AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Modi Cabinet 3.0: ಮೋದಿ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ; ಪಿಎಂ ಆವಾಸ್ ಯೋಜನೆಯಡಿ 3 ಕೋಟಿ ಮನೆಗಳ ನಿರ್ಮಾಣ

Narendra Modi Cabinet Meeting: ಪ್ರಧಾನಮಂತ್ರಿ ನರೇಂದ್ರ ಮೋದಿ 3ನೇ ಅವಧಿಗೆ ಪ್ರಮಾಣವಚನ ಸ್ವೀಕರಿಸಿದ ಮರುದಿನವಾದ ಇಂದು ಮೊದಲ ಸಚಿವ ಸಂಪುಟ ಸಭೆ ನಡೆಸುತ್ತಿದ್ದಾರೆ. ಮೋದಿ ಕ್ಯಾಬಿನೆಟ್ ರಚನೆಯಾಗುತ್ತಿದ್ದಂತೆ ಮೊದಲ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ 3 ಕೋಟಿ ಮನೆಗಳನ್ನು ನಿರ್ಮಿಸಲು ಕ್ಯಾಬಿನೆಟ್ ಅನುಮೋದನೆ ನೀಡಿದೆ.

Modi Cabinet 3.0: ಮೋದಿ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ; ಪಿಎಂ ಆವಾಸ್ ಯೋಜನೆಯಡಿ 3 ಕೋಟಿ ಮನೆಗಳ ನಿರ್ಮಾಣ
ಮೋದಿ ಸಚಿವ ಸಂಪುಟ ಸಭೆ
ಸುಷ್ಮಾ ಚಕ್ರೆ
|

Updated on:Jun 10, 2024 | 6:55 PM

Share

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು (ಸೋಮವಾರ) ಸಂಜೆ ತಮ್ಮ ನೂತನ ಸಚಿವ ಸಂಪುಟದ (Modi Cabinet Meeting) ಮೊದಲ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ, ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY) ಅಡಿಯಲ್ಲಿ 3 ಕೋಟಿ ಹೆಚ್ಚುವರಿ ಗ್ರಾಮೀಣ ಮತ್ತು ನಗರ ಕುಟುಂಬಗಳಿಗೆ ಮನೆ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರ ನೆರವು ನೀಡಲು ನಿರ್ಧರಿಸಿದೆ. ಅರ್ಹ ಕುಟುಂಬಗಳ ಸಂಖ್ಯೆಯಲ್ಲಿ ಹೆಚ್ಚಳ ಮಾಡುವುದಾಗಿ ತಿಳಿಸಿದೆ.

ಅರ್ಹ ಕುಟುಂಬಗಳ ಸಂಖ್ಯೆ ಹೆಚ್ಚಳದಿಂದ ಉಂಟಾಗುವ ವಸತಿ ಅವಶ್ಯಕತೆಗಳನ್ನು ಪೂರೈಸಲು 3 ಕೋಟಿ ಹೆಚ್ಚುವರಿ ಗ್ರಾಮೀಣ ಮತ್ತು ನಗರ ಕುಟುಂಬಗಳಿಗೆ ಮನೆ ನಿರ್ಮಾಣಕ್ಕಾಗಿ ನೆರವು ನೀಡಲು ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಭಾರತ ಸರ್ಕಾರವು 2015-16ರಿಂದ ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದೆ. ಈ ಮೂಲಕ ಅರ್ಹ ಗ್ರಾಮೀಣ ಮತ್ತು ನಗರ ಕುಟುಂಬಗಳಿಗೆ ಮೂಲಭೂತ ಸೌಕರ್ಯಗಳೊಂದಿಗೆ ಮನೆಗಳನ್ನು ನಿರ್ಮಿಸಲು ಸಹಾಯವನ್ನು ಒದಗಿಸಲಾಗುತ್ತಿದೆ. PMAY ಅಡಿಯಲ್ಲಿ ಕಳೆದ 10 ವರ್ಷಗಳಲ್ಲಿ ವಸತಿ ಯೋಜನೆಗಳ ಅಡಿಯಲ್ಲಿ ಅರ್ಹ ಬಡ ಕುಟುಂಬಗಳಿಗೆ ಒಟ್ಟು 4.21 ಕೋಟಿ ಮನೆಗಳನ್ನು ಪೂರ್ಣಗೊಳಿಸಲಾಗಿದೆ.

ಇದನ್ನೂ ಓದಿ: Modi Cabinet 3.0: ನರೇಂದ್ರ ಮೋದಿ ಹೊಸ ಕ್ಯಾಬಿನೆಟ್; ಪ್ರಮಾಣವಚನ ಸ್ವೀಕರಿಸಿದ ಕೇಂದ್ರ ಸಚಿವರ ಪಟ್ಟಿ ಇಲ್ಲಿದೆ

PMAY ಅಡಿಯಲ್ಲಿ ನಿರ್ಮಿಸಲಾದ ಎಲ್ಲಾ ಮನೆಗಳಿಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ಇತರ ಯೋಜನೆಗಳೊಂದಿಗೆ ಒಮ್ಮುಖವಾಗುವ ಮೂಲಕ ಇತರ ಮೂಲಭೂತ ಸೌಕರ್ಯಗಳಾದ ಗೃಹ ಶೌಚಾಲಯಗಳು, LPG ಸಂಪರ್ಕ, ವಿದ್ಯುತ್ ಸಂಪರ್ಕ, ಕ್ರಿಯಾತ್ಮಕ ಮನೆಯ ಟ್ಯಾಪ್ ಸಂಪರ್ಕ ಇತ್ಯಾದಿಗಳನ್ನು ಒದಗಿಸಲಾಗಿದೆ.

ಆಯುಷ್ಮಾನ್ ಭಾರತ್, ಪ್ರಧಾನ ಮಂತ್ರಿ ಜನ್ ಧನ್ ಯೋಜನೆ, ಎಲ್ಲರಿಗೂ ವಸತಿ, ಪ್ರಧಾನ ಮಂತ್ರಿ ಶ್ರಮ ಯೋಗಿ ಮನ್ ಧನ್ ಯೋಜನೆ, ಉಜ್ವಲಾ ಯೋಜನೆ, ಪಿಎಂ ಕಿಸಾನ್ ಸಮ್ಮಾನ್ ನಿಧಿ, ಉಡಾನ್ ಮತ್ತು ಮೇಕ್ ಇನ್ ಇಂಡಿಯಾದಂತಹ ಪ್ರಮುಖ ಯೋಜನೆಗಳನ್ನು ನರೇಂದ್ರ ಮೋದಿ ಈ ಹಿಂದಿನ ಎರಡು ಅವಧಿಗಳಲ್ಲಿ ಜಾರಿಗೆ ತರಲಾಗಿತ್ತು. ಅವರು ಮುಂದಿನ ಪೀಳಿಗೆಯ ಮೂಲಸೌಕರ್ಯಗಳನ್ನು ರಚಿಸುವುದು, ಬಾಕಿ ಉಳಿದಿರುವ ಯೋಜನೆಗಳನ್ನು ತ್ವರಿತಗೊಳಿಸುವುದು ಮತ್ತು ಪರಿಸರ ಸಂರಕ್ಷಣೆಯನ್ನು ಉತ್ತೇಜಿಸುವತ್ತ ಗಮನಹರಿಸಿದ್ದಾರೆ.

ಇದನ್ನೂ ಓದಿ: ಅಧಿಕಾರ ಅಥವಾ ಹುದ್ದೆಗಾಗಿ ಇಲ್ಲಿ ಇರುವುದು ನನ್ನ ಅಜೆಂಡಾ ಅಲ್ಲ: ಪಿಎಂ ನರೇಂದ್ರ ಮೋದಿ

2014 ಮತ್ತು 2019ರ ಚುನಾವಣೆಗಳಲ್ಲಿ ಬಿಜೆಪಿಯು ತನ್ನದೇ ಆದ ಸಂಪೂರ್ಣ ಬಹುಮತವನ್ನು ಗಳಿಸುವುದರೊಂದಿಗೆ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಗೆ ಪಿಎಂ ಮೋದಿ ನೇತೃತ್ವದ ಮೂರನೇ ಸತತ ಗೆಲುವಿಗೆ ಕಾರಣವಾಯಿತು. ಅವರು 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ಒತ್ತು ನೀಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:43 pm, Mon, 10 June 24