Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮೋದಿ ವಿಜಯ ಸಾಧಿಸಬೇಕು: ರಷ್ಯಾದ ಅಧ್ಯಕ್ಷ ಪುಟಿನ್

ದೆಹಲಿ ಮತ್ತು ಮಾಸ್ಕೋ ನಡುವೆ ರಾಜಕೀಯ ಶಕ್ತಿಗಳ ಹೊಂದಾಣಿಕೆ ಏನೇ ಇರಲಿ. ಅದಕ್ಕೂ ಮೇಲಾಗಿ ನನ್ನ ಮತ್ತು ಮೋದಿ ಅವರು ಸ್ನೇಹ ಇದೆ ಎಂದು ಹೇಳಿದರು. ಇದರ ಜತೆಗೆ ಪ್ರಧಾನಿ ಮೋದಿ ಅವರೊಂದಿಗೆ ಉಕ್ರೇನ್‌ ಬೆಳವಣಿಗೆ ಬಗ್ಗೆ ಮಾತನಾಡಿದ್ದಾನೆ. ಹಲವು ಬಾರಿ ಅಲ್ಲಿ ನಡೆಯುವ ವಿಚಾರಗಳ ಬಗ್ಗೆ ನಾವು ವೈಯಕ್ತಿಕವಾಗಿ ಮಾತನಾಡಿದ್ದೇನೆ. ಈ ಬಗ್ಗೆ ಅವರು ಕೂಡ ಸಲಹೆಗಳನ್ನು ಕೂಡ ನೀಡಿದ್ದಾರೆ. ಇದರ ಜತೆಗೆ ಮುಂದಿನ ಲೋಕಸಭೆ ಚುನಾವಣೆ ಪ್ರಧಾನಿ ಮೋದಿ ಅವರು ವಿಜಯ ಸಾಧಿಸಬೇಕು ಎಂದು ಹಾರೈಸಿದ್ದಾರೆ.

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮೋದಿ ವಿಜಯ ಸಾಧಿಸಬೇಕು: ರಷ್ಯಾದ ಅಧ್ಯಕ್ಷ ಪುಟಿನ್
Follow us
ಅಕ್ಷಯ್​ ಪಲ್ಲಮಜಲು​​
|

Updated on: Dec 28, 2023 | 11:11 AM

ಭಾರತ ಮತ್ತು ರಷ್ಯಾ ಅವಿನಾಭಾವ ಸಂಬಂಧವನ್ನು ಹೊಂದಿದೆ. ರಷ್ಯಾ ಭಾರತವನ್ನು ಎಲ್ಲ ವಿಚಾರದಲ್ಲೂ ಬೆಂಬಲಿಸಿದೆ. ರಾಜಕೀಯವಾಗಿ, ಆರ್ಥಿಕವಾಗಿ ಹಾಗೂ ಸೈನ್ಯದಲ್ಲೂ ಭಾರತವನ್ನು ರಷ್ಯಾ ಬೆಂಬಲಿಸಿದೆ. ಈ ಕಾರಣಕ್ಕೆ ಭಾರತ ಮತ್ತು ರಷ್ಯಾ ಒಳ್ಳೆಯ ಸಂಬಂಧವನ್ನು ಹೊಂದಿದೆ. ಭಾರತ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಅದೆಷ್ಟೋ ಬಾರಿ ರಷ್ಯಾಕ್ಕೆ ಭೇಟಿ ನೀಡಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಕೂಡ ಭಾರತಕ್ಕೆ ಅನೇಕ ಬಾರಿ ಭೇಟಿ ನೀಡಿದ್ದಾರೆ. ಇಬ್ಬರು ಪ್ರತಿ ಬಾರಿ ಭೇಟಿ ಮಾಡಿ ಸಂದರ್ಭದಲ್ಲಿ ದೇಶದ ಅಭಿವೃದ್ಧಿ ಹಾಗೂ ಒಪ್ಪಂದಗಳ ಬಗ್ಗೆ ಹಾಗೂ ಆತ್ಮೀಯ ಸ್ನೇಹದ ಬಗ್ಗೆ ಮಾತನಾಡುತ್ತಾರೆ. ಆದರೆ ಇದೆ ಮೊದಲ ಬಾರಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತದ ರಾಜಕೀಯದ ಬಗ್ಗೆ ಮಾತನಾಡಿದ್ದಾರೆ. ಮತ್ತೊಮ್ಮೆ ಪ್ರಧಾನಿ ಮೋದಿ ಅವರು ಅಧಿಕಾರಕ್ಕೆ ಬರುವಂತೆ ಹಾರೈಸಿದ್ದಾರೆ.

ಭಾರತದ ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್ ಅವರು ರಷ್ಯಾ ಪ್ರವಾಸದಲ್ಲಿದ್ದಾರೆ. ಈ ಸಂದರ್ಭದಲ್ಲಿ ಅವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಭೇಟಿಯಾಗಿದ್ದಾರೆ. ಈ ವೇಳೆ ಪುಟಿನ್ ಪ್ರಧಾನಿ ಮೋದಿ ಅವರನ್ನು ರಷ್ಯಾಕ್ಕೆ ಆಹ್ವಾನಿಸಿದ್ದಾರೆ. ಇದರ ಜತೆಗೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮೋದಿ ಅವರು ವಿಜಯ ಸಾಧಿಸಲಿ ಎಂದು ಹೇಳಿದ್ದಾರೆ. ನಮ್ಮ ಸ್ನೇಹಿತರ ಪ್ರತಿ ಯಶಸ್ಸನ್ನು ಹಾರೈಸುತ್ತೇನೆ. ಎರಡು ದೇಶಗಳು ಸಾಂಪ್ರದಾಯಿಕ ಸೌಹಾರ್ದ ಸಂಬಂಧಗಳನ್ನು ಹೊಂದಿದೆ ಎಂದು ಹೇಳಿದರು.

ದೆಹಲಿ ಮತ್ತು ಮಾಸ್ಕೋ ನಡುವೆ ರಾಜಕೀಯ ಶಕ್ತಿಗಳ ಹೊಂದಾಣಿಕೆ ಏನೇ ಇರಲಿ. ಅದಕ್ಕೂ ಮೇಲಾಗಿ ನನ್ನ ಮತ್ತು ಮೋದಿ ಅವರು ಸ್ನೇಹ ಇದೆ ಎಂದು ಹೇಳಿದರು. ಇದರ ಜತೆಗೆ ಪ್ರಧಾನಿ ಮೋದಿ ಅವರೊಂದಿಗೆ ಉಕ್ರೇನ್‌ ಬೆಳವಣಿಗೆ ಬಗ್ಗೆ ಮಾತನಾಡಿದ್ದಾನೆ. ಹಲವು ಬಾರಿ ಅಲ್ಲಿ ನಡೆಯುವ ವಿಚಾರಗಳ ಬಗ್ಗೆ ನಾವು ವೈಯಕ್ತಿಕವಾಗಿ ಮಾತನಾಡಿದ್ದೇನೆ. ಈ ಬಗ್ಗೆ ಅವರು ಕೂಡ ಸಲಹೆಗಳನ್ನು ಕೂಡ ನೀಡಿದ್ದಾರೆ. ಈ ಸಮಸ್ಯೆಯನ್ನು ಬಗೆಹರಿಸಲು ಭಾರತ ಮತ್ತು ರಷ್ಯಾ ಒಟ್ಟಾಗಿ ಚರ್ಚೆ ನಡೆಸಲಿದೆ. ಹಾಗೂ ಅವರು ಕೂಡ ಶಾಂತಿಯುತವಾಗಿ ಇದನ್ನು ಪರಿಹಾರಿಸುವ ಎಂದು ಹೇಳಿದ್ದಾರೆ.

ಜಗತ್ತಿನಲ್ಲಿ ನಡೆಯುತ್ತಿರುವ ಅನೇಕ ಪ್ರಕ್ಷುಬ್ಧತೆಯ ನಡುವೆ ಭಾರತ ಏಷ್ಯಾದಲ್ಲಿ ನಮ್ಮ ನಿಜವಾದ ಸ್ನೇಹಿತ. ಏಕೆಂದರೆ ದಿನದಿಂದ ದಿನಕ್ಕೆ ನಮ್ಮ ಮತ್ತು ಭಾರತ ನಡುವಿನ ಆತ್ಮೀಯ ಸಂಬಂಧ ಹೆಚ್ಚುತ್ತಿದೆ ಎಂದು ಹೇಳಿದರು. ನಮ್ಮ ಆತ್ಮೀಯ ಸ್ನೇಹಿತ, ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾಕ್ಕೆ ಭೇಟಿ ನೀಡಬೇಕು ಎಂಬುದು ನಮ್ಮ ಆಸೆ. ನಾವು ಪ್ರಸ್ತುತ ವಿಷಯಗಳ ಬಗ್ಗೆ ಚರ್ಚಿಸಲು ಸಿದ್ಧ. ಅನೇಕ ಸಮಸ್ಯೆಗಳು ಭಾರತ ಮತ್ತು ರಷ್ಯಾದ ಮಾತುಕತೆಯಿಂದ ಬಗೆಹರಿಸಲು ಸಾಧ್ಯ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮೋದಿಯನ್ನು ಬೆದರಿಸಲು ಅಥವಾ ಬಲವಂತಪಡಿಸಲು ಸಾಧ್ಯವಿಲ್ಲ: ರಷ್ಯಾ ಅಧ್ಯಕ್ಷ ಪುಟಿನ್

ಇನ್ನು ಪುಟಿನ್​​​ ಅವರು ಮುಂದಿನ ವರ್ಷ ನಡೆಯುವ ಲೋಕಸಭೆ ಚುನಾವಣೆಯಲ್ಲಿ ಮೋದಿ ಅವರು ವಿಜಯ ಸಾಧಿಸಲಿ ಎಂದು ಹಾರೈಸಿದ್ದಾರೆ. ನನ್ನ ಶುಭಾಶಯಗಳನ್ನು ಮೋದಿ ಅವರಿಗೆ ತಿಳಿಸಿ ಎಂದು ಜೈಶಂಕರ್​​​ ಅವರಿಗೆ ತಿಳಿಸಿದರು. ರಾಜಕೀಯ ಶಕ್ತಿಗಳ ಹೊಂದಾಣಿಕೆ ಏನೇ ಇರಲಿ, ನಮ್ಮ ಮತ್ತು ಭಾರತದ ನಡುವಿನ ಸಾಂಪ್ರದಾಯಿಕ ಸೌಹಾರ್ದ ಸಂಬಂಧಗಳು ಮುಂದುವರೆಯಲಿ ಎಂದು ಹೇಳಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಾರ್ ಮಂಚದ ಮೇಲೆ ಮಲಗಿ ಯುವಕನ ಸವಾರಿ; ಇದೆಂಥಾ ಶೋಕಿ ಎಂದ ನೆಟ್ಟಿಗರು
ಕಾರ್ ಮಂಚದ ಮೇಲೆ ಮಲಗಿ ಯುವಕನ ಸವಾರಿ; ಇದೆಂಥಾ ಶೋಕಿ ಎಂದ ನೆಟ್ಟಿಗರು
50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು
50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು
‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಹಾಡು ಬಿಡುಗಡೆ ಮಾಡಿದ ಆನೆ; ವಿಡಿಯೋ ಸೂಪರ್
‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಹಾಡು ಬಿಡುಗಡೆ ಮಾಡಿದ ಆನೆ; ವಿಡಿಯೋ ಸೂಪರ್
4 ಪಂದ್ಯಗಳಲ್ಲೂ ಮಾಲೀಕರಿಗೆ ನಿರಾಶೆ ಮೂಡಿಸಿದ ಪಂತ್
4 ಪಂದ್ಯಗಳಲ್ಲೂ ಮಾಲೀಕರಿಗೆ ನಿರಾಶೆ ಮೂಡಿಸಿದ ಪಂತ್
ಜಿಗಣಿಯಲ್ಲಿ ಮನೆಯೊಳಗೆ ನುಗ್ಗಿ ಬಿಂದಾಸಾಗಿ ಮಲಗಿದ ಚಿರತೆ; ಕಂಗಾಲಾದ ಮನೆಮಂದಿ
ಜಿಗಣಿಯಲ್ಲಿ ಮನೆಯೊಳಗೆ ನುಗ್ಗಿ ಬಿಂದಾಸಾಗಿ ಮಲಗಿದ ಚಿರತೆ; ಕಂಗಾಲಾದ ಮನೆಮಂದಿ
ಶಾಸಕರ ಹೆಸರು ಎಫ್​ಐಅರ್​ನಲ್ಲಿ ಬಂದ ನಂತರವೇ ವಿನಯ್ ಅಂತ್ಯ ಸಂಸ್ಕಾರ: ಪ್ರತಾಪ
ಶಾಸಕರ ಹೆಸರು ಎಫ್​ಐಅರ್​ನಲ್ಲಿ ಬಂದ ನಂತರವೇ ವಿನಯ್ ಅಂತ್ಯ ಸಂಸ್ಕಾರ: ಪ್ರತಾಪ
ಥೈಲ್ಯಾಂಡ್ ಪ್ರವಾಸ ಮುಗಿಸಿ, ಶ್ರೀಲಂಕಾಗೆ ತೆರಳಿದ ಪ್ರಧಾನಿ ಮೋದಿ
ಥೈಲ್ಯಾಂಡ್ ಪ್ರವಾಸ ಮುಗಿಸಿ, ಶ್ರೀಲಂಕಾಗೆ ತೆರಳಿದ ಪ್ರಧಾನಿ ಮೋದಿ
ಶಾಸಕರಾದ ಪೊನ್ನಣ್ಣ, ಮಂಥರ್​ಗೌಡ ಹೆಸರು ನಾಪತ್ತೆಯಾಗಿವೆ: ವಿನಯ್ ಸಹೋದರ
ಶಾಸಕರಾದ ಪೊನ್ನಣ್ಣ, ಮಂಥರ್​ಗೌಡ ಹೆಸರು ನಾಪತ್ತೆಯಾಗಿವೆ: ವಿನಯ್ ಸಹೋದರ
ಬ್ಯಾಂಕಾಕ್‌ನ ಬಿಮ್‌ಸ್ಟೆಕ್ ಶೃಂಗಸಭೆಯಲ್ಲಿ ಮೋದಿ- ನೇಪಾಳದ ಪ್ರಧಾನಿ ಭೇಟಿ
ಬ್ಯಾಂಕಾಕ್‌ನ ಬಿಮ್‌ಸ್ಟೆಕ್ ಶೃಂಗಸಭೆಯಲ್ಲಿ ಮೋದಿ- ನೇಪಾಳದ ಪ್ರಧಾನಿ ಭೇಟಿ
ವಿನಯ್​ರೊಂದಿಗೆ ನಾನು ಒಮ್ಮೆಯೂ ಮಾತಾಡಿಲ್ಲ, ಕಿರುಕುಳ ಎಲ್ಲಿಂದ ಬಂತು?: ಶಾಸಕ
ವಿನಯ್​ರೊಂದಿಗೆ ನಾನು ಒಮ್ಮೆಯೂ ಮಾತಾಡಿಲ್ಲ, ಕಿರುಕುಳ ಎಲ್ಲಿಂದ ಬಂತು?: ಶಾಸಕ