AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬುಲ್ಡೋಜರ್ ಮೂಲಕ ನರೇಗಾ ನೆಲಸಮ; ಬಿಜೆಪಿ ಸರ್ಕಾರದ ವಿರುದ್ಧ ಸೋನಿಯಾ ಗಾಂಧಿ ಆಕ್ರೋಶ

ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಮಂಡಿಸಿದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MGNREGA) ಬದಲಿಗೆ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ ಗ್ರಾಮೀಣ (VB-G RAM G) ಮಸೂದೆಯನ್ನು ಸಂಸತ್ತು ಅಂಗೀಕರಿಸಿದ ಬೆನ್ನಲ್ಲೇ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮೋದಿ ಸರ್ಕಾರವು ನರೇಗಾ ಮೇಲೆ ಬುಲ್ಡೋಜರ್ ನಡೆಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಬುಲ್ಡೋಜರ್ ಮೂಲಕ ನರೇಗಾ ನೆಲಸಮ; ಬಿಜೆಪಿ ಸರ್ಕಾರದ ವಿರುದ್ಧ ಸೋನಿಯಾ ಗಾಂಧಿ ಆಕ್ರೋಶ
Sonia Gandhi
ಸುಷ್ಮಾ ಚಕ್ರೆ
|

Updated on: Dec 20, 2025 | 7:52 PM

Share

ನವದೆಹಲಿ, ಡಿಸೆಂಬರ್ 20: ಕೇಂದ್ರ ಸರ್ಕಾರವು MNREGA (ನರೇಗಾ) ಯೋಜನೆಯಲ್ಲಿ ಬದಲಾವಣೆಗಳನ್ನು ಮಾಡುವ ಮೂಲಕ ಅದನ್ನು ದುರ್ಬಲಗೊಳಿಸುತ್ತಿದೆ. 20 ವರ್ಷಗಳ ಹಿಂದೆ ಮನಮೋಹನ್ ಸಿಂಗ್ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದ MNREGA ಯೋಜನೆ ಲಕ್ಷಾಂತರ ಗ್ರಾಮೀಣ ಕುಟುಂಬಗಳಿಗೆ ಉದ್ಯೋಗ ಮತ್ತು ಘನತೆಯನ್ನು ಒದಗಿಸಿದೆ. ಕೊವಿಡ್ ಬಿಕ್ಕಟ್ಟಿನ ಸಮಯದಲ್ಲಿ MNREGA ಹಲವರ ಜೀವ ಉಳಿಸಿದೆ, ಕುಟುಂಬಕ್ಕೆ ಆಧಾರವಾಗಿದೆ. ಆದರೆ ಮೋದಿ ಸರ್ಕಾರವು ಯಾವುದೇ ಸಮಾಲೋಚನೆಯಿಲ್ಲದೆ ಅದನ್ನು ಬದಲಾಯಿಸಿತು. ಸರ್ಕಾರವು MNREGA ಅನ್ನು ಬುಲ್ಡೋಜರ್ ಮೂಲಕ ನಾಶಮಾಡಿದೆ. ಇದರ ವಿರುದ್ಧ ನಾವು ಹೋರಾಟ ನಡೆಸಲು ಸಿದ್ಧರಿದ್ದೇವೆ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ (Sonia Gandhi) ವಾಗ್ದಾಳಿ ನಡೆಸಿದ್ದಾರೆ.

ಸಂಸತ್ತಿನ ಎರಡೂ ಸದನಗಳು ಅಂಗೀಕರಿಸಿದ ವಿಬಿಜಿ ರಾಮ್‌ಜಿ ಮಸೂದೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದೀಯ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ರಾಷ್ಟ್ರಕ್ಕೆ ಈ ವಿಡಿಯೋ ಸಂದೇಶ ನೀಡಿದ್ದಾರೆ. ಇದರಲ್ಲಿ ಅವರು ನರೇಗಾ ಯೋಜನೆಯ (MNREGA) ಸಾಧನೆಗಳನ್ನು ಎತ್ತಿ ತೋರಿಸಿದ್ದಾರೆ. ಯಾರನ್ನೂ ಸಂಪರ್ಕಿಸದೆ ಕೇಂದ್ರ ಸರ್ಕಾರ ಎಂಎನ್‌ಆರ್‌ಇಜಿಎ ರಚನೆಯನ್ನು ಬದಲಾಯಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಸೋನಿಯಾ ಗಾಂಧಿಯವರ ವಿಡಿಯೋ ಸಂದೇಶದ ಹೈಲೈಟ್ಸ್ ಇಲ್ಲಿದೆ.

  1. “ಸಹೋದರ ಸಹೋದರಿಯರೇ… ನಮಸ್ಕಾರ. 20 ವರ್ಷಗಳ ಹಿಂದೆ ಡಾ. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ MNREGA ಕಾನೂನನ್ನು ಸಂಸತ್ತಿನಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿತ್ತು ಎಂದು ನನಗೆ ಇನ್ನೂ ನೆನಪಿದೆ. ಇದು ಒಂದು ಕ್ರಾಂತಿಕಾರಿ ಹೆಜ್ಜೆಯಾಗಿತ್ತು. ಲಕ್ಷಾಂತರ ಗ್ರಾಮೀಣ ಕುಟುಂಬಗಳು ಇದರಿಂದ ಪ್ರಯೋಜನ ಪಡೆದವು. ಇದು ಜೀವನೋಪಾಯದ ಮೂಲವಾಯಿತು. ಅದರಲ್ಲೂ ವಿಶೇಷವಾಗಿ ವಂಚಿತರು, ಶೋಷಿತರು, ಬಡವರು ಮತ್ತು ಅತ್ಯಂತ ಬಡವರಿಗೆ ಇದರಿಂದ ಅನುಕೂಲವಾಯಿತು.
  2. “ಜನರು ತಾಯ್ನಾಡು, ಗ್ರಾಮ, ಮನೆ ಮತ್ತು ಕುಟುಂಬದಿಂದ ಉದ್ಯೋಗ ಅರಸಿ ಬೇರೆಡೆ ವಲಸೆ ಹೋಗುವುದನ್ನು ಈ ಯೋಜನೆಯಿಂದ ನಿಲ್ಲಿಸಲಾಯಿತು. ಉದ್ಯೋಗಕ್ಕೆ ಕಾನೂನುಬದ್ಧ ಹಕ್ಕುಗಳನ್ನು ನೀಡಲಾಯಿತು. ಗ್ರಾಮ ಪಂಚಾಯಿತಿಗಳಿಗೆ ಸಬಲೀಕರಣ ಮಾಡಲಾಯಿತು. MNREGA ಮೂಲಕ, ಭಾರತದಲ್ಲಿ ಮಹಾತ್ಮ ಗಾಂಧಿಯವರ ಗ್ರಾಮ ಸ್ವರಾಜ್ಯದ ಕನಸನ್ನು ನನಸು ಮಾಡುವತ್ತ ದೃಢವಾದ ಹೆಜ್ಜೆ ಇಡಲಾಯಿತು.
  3. “ಕಳೆದ 11 ವರ್ಷಗಳಲ್ಲಿ ಮೋದಿ ಸರ್ಕಾರವು MNREGA ಅನ್ನು ದುರ್ಬಲಗೊಳಿಸಲು ಎಲ್ಲ ಪ್ರಯತ್ನಗಳನ್ನು ಮಾಡಿದೆ. ಗ್ರಾಮೀಣ ಪ್ರದೇಶದ ನಿರುದ್ಯೋಗಿಗಳು, ಬಡವರು ಮತ್ತು ಅಂಚಿನಲ್ಲಿರುವವರ ಹಿತಾಸಕ್ತಿಗಳನ್ನು ನಿರ್ಲಕ್ಷಿಸಿದೆ. ಕೊವಿಡ್ ಸಮಯದಲ್ಲಿ ಈ ಯೋಜನೆ ಬಡವರಿಗೆ ಜೀವನಾಡಿಯಾಗಿದ್ದರೂ, ಕೇಂದ್ರ ಸರ್ಕಾರದ ಈ ನಿರ್ಧಾರ ತುಂಬಾ ದುರದೃಷ್ಟಕರ.
  4. ಮಹಾತ್ಮ ಗಾಂಧಿಯವರ ಹೆಸರನ್ನು ತೆಗೆದುಹಾಕಿದ್ದಲ್ಲದೆ ಯಾವುದೇ ಚರ್ಚೆಯಿಲ್ಲದೆ, ಸಮಾಲೋಚನೆಯಿಲ್ಲದೆ ಮತ್ತು ವಿರೋಧ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ MNREGA ಯೋಜನೆಯ ರಚನೆಯನ್ನೇ ನಿರಂಕುಶವಾಗಿ ಬದಲಾಯಿಸಲಾಗಿದೆ.
  5. ಈ ಮೂಲಕ ಮೋದಿ ಸರ್ಕಾರವು ದೇಶಾದ್ಯಂತ ಕೋಟ್ಯಂತರ ರೈತರು, ಕಾರ್ಮಿಕರು ಮತ್ತು ಭೂಹೀನರ ಹಿತಾಸಕ್ತಿಗಳ ಮೇಲೆ ದಾಳಿ ಮಾಡಿದೆ ಎಂದು ಅವರು ಹೇಳಿದರು. ಕಳೆದ 11 ವರ್ಷಗಳಲ್ಲಿ ಕೇಂದ್ರ ಸರ್ಕಾರವು ಗ್ರಾಮೀಣ ಬಡವರ ಹಿತಾಸಕ್ತಿಗಳನ್ನು ನಿರ್ಲಕ್ಷಿಸಿದೆ.
  6. MNREGA ಜಾರಿಗೆ ತರುವಲ್ಲಿ ಕಾಂಗ್ರೆಸ್ ಪ್ರಮುಖ ಪಾತ್ರ ವಹಿಸಿದೆ. ಆದರೆ ಇದು ಎಂದಿಗೂ ಪಕ್ಷಕ್ಕೆ ಸಂಬಂಧಿಸಿದ ವಿಷಯವಾಗಿರಲಿಲ್ಲ. ಇದು ರಾಷ್ಟ್ರೀಯ ಮತ್ತು ಸಾರ್ವಜನಿಕ ಹಿತಾಸಕ್ತಿಯ ಯೋಜನೆಯಾಗಿತ್ತು. ಈ ಕಾನೂನನ್ನು ದುರ್ಬಲಗೊಳಿಸುವ ಮೂಲಕ ಮೋದಿ ಸರ್ಕಾರವು ಲಕ್ಷಾಂತರ ರೈತರು, ಕಾರ್ಮಿಕರು ಮತ್ತು ಭೂಹೀನ ಗ್ರಾಮೀಣ ಬಡವರ ಹಿತಾಸಕ್ತಿಗಳ ಮೇಲೆ ದಾಳಿ ಮಾಡಿದೆ. ಈ ದಾಳಿಯನ್ನು ಎದುರಿಸಲು ನಾವೆಲ್ಲರೂ ಸಿದ್ಧರಿದ್ದೇವೆ.
  7. 20 ವರ್ಷಗಳ ಹಿಂದೆ, ನಾನು ನನ್ನ ಬಡ ಸಹೋದರ ಸಹೋದರಿಯರಿಗೆ ಉದ್ಯೋಗ ಹಕ್ಕುಗಳನ್ನು ಪಡೆಯಲು ಹೋರಾಡಿದೆ. ಇಂದಿಗೂ, ಈ ಕರಾಳ ಕಾನೂನಿನ ವಿರುದ್ಧ ಹೋರಾಡಲು ನಾನು ಬದ್ಧಳಾಗಿದ್ದೇನೆ. ನನ್ನಂತಹ ಎಲ್ಲಾ ಕಾಂಗ್ರೆಸ್ ನಾಯಕರು ಮತ್ತು ಲಕ್ಷಾಂತರ ಕಾರ್ಮಿಕರು ಈ ಹೋರಾಟದಲ್ಲಿ ಜೊತೆಯಾಗಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ