Modi Ki Guarantee: ವಿಶ್ವದ ಮೂರು ಅತಿದೊಡ್ಡ ಆರ್ಥಿಕತೆಗಳಲ್ಲೊಂದಾಗಲಿದೆ ಭಾರತ; ಇದು ಮೋದಿ ಗ್ಯಾರಂಟಿ ಎಂದ ಪ್ರಧಾನಿ

ನಮ್ಮ ಸರ್ಕಾರದ ಮುಂದಿನ ಅವಧಿಯಲ್ಲಿ ಅಭಿವೃದ್ಧಿಯು ಇನ್ನಷ್ಟು ವೇಗ ಪಡೆದುಕೊಳ್ಳಲಿದೆ. ಪರಿಣಾಮವಾಗಿ ದೇಶವು ವಿಶ್ವದ ಅಗ್ರ ಮೂರು ಅತಿದೊಡ್ಡ ಆರ್ಥಿಕತೆಗಳಲ್ಲೊಂದಾಗಲಿದೆ ಎಂದು ಮೋದಿ ಹೇಳಿದ್ದಾರೆ.

Modi Ki Guarantee: ವಿಶ್ವದ ಮೂರು ಅತಿದೊಡ್ಡ ಆರ್ಥಿಕತೆಗಳಲ್ಲೊಂದಾಗಲಿದೆ ಭಾರತ; ಇದು ಮೋದಿ ಗ್ಯಾರಂಟಿ ಎಂದ ಪ್ರಧಾನಿ
ದೆಹಲಿಯಲ್ಲಿ ಅಂತಾರಾಷ್ಟ್ರೀಯ ಪ್ರದರ್ಶನ ಹಾಗೂ ಸಮ್ಮೇಳನ ಕೇಂದ್ರದಲ್ಲಿ ಪ್ರಧಾನಿ ಮೋದಿ

Updated on: Jul 26, 2023 | 10:20 PM

ನವದೆಹಲಿ: ‘ನಮ್ಮ ಸರ್ಕಾರದ ಮೂರನೇ ಅವಧಿಯಲ್ಲಿ ಭಾರತವು ವಿಶ್ವದ ಮೂರು ಅತಿದೊಡ್ಡ ಆರ್ಥಿಕತೆಗಳಲ್ಲಿ ಒಂದಾಗಿರಲಿದೆ. ಇದು ಎನ್​ಡಿಎ ಸರ್ಕಾರದ ಮೂರನೇ ಅವಧಿಗೆ ನಿಮಗೆ ಮೋದಿ ನೀಡುವ (Guarantee) ಗ್ಯಾರಂಟಿಯಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದರು. ದೆಹಲಿಯಲ್ಲಿ ಅಂತಾರಾಷ್ಟ್ರೀಯ ಪ್ರದರ್ಶನ ಹಾಗೂ ಸಮ್ಮೇಳನ ಕೇಂದ್ರ ‘ಭಾರತ್ವ ಮಂಟಪಂ’ ಅನ್ನು (IECC Complex) ಉದ್ಘಾಟನೆ ಮಾಡಿದ ನಂತರ ಮಾತನಾಡಿದ ಅವರು, ನಮ್ಮ ಸರ್ಕಾರದ ಮುಂದಿನ ಅವಧಿಯಲ್ಲಿ ಅಭಿವೃದ್ಧಿಯು ಇನ್ನಷ್ಟು ವೇಗ ಪಡೆದುಕೊಳ್ಳಲಿದೆ. ಪರಿಣಾಮವಾಗಿ ದೇಶವು ವಿಶ್ವದ ಅಗ್ರ ಮೂರು ಅತಿದೊಡ್ಡ ಆರ್ಥಿಕತೆಗಳಲ್ಲೊಂದಾಗಲಿದೆ. ಇದು ನಮ್ಮ ಸರ್ಕಾರದ ಮೂರನೇ ಅವಧಿಗೆ ನಿಮಗೆ ನೀಡುತ್ತಿರುವ ಗ್ಯಾರಂಟಿಯಾಗಿದೆ ಎಂದು ಹೇಳಿದರು.

ಸರ್ಕಾರದ ಕೆಲವು ಸಾಧನೆಗಳನ್ನು ಒತ್ತಿಹೇಳಿದ ಮೋದಿ, ಕಳೆದ 5 ವರ್ಷಗಳಲ್ಲಿ ದೇಶದಲ್ಲಿ 13.5 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ. ಭಾರತದಲ್ಲಿ ತೀವ್ರ ಬಡತನ ಕೊನೆಗೊಳ್ಳುವ ಹಂತದಲ್ಲಿದೆ ಎಂದು ಅಂತಾರಾಷ್ಟ್ರೀಯ ಏಜೆನ್ಸಿಗಳು ಹೇಳುತ್ತಿವೆ. ಕಳೆದ 9 ವರ್ಷಗಳಲ್ಲಿ ಕೈಗೊಂಡ ನಿರ್ಧಾರಗಳು ಮತ್ತು ನೀತಿಗಳು ದೇಶವನ್ನು ಸರಿಯಾದ ದಿಕ್ಕಿನಲ್ಲಿ ಕೊಂಡೊಯ್ಯುತ್ತಿವೆ ಎಂಬುದನ್ನು ಇದು ತೋರಿಸುತ್ತದೆ ಎಂದು ಹೇಳಿದರು.

ಪ್ರತಿಪಕ್ಷಗಳ ವಿರುದ್ಧ ಮೋದಿ ವ್ಯಂಗ್ಯ

ಪ್ರತಿಪಕ್ಷಗಳ ವಿರುದ್ಧ ವ್ಯಂಗ್ಯವಾಡಿದ ಮೋದಿ, ಕೆಲವರು ಒಳ್ಳೆಯ ಕೆಲಸಗಳ ಬಗ್ಗೆ ನಕಾರಾತ್ಮಕ ಹೇಳಿಕೆಗಳನ್ನು ನೀಡುವ ಮತ್ತು ಅವುಗಳಿಗೆ ತಡೆಯೊಡ್ಡುವ ಪ್ರವೃತ್ತಿಯನ್ನು ಹೊಂದಿದ್ದಾರೆ ಎಂದು ಹೇಳಿದರು. ‘ಕರ್ತವ್ಯ ಪಥ’ ನಿರ್ಮಾಣವಾಗುತ್ತಿದ್ದಾಗ ಪತ್ರಿಕೆಗಳ ಮುಖಪುಟದಲ್ಲಿ ಬ್ರೇಕಿಂಗ್ ನ್ಯೂಸ್ ಆಗಿ ಹಲವು ವಿಷಯಗಳು ರಾರಾಜಿಸುತ್ತಿದ್ದವು. ಕೋರ್ಟುಗಳಲ್ಲಿಯೂ ಪ್ರಶ್ನಿಸಲಾಯಿತು. ಆಮೇಲೆ ನಿರ್ಮಾಣವಾದಾಗ ಅದೇ ಜನ ಚೆನ್ನಾಗಿದೆ ಎಂದರು.

ಇದನ್ನೂ ಓದಿ: 2027ಕ್ಕೆ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಭಾರತ: ವರದಿ

ತಮ್ಮ ಭಾಷಣದ ವೇಳೆ ಪ್ರಧಾನಿ ಮೋದಿ ಅವರು ಕಾರ್ಗಿಲ್ ವಿಜಯ್ ದಿವಸದ ಬಗ್ಗೆ ಪ್ರಸ್ತಾಪಿಸಿದರು ಮತ್ತು ಕಾರ್ಗಿಲ್ ಯುದ್ಧದ ವೀರರಿಗೆ ಗೌರವ ಸಲ್ಲಿಸಿದರು.

ಇಂದು ಕಾರ್ಗಿಲ್ ವಿಜಯ್ ದಿವಸ್ ಆಗಿದ್ದು, ದೇಶದ ಪಾಲಿಗೆ ಐತಿಹಾಸಿಕ ದಿನ. ದೇಶದ ಶತ್ರುಗಳನ್ನು ನಮ್ಮ ವೀರ ಪುತ್ರರು ಸೋಲಿಸಿದರು. ಕಾರ್ಗಿಲ್ ಯುದ್ಧದಲ್ಲಿ ಪ್ರಾಣ ತ್ಯಾಗ ಮಾಡಿದ ಪ್ರತಿಯೊಬ್ಬ ವೀರರಿಗೆ ನಾನು ಗೌರವ ಸಲ್ಲಿಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us