Rahul Gandhi Defamation Case: ನ್ಯಾಯಾಲಯದಲ್ಲಿ ರಾಹುಲ್ ಗಾಂಧಿಗೆ ಹಿನ್ನಡೆ, 2 ವರ್ಷಗಳ ಶಿಕ್ಷೆ ಕಾಯಂ

ಮೋದಿ ಉಪನಾಮಕ್ಕೆ ಸಂಬಂಧಿಸಿದ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧದ ಶಿಕ್ಷೆಯ ವಿರುದ್ಧ ಗುಜರಾತ್ ಹೈಕೋರ್ಟ್​ ಇಂದು ತೀರ್ಪು ಪ್ರಕಟಿಸಿದೆ.

Rahul Gandhi Defamation Case: ನ್ಯಾಯಾಲಯದಲ್ಲಿ ರಾಹುಲ್ ಗಾಂಧಿಗೆ ಹಿನ್ನಡೆ, 2 ವರ್ಷಗಳ ಶಿಕ್ಷೆ ಕಾಯಂ
ರಾಹುಲ್ ಗಾಂಧಿ
Follow us
| Updated By: ಡಾ. ಭಾಸ್ಕರ ಹೆಗಡೆ

Updated on:Jul 07, 2023 | 11:40 AM

ಮೋದಿ ಉಪನಾಮಕ್ಕೆ ಸಂಬಂಧಿಸಿದ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಗೆ ಸೆಶನ್ಸ್​ ನ್ಯಾಯಾಲಯ ನೀಡಿದ ಎರಡು ವರ್ಷದ ಶಿಕ್ಷೆಯ ಪ್ರಮಾಣವನ್ನು ಕಡಿಮೆ ಮಾಡಲು ಸಾಧ್ಯವಿಲ್ಲ ಎಂದು ಹೇಳುತ್ತ, ಕೆಳ ನ್ಯಾಯಾಲಯ ನೀಡಿದ ತೀರ್ಪನ್ನು ಗುಜರಾತ್ ಹೈಕೋರ್ಟ್​ ಇಂದು ಎತ್ತಿ ಹಿಡಿದಿದೆ. ಈ ಬೆಳಗಣಿಗೆ ​ ಗಾಂಧಿಗೆ ಹಿನ್ನಡೆಯಾದಂತೆ ಆಗಿದೆ. ಈ ಹಿಂದೆ ಮಾರ್ಚ್​ 23ರಂದು ಸೂರತ್ ನ್ಯಾಯಾಲಯವು ರಾಹುಲ್ ಗಾಂಧಿಯನ್ನು ದೋಷಿ ಎಂದು ಘೋಷಿಸಿ ಎರಡು ವರ್ಷಗಳ ಶಿಕ್ಷೆ ವಿಧಿಸಿತ್ತು. ಇದರ ವಿರುದ್ಧ ರಾಹುಲ್ ಗಾಂಧಿ ಹೈಕೋರ್ಟ್​ ಮೆಟ್ಟಿಲೇರಿದ್ದರು.

ಗುಜರಾತ್ ನ್ಯಾಯಾಲಯ ರಾಹುಲ್ ಗಾಂಧಿಯವರ ಅರ್ಜಿಯನ್ನು ವಜಾಗೊಳಿಸಿದೆ. ಈ ನಿರ್ಧಾರದ ಹಿನ್ನೆಲೆಯಲ್ಲಿ ಎಲ್ಲಾ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರಿಗೆ ಪಕ್ಷದ ಕೇಂದ್ರ ಕಚೇರಿಗೆ ಆಗಮಿಸುವಂತೆ ಸೂಚನೆ ನೀಡಲಾಗಿದೆ. ಗುಜರಾತ್ ಹೈಕೋರ್ಟ್‌ನ ನ್ಯಾಯಮೂರ್ತಿ ಹೇಮಂತ್ ಪ್ರಚಕ್ ಅವರ ಏಕ ಪೀಠ ಈ ಕುರಿತು ತೀರ್ಪು ನೀಡಿದೆ. ಮಾರ್ಚ್ 23 ರಂದು ರಾಹುಲ್ ಗಾಂಧಿಗೆ ಸೂರತ್ ನ್ಯಾಯಾಲಯವು ಎರಡು ವರ್ಷಗಳ ಶಿಕ್ಷೆ ವಿಧಿಸಿತ್ತು. ಇದೀಗ ಹೈಕೋರ್ಟ್​ ಸೂರತ್ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿದೆ.

ಲೋಕಸಭೆ ಸದಸ್ಯತ್ವದಿಂದ ಅನರ್ಹ

ಈ ಹಿಂದೆ ಶಿಕ್ಷೆ ಪ್ರಕಟವಾದ ಬಳಿಕ ಅವರನ್ನು ಲೋಕಸಭೆಯ ಸದಸ್ಯತ್ವದಿಂದ ಅನರ್ಹಗೊಳಿಸಲಾಯಿತು. ಆದರೆ ಈ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಜಾಮೀನು ಸಿಕ್ಕಿದೆ. ಅವರು ಏಪ್ರಿಲ್ 3 ಕ್ಕೆ ತಮ್ಮ ಶಿಕ್ಷೆಯ ಆದೇಶವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು.

2019ರ ಲೋಕಸಭಾ ಚುನಾವಣೆಯ ಪ್ರಚಾರದ ಸಮಯದಲ್ಲಿ ತಮ್ಮ ಭಾಷಣದಲ್ಲಿ ಎಲ್ಲಾ ಕಳ್ಳರಿಗೂ ಮೋದಿ ಉಪನಾಮವಿದೆ ಎಂದು ಹೇಳಿದ್ದರು. ಈ ಕುರಿತು ಬಿಜೆಪಿ ನಾಯಕ ಪೂರ್ಣೇಶ್ ಮೋದಿ ಸೂರತ್ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಮತ್ತಷ್ಟು ಓದಿ: Defamation case: ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿಗೆ ಮಧ್ಯಂತರ ರಕ್ಷಣೆ ನೀಡಲು ಗುಜರಾತ್ ಹೈಕೋರ್ಟ್ ನಕಾರ

ಕೋಲಾರದಲ್ಲಿ ನಡೆದ ಕಾರ್ಯಕ್ರಮ

2019ರ ಏಪ್ರಿಲ್ 13ರಂದು ಕೋಲಾರದಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ “ರಾಹುಲ್ ಗಾಂಧಿ, ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಎಲ್ಲಾ ಉಪನಾಮಗಳು ಒಂದೇ ರೀತಿ ಇದೆ, ಎಲ್ಲಾ ಕಳ್ಳರ ಉಪನಾಮ ಮೋದಿ ಏಕೆ?”ಎಂದು ಹೇಳಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:12 am, Fri, 7 July 23

ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ