Narendra Modi: ಯುಎಸ್ ಕಾಂಗ್ರೆಸ್​​​ ಸಭೆಯಲ್ಲಿ ಎರಡನೇ ಬಾರಿಗೆ ಮಾತನಾಡಲಿರುವ ಭಾರತದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆ ಪಡೆದ ಮೋದಿ

ಪ್ರಧಾನಿ ಮೋದಿ ಅವರು ಜೂನ್ 22 ರಂದು ಅಮೆರಿಕಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ಯುಎಸ್ ಕಾಂಗ್ರೆಸ್‌ನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅವರು ಭಾರತದ ಭವಿಷ್ಯದ ಬಗ್ಗೆ ತಮ್ಮ ದೃಷ್ಟಿಕೋನವನ್ನು ಹಂಚಿಕೊಳ್ಳುವ ಜತೆಗೆ ಉಭಯ ದೇಶಗಳು ಎದುರಿಸುತ್ತಿರುವ ಜಾಗತಿಕ ಸವಾಲುಗಳ ಕುರಿತು ಮಾತನಾಡಲಿದ್ದಾರೆ ಎಂದು ಉನ್ನತ ಕಾಂಗ್ರೆಸ್ ನಾಯಕರು ಹೇಳಿದ್ದಾರೆ.

Narendra Modi: ಯುಎಸ್ ಕಾಂಗ್ರೆಸ್​​​ ಸಭೆಯಲ್ಲಿ ಎರಡನೇ ಬಾರಿಗೆ ಮಾತನಾಡಲಿರುವ ಭಾರತದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆ ಪಡೆದ ಮೋದಿ
ಸಾಂದರ್ಭಿಕ ಚಿತ್ರ
Follow us
|

Updated on:Jun 07, 2023 | 10:40 AM

ದೆಹಲಿ: ಪ್ರಜಾಪ್ರಭುತ್ವ ಮೌಲ್ಯಗಳು, ಬಲವಾದ ಸಂಬಂಧಗಳು ಮತ್ತು ಜಾಗತಿಕ ಶಾಂತಿ, ಸಮೃದ್ಧಿಗೆ ಅಚಲವಾದ ಬದ್ಧತೆಯ ಅಡಿಪಾಯದ ಮೇಲೆ ನಿರ್ಮಿಸಲಾದ ಯುಎಸ್ ಜೊತೆಗಿನ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಗೆ ಭಾರತವು ಹೆಮ್ಮೆಪಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಮಂಗಳವಾರ (ಜೂ.7)ದಂದು ಟ್ವಿಟರ್​​ನಲ್ಲಿ ತಿಳಿಸಿದ್ದಾರೆ. ಹೌಸ್ ಸ್ಪೀಕರ್ ಕೆವಿನ್ ಮೆಕಾರ್ಥಿ, ಸೆನೆಟ್ ಮೆಜಾರಿಟಿ ಲೀಡರ್ ಚಕ್ ಶುಮರ್, ಸೆನೆಟ್ ರಿಪಬ್ಲಿಕನ್ ನಾಯಕ ಮಿಚ್ ಮೆಕ್‌ಕಾನ್ನೆಲ್ ಮತ್ತು ಹೌಸ್ ಡೆಮಾಕ್ರಟಿಕ್ ನಾಯಕ ಹಕೀಮ್ ಜೆಫ್ರೀಸ್ ಮೋದಿ ಅವರು ಅಮೆರಿಕಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ಯುಎಸ್ ಕಾಂಗ್ರೆಸ್‌ನ ಜಂಟಿ ಸಭೆಯನ್ನು ಉದ್ದೇಶಿಸಿ ಮಾತನಾಡಲು ಆಹ್ವಾನಿಸಲಾಗಿದೆ. ಈ ಬಗ್ಗೆ ಟ್ವಿಟರ್​​ನಲ್ಲಿ ಹಂಚಿಕೊಳ್ಳಲಾಗಿದೆ. ಇದಕ್ಕೆ ರೀ ಟ್ವಿಟ್​​ ಮಾಡಿದ ಮೋದಿ ಟ್ವಿಟರ್​​ ಮೂಲಕವೇ ಧನ್ಯವಾದ ತಿಳಿಸಿದ್ದಾರೆ.

ಕಾಂಗ್ರೆಸ್‌ನ ಜಂಟಿ ಸಭೆಯನ್ನು ಮತ್ತೊಮ್ಮೆ ಉದ್ದೇಶಿಸಿ ಮಾತನಾಡುವುದನ್ನು ಸ್ವೀಕರಿಸಲು ಮತ್ತು ಎದುರುನೋಡಲು ನನಗೆ ಗೌರವವಿದೆ” ಎಂದು ಪ್ರಧಾನಿ ಮೋದಿ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ. ಯುಎಸ್‌ನೊಂದಿಗಿನ ನಮ್ಮ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆ ಬಗ್ಗೆ ನಾವು ಹೆಮ್ಮೆಪಡುತ್ತೇವೆ, ಪ್ರಜಾಪ್ರಭುತ್ವ ಮೌಲ್ಯಗಳು, ಬಲವಾದ ಸಂಬಂಧಗಳು ಮತ್ತು ಜಾಗತಿಕ ಶಾಂತಿ, ಸಮೃದ್ಧಿಗೆ ಅಚಲವಾದ ಬದ್ಧತೆಯ ಅಡಿಪಾಯದ ಮೇಲೆ ನಿರ್ಮಿಸಲಾಗಿದೆ ಎಂದು ಅವರು ಹೇಳಿದರು.

ಪ್ರಧಾನಿ ಮೋದಿ ಅವರು ಜೂನ್ 22 ರಂದು ಅಮೆರಿಕಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ಯುಎಸ್ ಕಾಂಗ್ರೆಸ್‌ನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅವರು ಭಾರತದ ಭವಿಷ್ಯದ ಬಗ್ಗೆ ತಮ್ಮ ದೃಷ್ಟಿಕೋನವನ್ನು ಹಂಚಿಕೊಳ್ಳುವ ಜತೆಗೆ ಉಭಯ ದೇಶಗಳು ಎದುರಿಸುತ್ತಿರುವ ಜಾಗತಿಕ ಸವಾಲುಗಳ ಕುರಿತು ಮಾತನಾಡಲಿದ್ದಾರೆ ಎಂದು ಉನ್ನತ ಕಾಂಗ್ರೆಸ್ ನಾಯಕರು ಹೇಳಿದ್ದಾರೆ.

ಇದನ್ನೂ ಓದಿ: ಜಿ20 ಶೃಂಗಸಭೆಯಲ್ಲಿ ಒಮ್ಮತ ರೂಪಿಸುವಲ್ಲಿ ಮೋದಿ ಪ್ರಧಾನ ಪಾತ್ರ ವಹಿಸಿದ್ದರು: ಯುಎಸ್ ಅಧಿಕಾರಿ

ಜೂನ್ 2016ರ ನಂತರ ಪ್ರಧಾನಿ ಮೋದಿ ಅವರು ಯುಎಸ್ ಕಾಂಗ್ರೆಸ್‌ನ ಜಂಟಿ ಸಭೆಯನ್ನು ಉದ್ದೇಶಿಸಿ ಎರಡನೇ ಬಾರಿ ಮಾತನಾಡುತ್ತಿದ್ದಾರೆ. ಈ ಸಭೆಯಲ್ಲಿ ಎರಡನೇ ಬಾರಿ ಭಾಗವಹಿಸುತ್ತಿರುವ ಮೊದಲ ಭಾರತದ ಪ್ರಧಾನಿ ಎಂಬ ಹೆಗ್ಗಳಿಗೂ ಮೋದಿ ಪಾತ್ರರಾಗಿದ್ದಾರೆ.

Published On - 10:38 am, Wed, 7 June 23

ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ