ಮೊಯಿತ್ರಾ ವಿರುದ್ಧ ಸ್ಪರ್ಧಿಸುತ್ತಿರುವ ಬಿಜೆಪಿ ಅಭ್ಯರ್ಥಿ ರಾಜಮಾತಾ ಅಮೃತಾ ರಾಯ್ ಜತೆ ಮೋದಿ ಮಾತಕತೆ

|

Updated on: Mar 27, 2024 | 12:18 PM

ಪಶ್ಚಿಮ ಬಂಗಾಳದ ಕೃಷ್ಣಾನಗರ ಲೋಕಸಭಾ ಕ್ಷೇತ್ರದಿಂದ ತೃಣಮೂಲ ಕಾಂಗ್ರೆಸ್​​​​​ ಅಭ್ಯರ್ಥಿ ಮಹುವಾ ಮೊಯಿತ್ರಾ ವಿರುದ್ಧ ಬಿಜೆಪಿಯಿಂದ ಸ್ಪರ್ಧಿಸುತ್ತಿರುವ ಅಭ್ಯರ್ಥಿ ರಾಜಮಾತಾ ಅಮೃತಾ ರಾಯ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ದೂರವಾಣಿ ಮೂಲಕ ಮಾತನಾಡಿದ್ದಾರೆ.

ಮೊಯಿತ್ರಾ ವಿರುದ್ಧ ಸ್ಪರ್ಧಿಸುತ್ತಿರುವ ಬಿಜೆಪಿ ಅಭ್ಯರ್ಥಿ ರಾಜಮಾತಾ ಅಮೃತಾ ರಾಯ್ ಜತೆ ಮೋದಿ ಮಾತಕತೆ
Follow us on

ದೆಹಲಿ, ಮಾ.27: ಪ್ರಧಾನಿ ನರೇಂದ್ರ ಮೋದಿ ( Narendra Modi)  ಅವರು ಪಶ್ಚಿಮ ಬಂಗಾಳದ ಕೃಷ್ಣಾನಗರ ಲೋಕಸಭಾ ಕ್ಷೇತ್ರದಿಂದ ತೃಣಮೂಲ ಕಾಂಗ್ರೆಸ್​​​​​ ಅಭ್ಯರ್ಥಿ ಮಹುವಾ ಮೊಯಿತ್ರಾ ವಿರುದ್ಧ ಬಿಜೆಪಿಯಿಂದ ಸ್ಪರ್ಧಿಸುತ್ತಿರುವ ಅಭ್ಯರ್ಥಿ ರಾಜಮಾತಾ ಅಮೃತಾ ರಾಯ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ. ಬಡವರಿಂದ ಲೂಟಿ ಮಾಡಿದ ಹಣ ಮತ್ತು ಆಸ್ತಿಯನ್ನು ಇಡಿ ವಶಪಡಿಸಿಕೊಂಡು ಮತ್ತೆ ಅವರಿಗೆ ನೀಡುತ್ತಿದ್ದಾರೆ. ಒಂದು ಕಡೆ ದೇಶದಲ್ಲಿ ಭ್ರಷ್ಟಾಚಾರವನ್ನು ಬೇರು ಸಮೇತ ಕಿತ್ತೆಸೆಯಲು ಬಿಜೆಪಿ ಬದ್ಧವಾಗಿದೆ, ಮತ್ತೊಂದೆಡೆ ಎಲ್ಲ ಭ್ರಷ್ಟರನ್ನು ರಕ್ಷಿಸಲು ಒಗ್ಗೂಡಿಸುತ್ತಿದ್ದಾರೆ ಎಂದು ಇಂಡಿಯಾ ಒಕ್ಕೂಟಕ್ಕೆ ಪರೋಕ್ಷವಾಗಿ ತಿರುಗೇಟು ನೀಡಿದರು.

ಪಶ್ಚಿಮ ಬಂಗಾಳದ ಜನರು ‘ಪರಿವರ್ತನ್’ (ಬದಲಾವಣೆ) ಗಾಗಿ ಮತ ಚಲಾಯಿಸುತ್ತಾರೆ ಎಂಬ ವಿಶ್ವಾಸ ಇದೆ ಎಂದು ಹೇಳಿದರು. ರಾಜ್ಯದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ನಾಯಕರ ಭ್ರಷ್ಟಾಚಾರವನ್ನು ಜನರ ಮುಂದೆ ಇಡುವುದೇ ಬಿಜೆಪಿಯ ಪ್ರಮುಖ ಉದ್ದೇಶವಾಗಿದೆ. ಈಗಾಗಲೇ ಮಾಜಿ ಸಚಿವ ಪಾರ್ಥ ಚಟರ್ಜಿ ಸೇರಿದಂತೆ ಕೆಲವರ ಬಂಧನ ಮತ್ತು ದೊಡ್ಡ ಮೊತ್ತದ ಹಣ ಹಾಗೂ ಆಸ್ತಿಗಳನ್ನು ಮುಟ್ಟುಗೋಲು ಹಾಕಿರುವುದು ಜನರ ಮುಂದೆ ಇದೆ ಎಂದು ಹೇಳಿದರು.

ಇದನ್ನೂ ಓದಿ: ಛತ್ತೀಸ್‌ಗಢದಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ, 6 ನಕ್ಸಲರ ಹತ್ಯೆ

ಬಿಜೆಪಿಯು 2019 ರಲ್ಲಿ ರಾಜ್ಯದ 42 ಲೋಕಸಭಾ ಸ್ಥಾನಗಳಲ್ಲಿ 18 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಇದರಿಂದ ಅಲ್ಲಿನ ಅಭಿವೃದ್ಧಿಯಾಗಿದೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಈ ಸಂಖ್ಯಾ ಹೆಚ್ಚಾಗಲಿದೆ ಎಂದು ಹೇಳಿದರು.