AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಮೀಸಲಾತಿಗೆ ವೇದಿಕೆ ಸಜ್ಜು; ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು 850ಕ್ಕೆ ಏರಿಸಲು ಮೋದಿ ಸರ್ಕಾರ ಪ್ರಸ್ತಾಪ

ಲೋಕಸಭೆಯ ಬಲವು 543ರಿಂದ 850ಕ್ಕೆ ಏರಲಿದ್ದು, ಮಹಿಳಾ ಮೀಸಲಾತಿಗೆ ವೇದಿಕೆ ಸಿದ್ಧವಾಗಲಿದೆ. ಕೇಂದ್ರ ಸರ್ಕಾರವು ಲೋಕಸಭೆಯ ಬಲವನ್ನು 543ರಿಂದ 850 ಸ್ಥಾನಗಳಿಗೆ ವಿಸ್ತರಿಸಲು ಪ್ರಸ್ತಾಪಿಸಿದೆ. ಇದು ಹೊಸ ಸೀಮಾ ನಿರ್ಣಯದ ಜೊತೆಗೆ ದೀರ್ಘಕಾಲದಿಂದ ಬಾಕಿ ಇರುವ ಮಹಿಳಾ ಮೀಸಲಾತಿ ಕಾನೂನನ್ನು ಜಾರಿಗೆ ತರಲು ದಾರಿ ಮಾಡಿಕೊಡುತ್ತದೆ. ಲೋಕಸಭಾ ಸ್ಥಾನಗಳ ವಿಸ್ತರಣೆಯನ್ನು ವಿವರಿಸುವ ಕರಡು ಮಸೂದೆಯನ್ನು ಸಂಸದರೊಂದಿಗೆ ಹಂಚಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮಹಿಳಾ ಮೀಸಲಾತಿಗೆ ವೇದಿಕೆ ಸಜ್ಜು; ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು 850ಕ್ಕೆ ಏರಿಸಲು ಮೋದಿ ಸರ್ಕಾರ ಪ್ರಸ್ತಾಪ
Parliament
ಸುಷ್ಮಾ ಚಕ್ರೆ
|

Updated on: Apr 14, 2026 | 7:36 PM

Share

ನವದೆಹಲಿ, ಏಪ್ರಿಲ್ 14: ಮಹಿಳಾ ಮೀಸಲಾತಿ ಮಸೂದೆಯನ್ನು (Women’s Reservation Bill) ಜಾರಿಗೆ ತರಲು ವೇದಿಕೆ ಸಿದ್ಧವಾಗಿದೆ. ಕೇಂದ್ರ ಸರ್ಕಾರವು ಲೋಕಸಭೆಯಲ್ಲಿ ಸ್ಥಾನಗಳ ಸಂಖ್ಯೆಯನ್ನು 543ರಿಂದ 850ಕ್ಕೆ ಹೆಚ್ಚಿಸಲು ಪ್ರಸ್ತಾಪಿಸಿದೆ. ಈ ವಿಸ್ತರಣೆಯು ನಾರಿ ಶಕ್ತಿ ವಂದನ (Nari Shakti Vandana) ಅಧಿನಿಯಮ (ಮಹಿಳಾ ಮೀಸಲಾತಿ ಕಾಯ್ದೆ) ಅನುಷ್ಠಾನವನ್ನು ಜಾರಿಗೊಳಿಸುವ ಯೋಜನೆಯ ಭಾಗವಾಗಿದೆ. ಇದು ಕೆಳಮನೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳಾ ಮೀಸಲಾತಿಯನ್ನು ಜಾರಿಗೆ ತರುವ ಗುರಿಯನ್ನು ಹೊಂದಿದೆ.

ಈ ಕಾಯ್ದೆ ಸದನದ ಸುಮಾರು ಮೂರನೇ ಒಂದು ಭಾಗದಷ್ಟು ಅಥವಾ 273 ಸ್ಥಾನಗಳನ್ನು ಮಹಿಳಾ ಶಾಸಕರಿಗೆ ಮೀಸಲಿಡಲು ಅವಕಾಶ ಕಲ್ಪಿಸುತ್ತದೆ. ಮಹಿಳಾ ಮೀಸಲಾತಿ ಮಸೂದೆಯ ಜಾರಿಗೆ ಕೇಂದ್ರ ಸರ್ಕಾರವು ಏಪ್ರಿಲ್ 16ರಿಂದ 18ರವರೆಗೆ ಮೂರು ದಿನಗಳ ವಿಶೇಷ ಸಂಸತ್ ಅಧಿವೇಶನವನ್ನು ನಿಗದಿಪಡಿಸಿದೆ. ಮಸೂದೆಯ ಪ್ರತಿಯನ್ನು ಇಂದು ಸಂಸದರೊಂದಿಗೆ ಹಂಚಿಕೊಳ್ಳಲಾಯಿತು.

ಈ ಪ್ರಸ್ತಾವನೆಯಡಿಯಲ್ಲಿ 815 ಸ್ಥಾನಗಳು ರಾಜ್ಯಗಳಿಗೆ ಮತ್ತು 35 ಕೇಂದ್ರಾಡಳಿತ ಪ್ರದೇಶಗಳಿಗೆ ಹೋಗಲಿದ್ದು, ಒಟ್ಟು ಬಲವನ್ನು 850ಕ್ಕೆ ಏರಿಸಲಾಗುವುದು. ಈ ಬದಲಾವಣೆಗಳು 2029ರ ಲೋಕಸಭಾ ಚುನಾವಣೆಯಿಂದ ಜಾರಿಗೆ ಬರುವ ನಿರೀಕ್ಷೆಯಿದೆ. ಮಹಿಳೆಯರಿಗೆ ಹಂಚಿಕೆಯಾಗುವ ಸ್ಥಾನಗಳನ್ನು ನಿರ್ಧರಿಸಲು ಡಿಲಿಮಿಟೇಶನ್ ಆಯೋಗವನ್ನು ರಚಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Explainer: ಸಂಸತ್​​ನಲ್ಲಿ ಅಂಗೀಕಾರವಾಗುತ್ತಾ ಮಹಿಳಾ ಮೀಸಲಾತಿ ಮಸೂದೆ? ಏನಿದರ ಮಹತ್ವ, ವಿಪಕ್ಷಗಳ ವಿರೋಧವೇಕೆ?

ನಾರಿ ಶಕ್ತಿ ವಂದನ ಅಧಿನಿಯಮವನ್ನು ಭಾರತೀಯ ಸಂಸತ್ ಸೆಪ್ಟೆಂಬರ್ 202 ರಲ್ಲಿ ಅಂಗೀಕರಿಸಿತು. ಇದನ್ನು ಸೆಪ್ಟೆಂಬರ್ 19, 2023ರಂದು ಲೋಕಸಭೆಯಲ್ಲಿ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಪರಿಚಯಿಸಲಾಯಿತು. ಸೆಪ್ಟೆಂಬರ್ 20, 2023ರಂದು 454 ಮತಗಳ ಪರವಾಗಿ ಮತ್ತು 2 ಮತಗಳ ವಿರುದ್ಧವಾಗಿ ಅಂಗೀಕರಿಸಲಾಯಿತು. ರಾಜ್ಯಸಭೆಯು ಸೆಪ್ಟೆಂಬರ್ 21, 2023ರಂದು 214 ಮತಗಳೊಂದಿಗೆ ಸರ್ವಾನುಮತದಿಂದ ಈ ಮಸೂದೆಯನ್ನು ಅಂಗೀಕರಿಸಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್ 28, 2023ರಂದು ಇದನ್ನು ಕಾನೂನಾಗಿ ಪರಿವರ್ತಿಸಲು ಸಹಿ ಮಾಡಿದರು.

ಇದನ್ನೂ ಓದಿ: Women’s Reservation Bill 2026: ಮಹಿಳಾ ಮೀಸಲಾತಿ ಕಾಯ್ದೆ ಜಾರಿಗೆ ಬೆಂಬಲ ಕೋರಿ ಸಂಸದರಿಗೆ ಪ್ರಧಾನಿ ಮೋದಿ ಪತ್ರ

ಇದರ ಪ್ರಕಾರ ಮಹಿಳೆಯರಿಗೆ 33% ಮೀಸಲಾತಿ: ನೀಡಲಾಗಿದ್ದು, ಲೋಕಸಭೆ, ರಾಜ್ಯ ವಿಧಾನಸಭೆಗಳು ಮತ್ತು ದೆಹಲಿ ವಿಧಾನಸಭೆಯಲ್ಲಿ ಮಹಿಳೆಯರಿಗೆ ಎಲ್ಲಾ ಸ್ಥಾನಗಳಲ್ಲಿ ಮೂರನೇ ಒಂದು ಭಾಗವನ್ನು ಮೀಸಲಿಡಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಎರಡೂ ಪಂಚಮಸಾಲಿ ಟ್ರಸ್ಟ್‌ಗಳ ವಿರುದ್ಧ ಯತ್ನಾಳ್ ಗಂಭೀರ ಆರೋಪ
ಎರಡೂ ಪಂಚಮಸಾಲಿ ಟ್ರಸ್ಟ್‌ಗಳ ವಿರುದ್ಧ ಯತ್ನಾಳ್ ಗಂಭೀರ ಆರೋಪ
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಹಲವು ಪ್ರಯಾಣಿಕರಿಗೆ ಗಾಯ
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಹಲವು ಪ್ರಯಾಣಿಕರಿಗೆ ಗಾಯ
ಜಬ್ಬಾರ್, ನಸೀರ್ ರಾಜೀನಾಮೆಗೆ ಸೂಚಿಸಿದ್ದೇಕೆ? ಕಾರಣ ತಿಳಿಸಿದ ಜಮೀರ್!
ಜಬ್ಬಾರ್, ನಸೀರ್ ರಾಜೀನಾಮೆಗೆ ಸೂಚಿಸಿದ್ದೇಕೆ? ಕಾರಣ ತಿಳಿಸಿದ ಜಮೀರ್!
ದಾವಣಗೆರೆ ದಂಗಲ್: ಸಿಎಂ ಆಪ್ತ ನಸೀರ್ ತಲೆದಂಡ, ಸಚಿವ ಜಮೀರ್​ಗೂ ತೂಗುತ್ತಿ
ದಾವಣಗೆರೆ ದಂಗಲ್: ಸಿಎಂ ಆಪ್ತ ನಸೀರ್ ತಲೆದಂಡ, ಸಚಿವ ಜಮೀರ್​ಗೂ ತೂಗುತ್ತಿ
ಸಂಸತ್ತಿನ ಅಂಗಳದಲ್ಲಿ ಮೋದಿ-ಖರ್ಗೆ ಹಸ್ತಲಾಘವ
ಸಂಸತ್ತಿನ ಅಂಗಳದಲ್ಲಿ ಮೋದಿ-ಖರ್ಗೆ ಹಸ್ತಲಾಘವ
ಪ್ರಧಾನಿ ಮೋದಿ ಉದ್ಘಾಟಿಸಲಿರುವ ಭೈರವೈಕ್ಯ ಮಂದಿರ ಹೇಗಿದೆ? ಇಲ್ಲಿದೆ ವಿಡಿಯೋ
ಪ್ರಧಾನಿ ಮೋದಿ ಉದ್ಘಾಟಿಸಲಿರುವ ಭೈರವೈಕ್ಯ ಮಂದಿರ ಹೇಗಿದೆ? ಇಲ್ಲಿದೆ ವಿಡಿಯೋ
ಸಚಿವ ಜಮೀರ್​​ಗೆ ಸಿಎಂ ಸಿದ್ದರಾಮಯ್ಯ ಬುಲಾವ್
ಸಚಿವ ಜಮೀರ್​​ಗೆ ಸಿಎಂ ಸಿದ್ದರಾಮಯ್ಯ ಬುಲಾವ್
ರಸ್ತೆ ಬದಿಯ ಹಳ್ಳಕ್ಕೆ ನುಗ್ಗಿದ ಸ್ಲೀಪರ್ ಬಸ್, ಪ್ರಯಾಣಿಕರು ಜಸ್ಟ್ ಮಿಸ್
ರಸ್ತೆ ಬದಿಯ ಹಳ್ಳಕ್ಕೆ ನುಗ್ಗಿದ ಸ್ಲೀಪರ್ ಬಸ್, ಪ್ರಯಾಣಿಕರು ಜಸ್ಟ್ ಮಿಸ್