Rozgar Mela: ರೋಜ್‌ಗಾರ್ ಮೇಳದಡಿ 51,000 ಯುವಕರಿಗೆ ಸರ್ಕಾರಿ ಉದ್ಯೋಗ ನೇಮಕಾತಿ ಪತ್ರ ವಿತರಿಸಿದ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಆ.28) 51,000ಕ್ಕೂ ಹೆಚ್ಚು ಜನರಿಗೆ ರೋಜ್‌ಗಾರ್ ಮೇಳದಡಿಯಲ್ಲಿ (ಉದ್ಯೋಗ ಮೇಳ) ಸರ್ಕಾರಿ ಉದ್ಯೋಗ ನೇಮಕಾತಿ ಪತ್ರವನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿತರಿಸಿದ್ದಾರೆ.
ದೆಹಲಿ, ಆ.28: ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಅವರು ಇಂದು (ಆ.28) 51,000ಕ್ಕೂ ಹೆಚ್ಚು ಜನರಿಗೆ ರೋಜ್‌ಗಾರ್ ಮೇಳದಡಿಯಲ್ಲಿ (Rozgar Mela) ಸರ್ಕಾರಿ ಉದ್ಯೋಗ ನೇಮಕಾತಿ ಪತ್ರವನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿತರಿಸಿದ್ದಾರೆ. ದೇಶಾದ್ಯಂತ 45 ಸ್ಥಳಗಳಲ್ಲಿ ರೋಜ್‌ಗಾರ್ ಮೇಳ ನಡೆಯಲಿದೆ ಎಂದು ಪ್ರಧಾನಮಂತ್ರಿಗಳ ಕಚೇರಿ ತಿಳಿಸಿದೆ. ಇನ್ನು ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು, ಅರೆಸೇನಾ ಪಡೆಗಳಲ್ಲಿನ ನೇಮಕಾತಿ ಪ್ರಕ್ರಿಯೆಯನ್ನು ಸರಳೀಕರಿಸಲಾಗಿದ್ದು, ನೇಮಕಾತಿಯ ಸಮಯವನ್ನು ಕಡಿಮೆಗೊಳಿಸಲಾಗಿದೆ ಎಂದು ಅವರು ಹೇಳಿದರು.
ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ನಮ್ಮ ಬದ್ಧತೆಯನ್ನು ಈಡೇರಿಸುವ ನಿಟ್ಟಿನಲ್ಲಿ ರೋಜ್‌ಗರ್ ಮೇಳ ಒಂದು ಪ್ರಮುಖ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ. ಭಾರತ ಸರ್ಕಾರ ಮತ್ತು ಕೆಲವು ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ದೇಶಾದ್ಯಂತ ರೋಜ್‌ಗಾರ್ ಮೇಳಗಳನ್ನು ಆಯೋಜಿಸುತ್ತಿವೆ ಮತ್ತು ಪ್ರತಿ ತಿಂಗಳು ಲಕ್ಷಗಟ್ಟಲೆ ಯುವಕರಿಗೆ ನೇಮಕಾತಿ ಪತ್ರಗಳನ್ನು ವಿತರಿಸುತ್ತಿವೆ ಎಂದು ಹೇಳಿದರು.
ಇದನ್ನೂ ಓದಿ: 71 ಸಾವಿರ ಯುವಕರಿಗೆ ಉದ್ಯೋಗ ನೇಮಕಾತಿ ಪತ್ರಗಳನ್ನು ವಿತರಿಸಿದ ಪ್ರಧಾನಿ ಮೋದಿ, 2023ರ ಅಂತ್ಯದೊಳಗೆ 10 ಲಕ್ಷ ಮಂದಿಗೆ ನೌಕರಿ
ರೋಜ್‌ಗಾರ್ ಮೇಳದ (ಉದ್ಯೋಗ ಮೇಳ)ಮೂಲಕ ಗೃಹ ವ್ಯವಹಾರಗಳ ಸಚಿವಾಲಯವು (MHA) ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF), ಗಡಿ ಭದ್ರತಾ ಪಡೆ (BSF), ಶಾಸ್ತ್ರ ಸೀಮಾ ಬಾಲ್ (SSB) ನಂತಹ ವಿವಿಧ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (CAPFs) ಸಿಬ್ಬಂದಿಯನ್ನು ಹಾಗೂ ಅಸ್ಸಾಂ ರೈಫಲ್ಸ್, ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ (CISF), ಇಂಡೋ ಟಿಬೆಟಿಯನ್ ಬಾರ್ಡರ್ ಪೋಲೀಸ್ (ITBP)ಗಳಿಗೆ ನೇಮಕಾ ಮಾಡಲಾಗಿದೆ.
ಸರ್ಕಾರಿ ಉದ್ಯೋಗ ನೇಮಕಾತಿ ಪತ್ರ ವಿತರಿಸಿದ ಮೋದಿ
#WATCH | Prime Minister Narendra Modi distributes about 51,000 appointment letters to newly inducted recruits in Government departments and organisations, under Rozgar Mela through video conferencing. pic.twitter.com/bEpd3ddb5t
— ANI (@ANI) August 28, 2023
ಪ್ರವಾಸೋದ್ಯಮ ಕ್ಷೇತ್ರವು 2030ರ ವೇಳೆಗೆ ಭಾರತೀಯ ಆರ್ಥಿಕತೆಗೆ ₹ 20 ಲಕ್ಷ ಕೋಟಿಗೂ ಹೆಚ್ಚು ಕೊಡುಗೆ ನೀಡುವ ಸಾಧ್ಯತೆಯಿದೆ, ಇದು ಸುಮಾರು 13-14 ಕೋಟಿ ಹೊಸ ಉದ್ಯೋಗಗಳನ್ನು ಸೃಷ್ಟಿಸುತ್ತದೆ ಎಂದು ಹೇಳಿದರು. ಆಟೋಮೊಬೈಲ್ ಮತ್ತು ಫಾರ್ಮಾ ವಲಯಗಳು ಅತ್ಯಂತ ವೇಗವಾಗಿ ಬೆಳೆಯುತ್ತಿವೆ. ಮುಂದಿನ ದಿನಗಳಲ್ಲಿ ಇದರಲ್ಲೂ ದೊಡ್ಡಮಟ್ಟದಲ್ಲಿ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದು ಹೇಳಿದರು.
ನಮ್ಮ ಸರ್ಕಾರ ಒಂಬತ್ತು ವರ್ಷಗಳ ಹಿಂದೆ ಜನ್ ಧನ್ ಯೋಜನೆಯನ್ನು ಪ್ರಾರಂಭಿಸಿತ್ತು. ಇಂದು ಅದು ಆರ್ಥಿಕ ಪ್ರಯೋಜನಗಳ ಜೊತೆಗೆ, ಉದ್ಯೋಗ ಸೃಷ್ಟಿಯಲ್ಲಿ ಪ್ರಮುಖ ಪಾತ್ರವನ್ನು ವಹಿಸಿದೆ ಎಂದು ಪ್ರಧಾನಿ ಹೇಳಿದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 11:30 am, Mon, 28 August 23