ದೇಶವನ್ನುದ್ದೇಶಿಸಿ ಇಂದು ಸಂಜೆ ಮಾತನಾಡಲಿದ್ದಾರೆ ಪ್ರಧಾನಿ ಮೋದಿ
ದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇಂದು ಸಂಜೆ 6 ಗಂಟೆಗೆ ಮೋದಿ ಭಾಷಣ ಮಾಡಲಿದ್ದು ಈ ಬಗ್ಗೆ ತಮ್ಮ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಈ ಭಾಷಣ ಕೊರೊನಾ ಹಿನ್ನೆಲೆಯಲ್ಲಿ ಕುತೂಹಲ ಮೂಡಿಸಿದೆ. ದೇಶದಲ್ಲಿ ಕೊರೊನಾ ನಿರ್ವಹಣೆ, ಇಳಿಮುಖ ಕಾಣುತ್ತಿರುವ ಸೋಂಕಿನ ಸಂಖ್ಯೆ, ಕೊರೊನಾ ಲಸಿಕೆ ಪ್ರಯೋಗಗಳಲ್ಲಿನ ಪ್ರಗತಿ, ಲಸಿಕೆ ಹಂಚಿಕೆಗೆ ಮಾಡಿಕೊಂಡಿರುವ ಪೂರ್ವ ತಯಾರಿ.. ಈ ಬಗ್ಗೆ ಪ್ರಧಾನಿ ಮಾಹಿತಿ ನೀಡುವ ಸಾಧ್ಯತೆಯಿದೆ. ದೇಶದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯ ಬಗ್ಗೆಯೂ ಮಾತನಾಡುವ […]
ದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇಂದು ಸಂಜೆ 6 ಗಂಟೆಗೆ ಮೋದಿ ಭಾಷಣ ಮಾಡಲಿದ್ದು ಈ ಬಗ್ಗೆ ತಮ್ಮ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಈ ಭಾಷಣ ಕೊರೊನಾ ಹಿನ್ನೆಲೆಯಲ್ಲಿ ಕುತೂಹಲ ಮೂಡಿಸಿದೆ.
ದೇಶದಲ್ಲಿ ಕೊರೊನಾ ನಿರ್ವಹಣೆ, ಇಳಿಮುಖ ಕಾಣುತ್ತಿರುವ ಸೋಂಕಿನ ಸಂಖ್ಯೆ, ಕೊರೊನಾ ಲಸಿಕೆ ಪ್ರಯೋಗಗಳಲ್ಲಿನ ಪ್ರಗತಿ, ಲಸಿಕೆ ಹಂಚಿಕೆಗೆ ಮಾಡಿಕೊಂಡಿರುವ ಪೂರ್ವ ತಯಾರಿ.. ಈ ಬಗ್ಗೆ ಪ್ರಧಾನಿ ಮಾಹಿತಿ ನೀಡುವ ಸಾಧ್ಯತೆಯಿದೆ. ದೇಶದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯ ಬಗ್ಗೆಯೂ ಮಾತನಾಡುವ ಸಾಧ್ಯತೆ ಇದೆ.
ಇದಲ್ಲದೆ, ದೆಹಲಿಯಲ್ಲಿ ಮತ್ತೊಂದು ಲಾಕ್ಡೌನ್ ಜಾರಿಗೆ ತರಲಾಗುವುದು ಎಂಬ ವದಂತಿ ಹರಿದಾಡುತ್ತಿದೆ. ಆದರೆ, ಈಗಾಗಲೇ ಪ್ರಧಾನಿ ಮೋದಿ ಲಾಕ್ಡೌನ್ ತೆರೆಯುವ ಕುರಿತು ಮತ್ತು ಆರ್ಥಿಕ ಚಟುವಟಿಕೆ ಪುನರಾರಂಭಿಸುವ ವಿಚಾರದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಜೊತೆಗೆ, ಕಳೆದ ಮೂರು ದಿನಗಳಿಂದ ದೇಶದಲ್ಲಿ ಹೊಸದಾಗಿ ಪತ್ತೆಯಾಗುತ್ತಿರುವ ಸೋಂಕಿನ ಪ್ರಕರಣಗಳು ಹಾಗೂ ಕೊರೊನಾದಿಂದ ಮೃತಪಟ್ಟವರ ಸಂಖ್ಯೆಯಲ್ಲಿ ಇಳಿಮುಖವಾಗಿದೆ.
ಆದರೆ, ಮುಂಬರುವ ದಿನಗಳಲ್ಲಿ ಬರಲಿರುವ ಹಲವಾರು ಹಬ್ಬಹರಿದಿನಗಳ ವೇಳೆ ಕೊರೊನಾ ಸೋಂಕು ಮತ್ತೊಮ್ಮೆ ಉಲ್ಬಣವಾಗಬಹುದು ಎಂಬ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಮಾತನಾಡುವ ಸಾಧ್ಯತೆಯಿದೆ. ಹಬ್ಬದ ಆಚರಣೆ ವೇಳೆ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮುಂತಾದ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಮನವಿ ಮಾಡಬಹುದು ಎಂದು ಹೇಳಲಾಗಿದೆ.
आज शाम 6 बजे राष्ट्र के नाम संदेश दूंगा। आप जरूर जुड़ें।
Will be sharing a message with my fellow citizens at 6 PM this evening.
— Narendra Modi (@narendramodi) October 20, 2020
Published On - 1:20 pm, Tue, 20 October 20