ ಪ್ರದೇಶ, ಹಿಮಾಚಲ ಪ್ರದೇಶ, ಪುದುಚೇರಿ, ಅಸ್ಸಾಂ, ಒಡಿಶಾ, ಕರ್ನಾಟಕ, ಉತ್ತರಾಖಂಡ ಮತ್ತು ರಾಜಸ್ಥಾನ ಸೇರಿದಂತೆ 9 ರಾಜ್ಯಗಳು ಪ್ರಸ್ತುತ ವಿಂಡ್ಸ್ ಅನ್ನು ಕಾರ್ಯಗತಗೊಳಿಸುವ ಪ್ರಕ್ರಿಯೆಯಲ್ಲಿವೆ, ಆದರೆ ಇತರ ರಾಜ್ಯಗಳು ಸಹ ಈ ಉಪಕ್ರಮಕ್ಕೆ ಸೇರಲು ಆಸಕ್ತಿ ತೋರಿಸಿವೆ.

ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ (PMFBY) ಒಂದು ಸರ್ಕಾರಿ ಪ್ರಾಯೋಜಿತ ಬೆಳೆ ವಿಮಾ ಯೋಜನೆಯಾಗಿದ್ದು ಅದು ಒಂದೇ ವೇದಿಕೆಯಲ್ಲಿ ಅನೇಕ ಪಾರ್ಟನರ್​ಗಳನ್ನು ಒಟ್ಟುಗೂಡಿಸುತ್ತದೆ. ಅನಿರೀಕ್ಷಿತ ಘಟನೆಗಳಿಂದ ಬೆಳೆ ನಷ್ಟ ಅಥವಾ ಹಾನಿಯನ್ನು ಎದುರಿಸುತ್ತಿರುವ ರೈತರಿಗೆ ಹಣಕಾಸಿನ ನೆರವು ನೀಡುವ ಮೂಲಕ ಕೃಷಿ ವಲಯದಲ್ಲಿ ಸುಸ್ಥಿರ ಉತ್ಪಾದನೆಯನ್ನು ಬೆಂಬಲಿಸುವ ಗುರಿಯನ್ನು ಫಸಲ್ ಭಿಮಾ ಯೋಜನೆ ಹೊಂದಿದೆ. ಈ ಯೋಜನೆಯು ರೈತರ ಆದಾಯವನ್ನು ಸ್ಥಿರಗೊಳಿಸುತ್ತದೆ, ನವೀನ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳುವುದನ್ನು ಉತ್ತೇಜಿಸುತ್ತದೆ, ಆಹಾರ ಭದ್ರತೆ ಒದಗಿಸುತ್ತದೆ.

ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದ ಉಂಟಾಗುವ ಆರ್ಥಿಕ ನಷ್ಟದಿಂದ ರೈತರನ್ನು ರಕ್ಷಿಸಲು 2016ರಲ್ಲಿ ಭಾರತ ಸರ್ಕಾರವು ಪುನರ್ರಚಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ (RWBCIS) ಅನ್ನು ಪರಿಚಯಿಸಿತು. ಈ ಯೋಜನೆಯು ಆಹಾರ ಬೆಳೆಗಳು, ಎಣ್ಣೆಕಾಳುಗಳು ಮತ್ತು ವಾಣಿಜ್ಯ ಅಥವಾ ತೋಟಗಾರಿಕಾ ಬೆಳೆಗಳನ್ನು ಒಳಗೊಂಡಂತೆ ಬೆಳೆಗಳ ವ್ಯಾಪ್ತಿಯನ್ನು ನೀಡುತ್ತದೆ. ಬರ, ಪ್ರವಾಹ, ಚಂಡಮಾರುತ ಮತ್ತು ಆಲಿಕಲ್ಲು ಮಳೆಯಂತಹ ವಿವಿಧ ಅಪಾಯಗಳಿಗೆ ಸಮಗ್ರ ವಿಮೆ ರಕ್ಷಣೆಯನ್ನು ಒದಗಿಸುವುದು ಇದರ ಪ್ರಾಥಮಿಕ ಉದ್ದೇಶವಾಗಿದೆ, ಇದರಿಂದಾಗಿ ರೈತರ ಮೇಲೆ ಬೆಳೆ ಹಾನಿಯ ಪರಿಣಾಮ ಕಡಿಮೆಯಾಗುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:11 pm, Wed, 1 January 25

ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ