ಮೋದಿಯೇ ದೇಶದ ಅತ್ಯಂತ ಜನಪ್ರಿಯ ಪ್ರಧಾನಿ, ಆದರೆ ಕಾರ್ಯಕ್ಷಮತೆಯಲ್ಲಿ ಕುಸಿತ, ಸಮೀಕ್ಷೆ ವರದಿ ಇಲ್ಲಿದೆ

ಭಾರತದ ಅತ್ಯಂತ ಜನಪ್ರಿಯ ಪ್ರಧಾನಿ ಯಾರು? ಯಾರಿಗೆ ಯಾವ ಸ್ಥಾನವನ್ನು ನೀಡಿಲಾಗಿದೆ. ಮೋದಿ ಅವರು ಎಷ್ಟನೇ ಸ್ಥಾನದಲ್ಲಿದ್ದಾರೆ. ಅವರ ಕಾರ್ಯಕ್ಷಮತೆ ವರದಿ ಏನು? ಇಂದಿರಾ ಗಾಂಧಿ, ಮನಮೋಹನ್​​​ ಸಿಂಗ್, ವಾಜಪೇಯಿ, ಇವರಲ್ಲಿ ಯಾರು ಮೊದಲು, ಯಾರು ಕೊನೆ? ಅವರ ಕಾರ್ಯವೈಖರಿ ಹೇಗಿದೆ ಎಂಬ ಬಗ್ಗೆ ಈ ಸಮೀಕ್ಷೆ ವರದಿ ನೀಡಿದೆ.

ಮೋದಿಯೇ ದೇಶದ ಅತ್ಯಂತ ಜನಪ್ರಿಯ ಪ್ರಧಾನಿ, ಆದರೆ ಕಾರ್ಯಕ್ಷಮತೆಯಲ್ಲಿ ಕುಸಿತ, ಸಮೀಕ್ಷೆ ವರದಿ ಇಲ್ಲಿದೆ
ಮೋದಿ, ವಾಜಪೇಯಿ, ಮನಮೋಹನ್​​ ಸಿಂಗ್, ಇಂದಿರಾ ಗಾಂಧಿ
Follow us
ಅಕ್ಷಯ್​ ಪಲ್ಲಮಜಲು​​
|

Updated on: Aug 24, 2024 | 3:29 PM

ಭಾರತದ ಪ್ರಧಾನಿಯಾಗಿ ಮೋದಿ ಅವರು ಮೂರನೇ ಅವಧಿಗೆ ಅಧಿಕಾರಕ್ಕೆ ಬಂದಿದ್ದಾರೆ. ಬಿಜೆಪಿಗೆ ಸ್ಪಷ್ಟ ಬಹುಮತ ಇಲ್ಲದಿದ್ದರು. ಎನ್​​ಡಿಎ ಮಿತ್ರಕೂಟದ ಮೂಲಕ ಸರ್ಕಾರ ರಚನೆ ಮಾಡಿದ್ದಾರೆ. ಆದರೆ ಮೋದಿ ಅವರ ಜನಪ್ರಿಯತೆಗೆ ಯಾವುದು ಕೊರತೆ ಬಂದಿಲ್ಲ. ಇಂಡಿಯಾ ಟುಡೆಯ ಮೂಡ್ ಆಫ್ ದಿ ನೇಷನ್ ನಡೆಸಿದ ಸಮೀಕ್ಷೆ ಪ್ರಕಾರ, ಇತಿಹಾಸದಲ್ಲಿ ಅತ್ಯಂತ ಜನಪ್ರಿಯ ಪ್ರಧಾನಿ ಎಂದು ಹೇಳಲಾಗಿದೆ. ಆದರೆ ಪ್ರಧಾನಿ ಮೋದಿ ಅವರ ಕಾರ್ಯಕ್ಷಮತೆಯ ರೇಟಿಂಗ್ ಸ್ವಲ್ಪಮಟ್ಟಿಗೆ ಕುಸಿತ ಕಂಡಿದೆ ಎಂದು ಸಮೀಕ್ಷೆ ಹೇಳುತ್ತದೆ.

ಸಮೀಕ್ಷೆಯ ಪ್ರಕಾರ, ನಿಮ್ಮ ಮೆಚ್ಚಿನ ಪ್ರಧಾನಿ ಯಾರು ಎಂಬ ಕೇಳದ ಪ್ರಶ್ನೆಗಳಲ್ಲಿ ಶೇಕಡಾ 51 ರಷ್ಟು ಜನರು ಪ್ರಧಾನಿ ಮೋದಿಯನ್ನು ಭಾರತದ ಇತಿಹಾಸದಲ್ಲಿ ಅತ್ಯುತ್ತಮ ಪ್ರಧಾನಿ ಎಂದು ಆಯ್ಕೆ ಮಾಡಿದ್ದಾರೆ. ಫೆಬ್ರವರಿ 2024 ರಲ್ಲಿ ಮೂಡ್ ಆಫ್ ದಿ ನೇಷನ್ ಸಮೀಕ್ಷೆಯಲ್ಲಿ ಶೇಕಡಾ 43.7ರಷ್ಟು ಏರಿಕೆಯಾಗಿದೆ. ಮೋದಿಯ ನಂತರ ಅಂದರೆ ಎರಡನೇ ಸ್ಥಾನದಲ್ಲಿ ನಿಲ್ಲುವುದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ಅವರಿಗೆ ಶೇಕಡಾ 12.1 ರೇಟಿಂಗ್, ಮನಮೋಹನ್ ಸಿಂಗ್ ಶೇಕಡಾ 11.6 ರೇಟಿಂಗ್ ಮತ್ತು ಇಂದಿರಾ ಗಾಂಧಿ ಶೇಕಡಾ 10.4 ರೇಟಿಂಗ್ ನೀಡಲಾಗಿದೆ.

ಇದನ್ನೂ ಓದಿ: ಮೋದಿ ನಂತರ ಈ ವ್ಯಕ್ತಿಯೇ ಪ್ರಧಾನಿ ಅಭ್ಯರ್ಥಿ, ಸಮೀಕ್ಷೆ ಹೇಳಿದ್ದೇನು?

ಈ ಸಮೀಕ್ಷೆಯಲ್ಲಿ ಮೊದಲ ಬಾರಿಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಇಂದಿರಾ ಗಾಂಧಿ ಅವರನ್ನು ಹಿಂದಿಕ್ಕಿದ್ದಾರೆ. ಇನ್ನು ಮೋದಿ ಅವರ ಕಾರ್ಯವೈಖರಿಯನ್ನು ಗಮನಿಸುವುದಾದರೆ, ಫೆಬ್ರವರಿಯ ಮೂಡ್ ಆಫ್ ದಿ ನೇಷನ್ ಸಮೀಕ್ಷೆಗೆ ಹೋಲಿಸಿದರೆ ಸ್ವಲ್ಪಮಟ್ಟಿನ ಕುಸಿತ ಕಂಡುಬಂದಿದೆ. ಫೆಬ್ರವರಿ ಸಮೀಕ್ಷೆಯಲ್ಲಿ 60.5 ಪ್ರತಿಶತ ಜನರು ಅವರ ಕೆಲಸವನ್ನು ಅತ್ಯುತ್ತಮ ಮತ್ತು ಉತ್ತಮ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ