ಕೊರೊನಾ ನಿರ್ಲಕ್ಷ್ಯ ಬೇಡ, ವೈರಸ್​ ಎದುರಿಸಲು ಸರ್ವಸನ್ನದ್ಧವಾಗಿರಿ: ಪ್ರಧಾನಿ ಮೋದಿ ಕರೆ

ದೇಶದಲ್ಲಿ ಕೊರೊನಾ ಕೇಸ್​ಗಳಲ್ಲಿ ದಿಢೀರ್ ಏರಿಕೆ ಕಂಡ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ನಡೆಸಿದ ವರ್ಚುವಲ್ ಸಭೆಯಲ್ಲಿ ಪ್ರಧಾನಿ ಮೋದಿ ಮಾತು..

ಕೊರೊನಾ ನಿರ್ಲಕ್ಷ್ಯ ಬೇಡ, ವೈರಸ್​ ಎದುರಿಸಲು ಸರ್ವಸನ್ನದ್ಧವಾಗಿರಿ: ಪ್ರಧಾನಿ ಮೋದಿ ಕರೆ
ಕೊರೊನಾ ಕೇಸ್​ಗಳಲ್ಲಿ ದಿಢೀರ್ ಏರಿಕೆ.. ಎಲ್ಲ ರಾಜ್ಯಗಳ CMಗಳ ಜೊತೆ ಪ್ರಧಾನಿ ಮೋದಿ ವರ್ಚುವಲ್ ಸಭೆ
Follow us
ಸಾಧು ಶ್ರೀನಾಥ್​
|

Updated on:Nov 24, 2020 | 3:59 PM

ಲಸಿಕೆ ಅಭಿವೃದ್ಧಿಪಡಿಸುತ್ತಿರುವ ಎಲ್ಲ ಸಂಸ್ಥೆ, ದೇಶಗಳ ಜೊತೆ ಕೇಂದ್ರ ಸರ್ಕಾರ ಸಂಪರ್ಕದಲ್ಲಿದೆ. ಭಾರತದಲ್ಲೇ ಕೊರೊನಾ ಲಸಿಕೆ ತಯಾರಿಸುವುದರತ್ತಲೂ ಸಂಪೂರ್ಣ ಗಮನಹರಿಸಲಾಗಿದೆ ಎಂದು ಪ್ರಧಾನಿ ಮೋದಿ ಖಚಿತಪಡಿಸಿದರು.

ದೇಶದಲ್ಲಿ ಕೊರೊನಾ ಕೇಸ್ಗಳಲ್ಲಿ ದಿಢೀರ್ ಏರಿಕೆ ಕಂಡ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳ ಸಿಎಂಗಳ ವರ್ಚುವಲ್ ಸಭೆಯ ನಂತರ ಅವರು ಮಾತನಾಡಿದರು.

ಕೊರೊನಾ ಕುರಿತು ಎಂದಿಗೂ ನಿರ್ಲಕ್ಷ್ಯ ಬೇಡ. ತ್ವರಿತವಾಗಿ ಲಸಿಕೆ ಅಭಿವೃದ್ಧಿಪಡಿಸುವುದಷ್ಟೇ ಅಲ್ಲ. ಲಸಿಕೆಯಿಂದ ಅಡ್ಡ ಪರಿಣಾಮಗಳು ಬೀರದಂತೆ ಖಚಿತವಾದ ನಂತರವೇ ವಿತರಣೆ ಮಾಡಲಾಗುವುದು. ಭಾರತ ಪ್ಯಾಂಡೆಮಿಕ್ನ್ನು ಎದುರಿಸಲು ಸಮರ್ಥವಾಗಿ ಎದುರಿಸುತ್ತಿದೆ. ಲಸಿಕೆ ಸಂಗ್ರಹಾಗಾರಗಳನ್ನು ರಾಜ್ಯ ಸರ್ಕಾರಗಳು ಅಭಿವೃದ್ದಿಪಡಿಸಬೇಕು. ಲಸಿಕೆ ಬಂದ ತಕ್ಷಣ ವಿತರಿಸಲು ಸರ್ವ ಸನ್ನದ್ಧರಾಗಿರುವಂತೆ ಪ್ರಧಾನಿ ಮೋದಿ ಎಲ್ಲ ರಾಜ್ಯ ಸರ್ಕಾರಗಳಿಗೆ ಸೂಚಿಸಿದರು.

ಬೆಳಿಗ್ಗೆ ನಡೆದ ವರ್ಚುವಲ್ ಸಭೆಯಲ್ಲಿ ನಡೆದಿದ್ದು ಏನು? ಕೊರೊನಾ ಅಂಕಿಸಂಖ್ಯೆಗಳನ್ನು ನೀಡುವ ಬದಲು ವೈರಸ್ ನಿಯಂತ್ರಿಸಲು ಕೈಗೊಂಡ ಕ್ರಮಗಳನ್ನು ವಿವರಿಸಲು ಹರ್ಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ಗೆ ಪ್ರಧಾನಿ ಮೋದಿ ಖಡಕ್ ಆಗಿಯೇ ಹೇಳಿದ್ದಾರೆ. ಕೊರೊನಾ ಕೇಸ್ ಧಿಡೀರ್ ಏರಿಕೆ ಕಂಡ ಹಿನ್ನೆಲೆಯಲ್ಲಿ 8 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮೋದಿ ವರ್ಚುವಲ್ ಸಭೆ ನಡೆಸಿದರು. ಈ ಸಭೆಯ ವೇಳೆಯಲ್ಲಿ ಖಟ್ಟರ್ ಅವರಿಗೆ ಪ್ರಧಾನಿ ಕ್ಲಾಸ್ ತೆಗೆದುಕೊಂಡಿದ್ದಾರೆ.

ಇದಕ್ಕೂ ಮೊದಲು ಕೊರೊನಾ ವೆಚ್ಚಳ ಕಂಡ ರಾಜ್ಯಗಳ ಸಿಎಂಗಳ ಸಭೆಯಲ್ಲಿ ಮಹಾರಾಷ್ಟ್ರ, ಹರ್ಯಾಣ, ಗೋವಾ, ದೆಹಲಿ, ಗುಜರಾತ್, ಪಶ್ಚಿಮ ಬಂಗಾಳ, ರಾಜಸ್ಥಾನ, ಛತ್ತೀಸ್ಗಡ ಮುಖ್ಯಮಂತ್ರಿಗಳು ಭಾಗವಹಿಸಿದ್ದರು.

ಕೊರೊನಾ ಕೇಸ್ಗಳಲ್ಲಿ ಇಳಿಕೆ ಕಂಡಿದ್ದರೂ ದೀಪಾವಳಿಯ ನಂತರ ಮತ್ತೊಮ್ಮೆ ಹೆಚ್ಚು ಕೇಸ್ಗಳು ಪತ್ತೆಯಾಗುತ್ತಿವೆ. 91,77,841 ಪ್ರಕರಣಗಳಲ್ಲಿ 1,34,218 ಜನರು ಸಾವಿಗೀಡಾಗಿದ್ದಾರೆ. ಒಂದೇ ದಿನ 480 ಕೊರೊನಾ ಸಾವಿನ ನಂತರ ಸುಪ್ರೀಂ ಕೋರ್ಟ್ ಸಹ ಗಂಭೀರವಾಗಿ ಪರಿಗಣಿಸಿದೆ. ಎರಡು ದಿನಗಳಲ್ಲಿ ಎಲ್ಲ ರಾಜ್ಯಗಳು ಕೊರೊನಾ ನಿಯಂತ್ರಿಸಲು ಕೈಗೊಂಡ ಕ್ರಮದ ವರದಿ ನೀಡುವಂತೆ ರಾಜ್ಯ ಸರ್ಕಾರಗಳಿಗೆ ಸೂಚಿಸಿತ್ತು.

Published On - 3:48 pm, Tue, 24 November 20

‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ