ರಾಷ್ಟ್ರೀಯ ಆರೋಗ್ಯ ಮಿಷನ್ 5 ವರ್ಷಕ್ಕೆ ವಿಸ್ತರಣೆ; ಮೋದಿ ಸಂಪುಟ ನಿರ್ಧಾರ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಂಪುಟದ ಸಭೆ ಇಂದು ನಡೆದಿದ್ದು, ಈ ಸಭೆಯಲ್ಲಿ ರಾಷ್ಟ್ರೀಯ ಆರೋಗ್ಯ ಮಿಷನ್ ಅನ್ನು 5 ವರ್ಷಗಳವರೆಗೆ ವಿಸ್ತರಿಸಲು ನಿರ್ಧರಿಸಲಾಗಿದೆ. ರಾಷ್ಟ್ರಕ್ಕೆ ಆರೋಗ್ಯ ಸೇವೆಗಳನ್ನು ಒದಗಿಸುವಲ್ಲಿ ರಾಷ್ಟ್ರೀಯ ಆರೋಗ್ಯ ಮಿಷನ್ ನಿರ್ಣಾಯಕ ಪ್ರಯತ್ನವಾಗಿದೆ. ಸಾಂಕ್ರಾಮಿಕ ರೋಗದ ಸಮಯದಲ್ಲಿ ಈ ಮಿಷನ್ ಅಡಿಯಲ್ಲಿ 220 ಕೋಟಿ ಡೋಸ್‌ಗಳಿಗೂ ಹೆಚ್ಚು ಲಸಿಕೆಗಳನ್ನು ನೀಡಲಾಗಿತ್ತು.
ನವದೆಹಲಿ: ಮೋದಿ ನೇತೃತ್ವದ ಸಚಿವ ಸಂಪುಟದ ಸಭೆಯಲ್ಲಿ ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್ಎಚ್ಎಂ) ಅನ್ನು ಮುಂದಿನ 5 ವರ್ಷಗಳಿಗೆ ವಿಸ್ತರಿಸಲು ನಿರ್ಧರಿಸಲಾಗಿದೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ಕೇಂದ್ರ ಸಚಿವ ಸಂಪುಟವು ರಾಷ್ಟ್ರೀಯ ಆರೋಗ್ಯ ಮಿಷನ್ (NHM) ಅನ್ನು ಇನ್ನೂ 5 ವರ್ಷಗಳವರೆಗೆ ವಿಸ್ತರಿಸಲು ನಿರ್ಧರಿಸಿದೆ ಎಂದು ಹೇಳಿದರು.
NHMಗೆ 5 ವರ್ಷಗಳ ವಿಸ್ತರಣೆಯನ್ನು ಘೋಷಿಸಲಾಗಿದ್ದು, ಈ ಯೋಜನೆಗೆ ಯಾವುದೇ ಬಜೆಟ್ ನಿರ್ಬಂಧಗಳಿಲ್ಲ ಎಂದು ಕೇಂದ್ರ ಸರ್ಕಾರ ಖಚಿತಪಡಿಸುತ್ತದೆ ಎಂದು ಗೋಯಲ್ ಹೇಳಿದರು. ಮುಂಬರುವ ಬಜೆಟ್ ಸಾರ್ವತ್ರಿಕ ಆರೋಗ್ಯ ಸೇವೆಯ ಬಗ್ಗೆ ಕೇಂದ್ರದ ಬದ್ಧತೆಯನ್ನು ತೋರಿಸುತ್ತದೆ ಎಂದು ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಸುಳಿವು ನೀಡಿದರು.
ಇದನ್ನೂ ಓದಿ: ಅಕ್ರಮ ಗಣಿಗಾರಿಕೆ ಕೇಸ್ಗಳ ತನಿಖೆ ಸೇರಿ ಹಲವು ನಿರ್ಧಾರಗಳಿಗೆ ಕ್ಯಾಬಿನೆಟ್ ಅಸ್ತು: ಇಲ್ಲಿದೆ ಸಂಪೂರ್ಣ ಮಾಹಿತಿ
“ಫೆಬ್ರವರಿ 1ರಂದು ಬಜೆಟ್ ಮಂಡಿಸಲಾಗುವುದು. ನಮ್ಮ ಸರ್ಕಾರ ಯಾವಾಗಲೂ ಆರೋಗ್ಯದ ಮೇಲೆ ಹೆಚ್ಚಿನ ಕೇಂದ್ರೀಕರಿಸಿದೆ. ರಾಷ್ಟ್ರೀಯ ಆರೋಗ್ಯ ಮಿಷನ್‌ಗೆ ಅಗತ್ಯವಿರುವ ಸಂಪೂರ್ಣ ಹಣವನ್ನು ಒದಗಿಸಲಾಗುವುದು” ಎಂದು ಸಚಿವರು ನವದೆಹಲಿಯಲ್ಲಿ ನಡೆದ ಕ್ಯಾಬಿನೆಟ್ ನಿರ್ಧಾರಗಳ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
#WATCH | Delhi | Announcing Cabinet decisions, Union Minister Piyush Goyal says,”National Health Mission will continue for another five years.” pic.twitter.com/BAzE7A9LXL
— ANI (@ANI) January 22, 2025
2021 ಮತ್ತು 2024ರ ಅವಧಿಯಲ್ಲಿ ರಾಷ್ಟ್ರೀಯ ಆರೋಗ್ಯ ಮಿಷನ್ನಡಿ 12 ಲಕ್ಷಕ್ಕೂ ಹೆಚ್ಚು ಆರೋಗ್ಯ ಕಾರ್ಯಕರ್ತರನ್ನು ತೊಡಗಿಸಿಕೊಂಡಿದೆ ಮತ್ತು 220 ಕೋಟಿಗೂ ಹೆಚ್ಚು ಕೋವಿಡ್ ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ.
ಇದನ್ನೂ ಓದಿ: ಯಲ್ಲಾಪುರದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ಮೋದಿ, ಅಮಿತ್ ಶಾ ಸಂತಾಪ; ಕೇಂದ್ರದಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಈಗಾಗಲೇ 12 ಲಕ್ಷ ಆರೋಗ್ಯ ಕಾರ್ಯಕರ್ತರು ರಾಷ್ಟ್ರೀಯ ಆರೋಗ್ಯ ಮಿಷನ್ನಡಿ ನೋಂದಾಯಿಸಿಕೊಂಡಿದ್ದಾರೆ. ಇದು ಕೋವಿಡ್ ಸಾಂಕ್ರಾಮಿಕ ರೋಗವನ್ನು ನಿಭಾಯಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದೆ. NHM ಅಡಿಯಲ್ಲಿ 220 ಕೋಟಿಗೂ ಹೆಚ್ಚು ಡೋಸ್ ಕೋವಿಡ್-19 ಲಸಿಕೆಗಳನ್ನು ನೀಡಲಾಯಿತು. ಕಳೆದ 10 ವರ್ಷಗಳಲ್ಲಿ ಈ ಮಿಷನ್ ಐತಿಹಾಸಿಕ ಗುರಿಗಳನ್ನು ತಲುಪಿದೆ ಎಂದು ಪಿಯೂಷ್ ಗೋಯೆಲ್ ಹೇಳಿದರು.
ಇದರ ಜೊತೆಗೆ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರ ಸರ್ಕಾರ ಸೆಣಬಿನ ಕನಿಷ್ಠ ಬೆಂಬಲ ಬೆಲೆಯನ್ನು (MSP) ಕ್ವಿಂಟಾಲ್‌ಗೆ 315 ರೂ. ಅಥವಾ ವರ್ಷದಿಂದ ವರ್ಷಕ್ಕೆ ಶೇ.6ರಷ್ಟು ಹೆಚ್ಚಿಸುವುದಾಗಿ ಘೋಷಿಸಿದೆ. ಹೊಸ MSP ಪ್ರತಿ ಕ್ವಿಂಟಾಲ್‌ಗೆ 5,650 ರೂ.ಗಳಾಗಿದ್ದು, ಉತ್ಪಾದಕರಿಗೆ ಶೇ. 66.8ರಷ್ಟು ಲಾಭವನ್ನು ನೀಡುತ್ತದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ