ಮೋದಿ ಉಪನಾಮ ಹೇಳಿಕೆ: ಪಾಟ್ನಾ ಹೈಕೋರ್ಟ್​ನಿಂದ ರಾಹುಲ್​ ಗಾಂಧಿಗೆ ರಿಲೀಫ್

ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ಮಾನನಷ್ಟ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿಗೆ ಪಾಟ್ನಾ ಹೈಕೋರ್ಟ್​ ರಿಲೀಫ್ ನೀಡಿದೆ. 

ಮೋದಿ ಉಪನಾಮ ಹೇಳಿಕೆ: ಪಾಟ್ನಾ ಹೈಕೋರ್ಟ್​ನಿಂದ ರಾಹುಲ್​ ಗಾಂಧಿಗೆ ರಿಲೀಫ್
ರಾಹುಲ್ ಗಾಂಧಿImage Credit source: Hindustan Times
Follow us
ನಯನಾ ರಾಜೀವ್
|

Updated on:Apr 24, 2023 | 3:22 PM

ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ಮಾನನಷ್ಟ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ(Rahul Gandhi) ಗೆ ಪಾಟ್ನಾ ಹೈಕೋರ್ಟ್​ ರಿಲೀಫ್ ನೀಡಿದೆ. ಬಿಜೆಪಿಯ ರಾಜ್ಯಸಭಾ ಸಂಸದ ಹಾಗೂ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ರಾಹುಲ್‌ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ರಿಲೀಫ್ ಸಿಕ್ಕಿದೆ. ಆದರೆ ಆರೋಪ ಒಂದೇ ಆದರೂ ಗುಜರಾತ್​ನ ಸೂರತ್ ಕೋರ್ಟ್​ನಲ್ಲಿರುವ ಪ್ರಕರಣಕ್ಕೂ ಇದಕ್ಕೂ ಸಂಬಂಧವಿಲ್ಲ. ಇನ್ನೊಂದು ಪ್ರಕರಣದಲ್ಲಿ ವಯನಾಡ್‌ ನ ಲೋಕಸಭಾ ಸಂಸದರಾದ ರಾಹುಲ್ ಗಾಂಧಿ ಅವರನ್ನು ಸೂರತ್‌ ನ ಕೆಳ ನ್ಯಾಯಾಲಯವು ಮಾರ್ಚ್ 23 ರಂದು ಸೆಕ್ಷನ್ 499 ಮತ್ತು 500 (ಮಾನನಷ್ಟ) ಅಡಿಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನಂತರ ಅನರ್ಹಗೊಳಿಸಲಾಗಿತ್ತು.

2019ರ ಲೋಕಸಭೆ ಚುನಾವಣೆ ವೇಳೆ ಭಾಷಣ ಮಾಡಿದ್ದ ರಾಹುಲ್ ಗಾಂಧಿ ಅವರು, ಮೋದಿ ಎಂಬ ಹೆಸರು ಹೊಂದಿರುವವರೆಲ್ಲರೂ ಕಳ್ಳರು ಎಂಬ ಹೇಳಿಕೆ ನೀಡಿದ್ದರು. ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಈ ಹೆಸರು ಹೊಂದಿರುವವರನ್ನು ಉಲ್ಲೇಖಿಸಿದ್ದ ಅವರು, ಎಲ್ಲ ಮೋದಿಗಳೂ ಕಳ್ಳರು. ಮೋದಿ ಉಪನಾಮ ಹೊಂದಿರುವವರು ಕಳ್ಳರಾಗಲು ಹೇಗೆ ಸಾಧ್ಯ ಎಂದು ವ್ಯಂಗ್ಯವಾಡಿದ್ದರು.

ಮತ್ತಷ್ಟು ಓದಿ: ಮಾನನಷ್ಟ ಪ್ರಕರಣ: ಶಿಕ್ಷೆಗೆ ತಡೆ ಕೋರಿ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ನ್ಯಾಯಾಲಯ

ಎರಡೂ ಕಡೆಯ ವಾದಗಳನ್ನೂ ಆಲಿಸಿದ್ದ ನ್ಯಾಯಾಲಯ ರಾಹುಲ್ ಗಾಂಧಿಯವರನ್ನು ದೋಷಿ ಎಂದು ತೀರ್ಪು ನೀಡಿತ್ತು. ಅಲ್ಲದೆ, 2 ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂಪಾಯಿ ದಂಡವನ್ನು ವಿಧಿಸಿತ್ತು. ಜೈಲು ಶಿಕ್ಷೆ ವಿಧಿಸಿ ನಂತರ ಜಾಮೀನು ಮಂಜೂರು ಮಾಡಿ, 30 ದಿನಗಳವರೆಗೆ ಶಿಕ್ಷೆ ಅಮಾನತುಗೊಳಿಸಿ ತೀರ್ಪು ನೀಡಿತ್ತು.

ರಾಹುಲ್​  ಗಾಂಧಿ ಹೇಳಿಕೆಯಿಂದ ಸಿಟ್ಟಿಗೆದ್ದಿದ್ದ ಬಿಜೆಪಿ ಶಾಸಕ ಪೂರ್ಣೇಶ್​ ಮೋದಿ, ದೂರು ದಾಖಲಿಸಿದ್ದರು. 2019ರ ಏಪ್ರಿಲ್​​​ ತಿಂಗಳಲ್ಲಿ ರಾಹುಲ್ ಗಾಂಧಿ ವಿರುದ್ಧ ಐಪಿಸಿ ಸೆಕ್ಷನ್​​ 499 ಮತ್ತು 500ರ ಅಡಿ ಮಾನಹಾನಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ಸಂಬಂಧ ಗುಜರಾತ್​ನ ಸೂರತ್ ನ್ಯಾಯಾಲಯವು ಮಾರ್ಚ್ 23 ರಂದು ಮಹತ್ವದ ತೀರ್ಪು ನೀಡಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:31 pm, Mon, 24 April 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ