ಸುರಂಗ ಮಾರ್ಗದಲ್ಲಿ ಸಿಲುಕಿದ್ದ ಕಾರ್ಮಿಕರ ರಕ್ಷಣೆಗೆ ಅಗತ್ಯ ನೆರವು ನೀಡಿದ ಮೋದಿ: ಜನರಲ್ ವಿಕೆ ಸಿಂಗ್
ಉತ್ತರಾಖಂಡದ ಉತ್ತರಕಾಶಿಯಲ್ಲಿ ಸಂಭವಿಸಿದ ಸುರಂಗ ಮಾರ್ಗ ಕುಸಿತ ಪ್ರಕರಣ ಸಂಬಂಧ ಸುರಂಗದೊಳಗೆ ಸಿಲುಕಿದ್ದ ಎಲ್ಲಾ 41 ಕಾರ್ಮಿಕರನ್ನು ಯಶಸ್ವಿಯಾಗಿ ರಕ್ಷಣೆ ಮಾಡಲಾಗಿದೆ. ಈ ಬಗ್ಗೆ ಮಾತನಾಡಿದ ಕೇಂದ್ರ ಸಚಿವ ಜನರಲ್ ವಿಕೆ ಸಿಂಗ್, ಕಾರ್ಮಿಕರ ರಕ್ಷಣೆಗೆ ಬೇಕಾದ ಅಗತ್ಯ ನೆರವನ್ನು ಪ್ರಧಾನಿ ಮೋದಿ ಒದಗಿಸಿದ್ದಾರೆ ಎಂದರು.
ಉತ್ತರಕಾಶಿ, ನ.28: ಉತ್ತರಕಾಂಡದ ಉತ್ತರಕಾಶಿಯಲ್ಲಿ ಕುಸಿದ ಸುರಂಗ ಮಾರ್ಗದೊಳಗೆ ಸಿಲುಕಿದ್ದ ಕಾರ್ಮಿಕರ ರಕ್ಷಣೆಗೆ ಬೇಕಾದ ಎಲ್ಲಾ ನೆರವನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಒದಗಿಸಿದ್ದಾರೆ ಎಂದು ಕೇಂದ್ರ ಸಚಿವ ಜನರಲ್ ವಿಕೆ ಸಿಂಗ್ (General VK Singh) ಹೇಳಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ದೇಶಕ್ಕೆ ಏನು ಬೇಕೋ ಅದನ್ನು ಪ್ರಧಾನಿ ಒದಗಿಸಿದ್ದಾರೆ. ಇದುವರೆಗೆ ಯಾವ ಕಾರ್ಯಾಚರಣೆಗೂ ಸಿಗದ ಸಹಕಾರ, ಸಂಪನ್ಮೂಲ ಈ ಕಾರ್ಯಾಚರಣೆಗೆ ಸಿಕ್ಕಿದೆ ಎಂದರು.
#WATCH उत्तरकाशी(उत्तराखंड) सुरंग बचाव: केंद्रीय मंत्री जनरल वीके सिंह ने कहा, “हमारे देश में जिस भी हमें ज़रूरत पड़ी वह प्रधानमंत्री ने मुहैया करवाई… जितने साधन जुटाए गए हैं इतने साधन किसी और ऑपरेशन के लिए नहीं जुटाए गए होंगे।” pic.twitter.com/5VGz3mTws6
— ANI_HindiNews (@AHindinews) November 28, 2023
ಉತ್ತರಕಾಶಿ ಡಿಸಿ ಅಭಿಷೇಕ್ ರುಹೇಲಾ ಮಾತನಾಡಿ, “ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಎಲ್ಲಾ ಸಿಬ್ಬಂದಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ಪ್ರಧಾನಿ ಮೋದಿ ಮತ್ತು ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಅವರು ಕಾರ್ಯಾಚರಣೆ ವಿಚಾರವಾಗಿ ನಿರಂತವಾಗಿ ಸಂಪರ್ಕದಲ್ಲಿದ್ದರು. ಸಂಪನ್ಮೂಲಗಳನ್ನು ಕ್ರೋಢೀಕರಿಸುವಲ್ಲಿ ಯಾವುದೇ ಸಮಯವನ್ನು ವ್ಯರ್ಥ ಮಾಡಲಿಲ್ಲ. ಎಲ್ಲಾ ಕಾರ್ಮಿಕರು ಆರೋಗ್ಯವಂತರಾಗಿದ್ದು, ಅವರನ್ನು ಪ್ರಾಥಮಿಕ ನಿಗಾದಲ್ಲಿ ಇರಿಸಲಾಗುವುದು” ಎಂದರು.
ಇದನ್ನೂ ಓದಿ: ಉತ್ತರಾಖಂಡ ಸುರಂಗದಲ್ಲಿ ಸಿಲುಕಿದ್ದ ಎಲ್ಲ 41 ಮಂದಿಯ ರಕ್ಷಣೆ: ಪ್ರಧಾನಿ ಮೋದಿ, ಸಚಿವ ನಿತಿನ್ ಗಡ್ಕರಿ ಅಭಿನಂದನೆ
#WATCH | Uttarkashi tunnel rescue | The 41 workers who have been successfully rescued are being brought to the Community Health Center in Chinyalisaur for primary medical treatment. pic.twitter.com/pLtqJsdOvt
— ANI (@ANI) November 28, 2023
ಯಶಸ್ವಿಯಾಗಿ ರಕ್ಷಿಸಲ್ಪಟ್ಟ 41 ಕಾರ್ಮಿಕರನ್ನು ಪ್ರಾಥಮಿಕ ವೈದ್ಯಕೀಯ ಚಿಕಿತ್ಸೆಗಾಗಿ ಚಿನ್ಯಾಲಿಸೌರ್‌ನಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದ್ದು, ವೈದ್ಯರು ನಿಗಾ ಇರಿಸಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ