AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttar Pradesh: ಗೋರಖ್‌ಪುರದಲ್ಲಿ 2ನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಮೋದಿ ಚಾಲನೆ

ಪ್ರಧಾನಿ ಮೋದಿ ಇಂದು ಉತ್ತರ ಪ್ರದೇಶದ ಗೋರಖ್‌ಪುರಕ್ಕೆ 2ನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದ್ದಾರೆ.

Uttar Pradesh: ಗೋರಖ್‌ಪುರದಲ್ಲಿ 2ನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಮೋದಿ ಚಾಲನೆ
ಪ್ರಧಾನಿ ಮೋದಿ
TV9 Web
| Edited By: |

Updated on:Jul 08, 2023 | 10:56 AM

Share

ಲಕ್ನೋ:  ಉತ್ತರ ಪ್ರದೇಶಗೋರಖ್‌ಪುರಕ್ಕೆ 2ನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ  ಪ್ರಧಾನಿ ಮೋದಿ ಅವರು ಇಂದು   ಹಸಿರು ನಿಶಾನೆ ತೋರಿಸುವ ಮೂಲಕ  ಚಾಲನೆ ನೀಡಿದ್ದಾರೆ. ಇದು ಜೋಧ್‌ಪುರನಿಂದ ಅಹಮದಾಬಾದ್​​ಗೆ ಮತ್ತು ಗೋರಖ್‌ಪುರ್​ನಿಂದ ಲಕ್ನೋಗೆ ರೈಲು ಸಂಚರಿಸಲಿದೆ. ಇದರ ಜತೆಗೆ ಪ್ರಧಾನಿ ಮೋದಿ ಅವರು ಗೋರಖ್‌ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ₹ 498 ಕೋಟಿ ವೆಚ್ಚದ ಗೋರಖ್‌ಪುರ ರೈಲು ನಿಲ್ದಾಣದ ಪುನರಾಭಿವೃದ್ಧಿ ಯೋಜನೆಗೆ ಶಂಕುಸ್ಥಾಪನೆ ಮಾಡಿದ್ದಾರೆ. ಗೋರಖ್‌ಪುರ-ಲಕ್ನೋ ವಂದೇ ಭಾರತ್ ಎಕ್ಸ್‌ಪ್ರೆಸ್ ಅಯೋಧ್ಯೆಯ ಮೂಲಕ ಹಾದುಹೋಗುತ್ತದೆ, ಇದು ಉತ್ತರ ಪ್ರದೇಶದ ಪ್ರವಾಸೋದ್ಯಮಕ್ಕೆ ಪೂರಕವಾಗಿದೆ, ಇದರ ಜತೆಗೆ ವಂದೇ ಭಾರತ್ ಎಕ್ಸ್‌ಪ್ರೆಸ್ ಜೋಧ್‌ಪುರ-ಸಾಬರಮತಿ, ಜೋಧ್‌ಪುರ-ಅಬು ರಸ್ತೆ ಮತ್ತು ಅಹಮದಾಬಾದ್​​ಗೆ ಸಂಪರ್ಕ ಸಾಧಿಸಲಿದೆ

ಇದನ್ನೂ ಓದಿ: Bengaluru-Dharwad Vande Bharat Express: ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ಪ್ರಯಾಣಿಕರಿಗಾಗಿ ವಿಶೇಷ ಬಸ್‌ ವ್ಯವಸ್ಥೆ

ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಅಹಮದಾಬಾದ್‌ನಿಂದ (ಸಾಬರಮತಿ) ಸಂಜೆ 4:45 ಕ್ಕೆ ಹೊರಟು ಅದೇ ದಿನ ರಾತ್ರಿ 10:55 ಕ್ಕೆ ಜೋಧ್‌ಪುರ ತಲುಪಲಿದೆ. ಮತ್ತೆ ರೈಲು ಜೋಧಪುರದಿಂದ ಬೆಳಿಗ್ಗೆ 05:55 ಕ್ಕೆ ಹೊರಟು ಅಹಮದಾಬಾದ್‌ಗೆ (ಸಾಬರಮತಿ) ಅದೇ ದಿನ ಮಧ್ಯಾಹ್ನ 12:05ಕ್ಕೆ ತಲುಪುತ್ತದೆ.

ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಫೆಬ್ರವರಿ 15, 2019 ರಂದು ಪ್ರಧಾನಿ ಮೋದಿ ಅವರು ನವದೆಹಲಿ ಮತ್ತು ವಾರಣಾಸಿ ನಡುವೆ ಚಾಲನೆ ನೀಡಿದರು. ಚೆನ್ನೈನ ಇಂಟೆಗ್ರಲ್ ಕೋಚ್ ಫ್ಯಾಕ್ಟರಿ (ICF) ನಲ್ಲಿ ತಯಾರಿಸಲಾದ ಈ ರೈಲು  ‘ಮೇಕ್-ಇನ್-ಇಂಡಿಯಾ’ ಪ್ರಮುಖ ಭಾಗವಾಗಿದೆ. ಇದೀಗ ವಂದೇ ಭಾರತ್ ಎಕ್ಸ್‌ಪ್ರೆಸ್  ಅನೇಕ ರಾಜ್ಯಗಳಲ್ಲಿ ಸಂಚರಿಸುತ್ತಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:15 pm, Fri, 7 July 23

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ