ನವದೆಹಲಿ: ಉತ್ತರ ಪ್ರದೇಶದ (Uttar Pradesh)ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ಹಿರಿಯ ನಾಯಕ ಮುಲಾಯಂ ಸಿಂಗ್ ಯಾದವ್ (Mulayam Singh Yadav)ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಪ್ರಧಾನಿ ನರೇಂದ್ರ ಮೋದಿ ಅವರು ಕರೆ ಮಾಡಿ ಅವರ ಆರೋಗ್ಯ ವಿಚಾರಿಸಿದ್ದಾರೆ.
ಮುಲಾಯಂ ಸಿಂಗ್ ಯಾದವ್ ಅವರ ಪುತ್ರ ಅಖಿಲೇಶ್ಗೆ ಇಂದು(ಅಕ್ಟೋಬರ್ 02) ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.
ಇದನ್ನೂ ಓದಿ: ಉತ್ತರ ಪ್ರದೇಶದ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ಐಸಿಯುಗೆ ದಾಖಲು
ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮುಲಾಯಂ ಸಿಂಗ್ ಯಾದವ್ ಅವರನ್ನು ಭಾನುವಾರ ಸಂಜೆ ಹರ್ಯಾಣದ ಗುರುಗ್ರಾಮ್‌ನ ಮೇದಾಂತ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
PM Narendra Modi spoke to Samajwadi Party chief Akhilesh Yadav and enquired about Mulayam Singh Yadav’s health. He also said whatever possible assistance is required, he is there to help: Sources
(file pics) pic.twitter.com/4E9qmIMOFH
— ANI (@ANI) October 2, 2022
ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ. ಅವರು ಪ್ರಸ್ತುತ ಇಂಟರ್ನಲ್ ಮೆಡಿಸಿನ್ ತಜ್ಞ ಡಾ ಸುಶೀಲಾ ಕಟಾರಿಯಾ ಅವರ ಮೇಲ್ವಿಚಾರಣೆಯಲ್ಲಿದ್ದಾರೆ.
ಮುಲಾಯಂ ಸಿಂಗ್ ಯಾದವ್ ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಜೈ ಹಿಂದ್ ಟ್ವೀಟ್ ಮೂಲಕ ಪ್ರಾರ್ಥಿಸಿದ್ದಾರೆ.