National Executive Meeting: ಪ್ರಧಾನಿ ಮೋದಿ ದೆಹಲಿಯಲ್ಲಿ ಮೆಗಾ ರೋಡ್ ಶೋ, ರಾಷ್ಟ್ರೀಯ ಕಾರ್ಯಕಾರಿಣಿ ಸಭೆಗೆ ಚಾಲನೆ

ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿ ಮೆಗಾ ರೋಡ್ ಶೋ ನಡೆಸುತ್ತಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿ ಪ್ರಮುಖ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ರೋಡ್ ಶೋ ನಡೆಸಲಾಗುತ್ತಿದೆ.

National Executive Meeting: ಪ್ರಧಾನಿ ಮೋದಿ ದೆಹಲಿಯಲ್ಲಿ ಮೆಗಾ ರೋಡ್ ಶೋ, ರಾಷ್ಟ್ರೀಯ ಕಾರ್ಯಕಾರಿಣಿ ಸಭೆಗೆ ಚಾಲನೆ
Modi
Updated By: ಅಕ್ಷಯ್​ ಪಲ್ಲಮಜಲು​​

Updated on: Jan 17, 2023 | 11:22 AM

ದೆಹಲಿ: ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿ ಮೆಗಾ ರೋಡ್ ಶೋ ನಡೆಸಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿ ಪ್ರಮುಖ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ (National Executive Meeting) ನಡೆಸುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ರೋಡ್ ಶೋ ನಡೆಸಲಾಯಿತು. ಜೊತೆಗೆ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಚಾಲನೆ ನೀಡಿದರು. ಬಿಜೆಪಿ ರಾಷ್ಟ್ರಧ್ಯಕ್ಷ ಜೆಪಿ ನಡ್ಡಾ ರೋಡ್‌ಶೋಗೆ ಮುನ್ನ ರಾಷ್ಟ್ರೀಯ ಪದಾಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಇದೀಗ ರೋಡ್ ಶೋ ಮೂಲಕ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕಾರ್ಯಕಾರಿಣಿ ಸಭೆಗೆ ಚಾಲನೆ ನೀಡಿದ್ದಾರೆ. ಕಾರ್ಯಕಾರಿಣಿ ಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕೇಂದ್ರ ಸಚಿವರಾದ ರಾಜನಾಥ್​ ಸಿಂಗ್, ನಿತಿನ್​ ಗಡ್ಕರಿ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ದೀಪ ಬೆಳಗಿಸುವ ಮೂಲಕ ಸಭೆಗೆ ಚಾಲನೆ ನೀಡಿದ್ದಾರೆ.

ದೆಹಲಿ ಸಂಚಾರ ಪೊಲೀಸರು ವ್ಯಾಪಕ ಬಂದೋಬಸ್ತ್ ಮಾಡಿದ್ದಾರೆ. ಜಂತರ್ ಮಂತರ್ ರಸ್ತೆ, ಅಶೋಕ ರಸ್ತೆ ಮತ್ತು ಬಾಂಗ್ಲಾ ಸಾಹಿಬ್ ಲೇನ್ ಸೇರಿದಂತೆ ಎಂಟು ರಸ್ತೆಗಳನ್ನು ಸೋಮವಾರ ಸಂಜೆ 5 ಗಂಟೆಯವರೆಗೆ “ರೋಡ್ ಶೋಗಾಗಿ ಮಾಡಿದ ಸಂಚಾರ ವ್ಯವಸ್ಥೆಗಳ ಭಾಗವಾಗಿ” ಮುಚ್ಚಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. “ಲುಟ್ಯೆನ್ಸ್ ದೆಹಲಿಯಲ್ಲಿ ಸಂಚಾರದ ಮೇಲೆ ಪರಿಣಾಮ ಬೀರಲಿದೆ ಮತ್ತು ಪೊಲೀಸರು ಅಗತ್ಯ ತಿರುವುಗಳನ್ನು ಯೋಜಿಸಿದ್ದಾರೆ” ಎಂದು ಅಧಿಕಾರಿಗಳು ಹಿಂದಿನ HT ವರದಿಯಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನು ಓದಿ:Modi Road Show: ಸೂರತ್​​ನಲ್ಲಿ ಪ್ರಧಾನಿ ರೋಡ್​​ ಶೋ; ರಸ್ತೆಯುದ್ದಕ್ಕೂ ಮೋದಿಗೆ ಜೈಕಾರ ಹಾಕಿ ಸ್ವಾಗತ

ಸೋಮವಾರ ಮಧ್ಯಾಹ್ನ 3 ಗಂಟೆಯಿಂದ ಪಟೇಲ್ ಚೌಕ್‌ನಿಂದ ಸಂಸದ್ ಮಾರ್ಗ್ ಮತ್ತು ಜೈ ಸಿಂಗ್ ರಸ್ತೆ ಜಂಕ್ಷನ್‌ವರೆಗೆ ಬಿಜೆಪಿ ರೋಡ್ ಶೋ ಆಯೋಜಿಸುತ್ತಿದೆ. ರೋಡ್ ಶೋ ನಡೆಯುವ ಮಾರ್ಗದ ಸುತ್ತಮುತ್ತಲಿನ ಪ್ರದೇಶದಲ್ಲಿ ವಿಶೇಷ ಟ್ರಾಫಿಕ್ ವ್ಯವಸ್ಥೆ ಮಾಡಲಾಗುವುದು ಎಂದು ದೆಹಲಿ ಸಂಚಾರ ಪೊಲೀಸರು ತಿಳಿಸಿದ್ದಾರೆ.

ಕಳೆದ ವಾರ, ಪ್ರಧಾನಿಯವರು ಹುಬ್ಬಳ್ಳಿಯಲ್ಲಿ ರೋಡ್‌ಶೋ ನಡೆಸಿದ್ದರು, ಅಲ್ಲಿ ಯುವಕನೊಬ್ಬ ತನ್ನ ಕಡೆಗೆ ಧಾವಿಸುತ್ತಿರುವುದನ್ನು ಕಂಡು , ಅವರ ಭದ್ರತೆಯ ಬಗ್ಗೆ ಕಳವಳವನ್ನು ಉಂಟುಮಾಡಿತು. ಆದರೆ ನಂತರ ಪೊಲೀಸರು, ಈ ಘಟನೆಯನ್ನು ಭದ್ರತಾ ಲೋಪ ಎಂದು ಕರೆಯಲು ಸಾಧ್ಯವಿಲ್ಲ, ಏಕೆಂದರೆ ಎಲ್ಲರನ್ನೂ ಪರೀಕ್ಷಿಸಲಾಗಿದೆ ಮತ್ತು ಪರಿಶೀಲಿಸಲಾಗಿದೆ. ಆ ಬಾಲಕ ಮೂಲ ಯೋಜನೆಯ ಪ್ರಕಾರ ಪ್ರಧಾನಿಯನ್ನು ಬಳಿ ಬರಲು ಈ ಮೊದಲೇ ಅನುಮತಿಯನ್ನು ಹೊಂದಿದ್ದರು. ಆದರೆ ನಾವು ಪ್ರೋಟೋಕಾಲ್ ಪ್ರಕಾರ ಎಸ್‌ಪಿಜಿಗೆ ವರದಿಯನ್ನು ಸಲ್ಲಿಸುತ್ತೇವೆ ಎಂದು ಅಧಿಕಾರಿಯೊಬ್ಬರು ಈ ಹಿಂದೆ ಎಚ್‌ಟಿ ವರದಿಯಲ್ಲಿ ಹೇಳಿದ್ದರು.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:22 pm, Mon, 16 January 23