ಪ್ರಧಾನಿ ಮೋದಿ ಮಣಿಪುರ ಹೊರತುಪಡಿಸಿ ಎಲ್ಲ ಕಡೆ ಹೋಗುತ್ತಾರೆ: ಮಲ್ಲಿಕಾರ್ಜುನ ಖರ್ಗೆ
ನಾವು ಸಂಸತ್ತಿನಲ್ಲಿ ರಾಷ್ಟ್ರೀಯ ಸಮಸ್ಯೆಗಳನ್ನು ಪ್ರಸ್ತಾಪಿಸಲು ಪ್ರಯತ್ನಿಸಿದಾಗ, ನಮ್ಮ ಧ್ವನಿಯನ್ನು ಹತ್ತಿಕ್ಕಲಾಯಿತು. 146 ಸಂಸದರನ್ನು ಅಮಾನತುಗೊಳಿಸಿರುವುದು ಅಚ್ಚರಿ. ಆದ್ದರಿಂದ, 'ಭಾರತ್ ಜೋಡೋ ನ್ಯಾಯ ಯಾತ್ರೆ' ಜನರೊಂದಿಗೆ ನೇರವಾಗಿ ಸಂಪರ್ಕ ಸಾಧಿಸುವ ಗುರಿಯನ್ನು ಹೊಂದಿದೆ ಎಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ದೆಹಲಿ ಜನವರಿ 06: ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಪ್ರಧಾನಿಯವರು ದೇಶಾದ್ಯಂತ ಪದೇ ಪದೇ ಪ್ರವಾಸ ಮಾಡುತ್ತಿದ್ದರೂ ಮಣಿಪುರಕ್ಕೆ (Manipur) ಏಕೆ ಭೇಟಿ ನೀಡಿಲ್ಲ ಎಂದು ಶನಿವಾರ ಪ್ರಶ್ನಿಸಿದ್ದಾರೆ. ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಖರ್ಗೆ, ರಾಹುಲ್ ಗಾಂಧಿಯವರ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ಯ ಒಳನೋಟಗಳನ್ನು ಹಂಚಿಕೊಂಡಿದ್ದಾರೆ.
‘ಮೋದಿ ಮಣಿಪುರ ಬಿಟ್ಟು ಎಲ್ಲ ಕಡೆ ಹೋಗ್ತಾರೆ’
“ಮಣಿಪುರದಲ್ಲಿ ಒಂದು ದುರದೃಷ್ಟಕರ ಘಟನೆ ಸಂಭವಿಸಿದೆ ಆದರೆ ಪ್ರಧಾನಿ ಮೋದಿ ಅವರು ಬೀಚ್‌ಗೆ ಹೋದರು. ನೀರಿನಲ್ಲಿ ಈಜುವ ಫೋಟೋ ಸೆಷನ್ ಮಾಡಿದರು.ದೇವಾಲಯದ ನಿರ್ಮಾಣ ಸ್ಥಳದಲ್ಲಿ ಫೋಟೋ ತೆಗೆಸಿಕೊಂಡರು.ಕೇರಳ ಮತ್ತು ಮುಂಬೈಗೆ ಹೋಗಿದ್ದರು. ಅವರು ಎಲ್ಲಾ ಕಡೆ ಹೋಗುತ್ತಾರೆ. ಅವರ ಫೋಟೊಗಳನ್ನು ನೀವು ಎಲ್ಲೆಲ್ಲೂ ನೋಡಬಹುದು. ದ್ದ ನಂತರ ದೇವರ ‘ದರ್ಶನ’ದಂತೆಯೇ. ಆದರೆ ಈ ಮಹಾನ್ ವ್ಯಕ್ತಿ ಮಣಿಪುರಕ್ಕೆ ಯಾಕೆ ಹೋಗಲಿಲ್ಲ? ಎಂದು ಖರ್ಗೆ ಕೇಳಿದ್ದಾರೆ.
LIVE: Special Press Briefing
📍AICC Headquarters, New Delhihttps://t.co/QKTyfQrsWR
— Mallikarjun Kharge (@kharge) January 6, 2024
ಭಾರತ್ ಜೋಡೋ ನ್ಯಾಯ್ ಯಾತ್ರೆ
ರಾಹುಲ್ ಗಾಂಧಿಯವರ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ಯನ್ನು ಉಲ್ಲೇಖಿಸಿದ ಖರ್ಗೆ, ‘ಜನವರಿ 14 ರಿಂದ ಪ್ರಾರಂಭವಾಗುವ ಮಹತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರ ಮಾರ್ಗದರ್ಶನದಲ್ಲಿ ಪ್ರಾರಂಭಿಸಲಾಗುವುದು. ಮಣಿಪುರದ ಇಂಫಾಲ್‌ನಿಂದ ಆರಂಭವಾಗುವ ಈ ಪ್ರಯಾಣವು ನಾಗಾಲ್ಯಾಂಡ್, ಅಸ್ಸಾಂ, ಅರುಣಾಚಲ ಸೇರಿದಂತೆ 15 ರಾಜ್ಯಗಳಲ್ಲಿ ಸಂಚರಿಸಿ ಮುಂಬೈನಲ್ಲಿ ಮುಕ್ತಾಯಗೊಳ್ಳಲಿದೆ.
110 ಜಿಲ್ಲೆಗಳಲ್ಲಿ ವ್ಯಾಪಿಸಿರುವ ಈ ಯಾತ್ರೆಯು 100 ಲೋಕಸಭಾ ಸ್ಥಾನಗಳು ಮತ್ತು 337 ವಿಧಾನಸಭಾ ಸ್ಥಾನಗಳನ್ನು ಒಳಗೊಂಡಿದ್ದು, ಸರಿಸುಮಾರು 6700 ಕಿ.ಮೀ. ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ಯ ಗಮನವು ರಾಷ್ಟ್ರವು ಎದುರಿಸುತ್ತಿರುವ ಸಾಮಾಜಿಕ, ಆರ್ಥಿಕ, ರಾಜಕೀಯ ಮತ್ತು ಮೂಲಭೂತ ಸಮಸ್ಯೆಗಳನ್ನು ಪರಿಹರಿಸುವಲ್ಲಿದೆ ಎಂದಿದ್ದಾರೆ.
ಇದನ್ನೂ ಓದಿ: ರಾಹುಲ್ ಗಾಂಧಿಯವರ ಭಾರತ್ ಜೋಡೋ ನ್ಯಾಯ್ ಯಾತ್ರೆ ಟೀಸರ್ ಬಿಡುಗಡೆ ಮಾಡಿದ ಕಾಂಗ್ರೆಸ್
ಅದೇ ವೇಳೆ ಕೇಂದ್ರ ಸರ್ಕಾರವನ್ನು ಟೀಕಿಸಿದ ಖರ್ಗೆ, ‘ನಾವು ಸಂಸತ್ತಿನಲ್ಲಿ ರಾಷ್ಟ್ರೀಯ ಸಮಸ್ಯೆಗಳನ್ನು ಪ್ರಸ್ತಾಪಿಸಲು ಪ್ರಯತ್ನಿಸಿದಾಗ, ನಮ್ಮ ಧ್ವನಿಯನ್ನು ಹತ್ತಿಕ್ಕಲಾಯಿತು. 146 ಸಂಸದರನ್ನು ಅಮಾನತುಗೊಳಿಸಿರುವುದು ಅಚ್ಚರಿ. ಆದ್ದರಿಂದ, ‘ಭಾರತ್ ಜೋಡೋ ನ್ಯಾಯ ಯಾತ್ರೆ’ ಜನರೊಂದಿಗೆ ನೇರವಾಗಿ ಸಂಪರ್ಕ ಸಾಧಿಸುವ ಗುರಿಯನ್ನು ಹೊಂದಿದೆ. ನಮ್ಮ ದೃಷ್ಟಿಕೋನಗಳನ್ನು ಹಂಚಿಕೊಳ್ಳಲು ಮತ್ತು ಸಮಾಜದ ಪ್ರತಿಯೊಂದು ಭಾಗದೊಂದಿಗೆ ತೊಡಗಿಸಿಕೊಳ್ಳಲು ಇದ ಅನುವು ಮಾಡಿಕೊಡುತ್ತದೆ ಎಂದಿದ್ದಾರೆ. ಇದೇ ಸಂದರ್ಭದಲ್ಲಿ ಅವರು’ಭಾರತ್ ಜೋಡೋ ನ್ಯಾಯ ಯಾತ್ರೆ’ಯ ಅಧಿಕೃತ ಲೋಗೋವನ್ನು ಅನಾವರಣಗೊಳಿಸಿದರು. ಈ ಯಾತ್ರೆಯು ದೇಶದ ನಾಗರಿಕರಿಗೆ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಮಹತ್ವದ ದಾಪುಗಾಲು ಹಾಕುತ್ತದೆ ಎಂದಿದ್ದಾರೆ ಮಲ್ಲಿಕಾರ್ಜುನ ಖರ್ಗೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ