ಈಶಾನ್ಯ ರಾಜ್ಯಗಳಿಗೆ ಮೋದಿ ಭೇಟಿ, ವಂದೇ ಮಾತರಂ ಹಾಡಿಗೆ ಮನಸೋತ ಪ್ರಧಾನಿ

ಪ್ರಧಾನಿ ಮೋದಿ ಮೇಘಾಲಯ ಮತ್ತು ತ್ರಿಪುರಾಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಈಶಾನ್ಯದಲ್ಲಿ ಆಕ್ಟೇವ್ ಬ್ಯಾಂಡ್‌ ವಂದೇ ಮಾತರಂ ' ಹಾಡನ್ನು ಸುಂದರವಾಗಿ ಹಾಡುವ ಮೂಲಕ ಮೋದಿ ಸ್ವಾಗತಿಸಿದ್ದಾರೆ, ಇದೀಗ ಈ ವಿಡಿಯೋವನ್ನು ಪ್ರಧಾನಿ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಹಂಚಿಕೊಂಡಿದ್ದಾರೆ.

ಈಶಾನ್ಯ ರಾಜ್ಯಗಳಿಗೆ ಮೋದಿ ಭೇಟಿ, ವಂದೇ ಮಾತರಂ ಹಾಡಿಗೆ ಮನಸೋತ ಪ್ರಧಾನಿ
ವಂದೇ ಮಾತರಂ ' ಹಾಡನ್ನು ಸುಂದರವಾಗಿ ಹಾಡಿದ ಈಶಾನ್ಯ ಆಕ್ಟೇವ್ ಬ್ಯಾಂಡ್‌Image Credit source: HT
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on:Dec 19, 2022 | 11:20 AM

ಪ್ರಧಾನಿ ಮೋದಿ (PM MODI) ಈಶಾನ್ಯ ರಾಜ್ಯಗಳಾದ ಮೇಘಾಲಯ (Meghalaya) ಮತ್ತು ತ್ರಿಪುರಾಕ್ಕೆ (Tripura) ಭೇಟಿ ನೀಡಿದ್ದಾರೆ. ಈ ರಾಜ್ಯಗಳಲ್ಲಿ ಮುಂದಿನ ವರ್ಷ ಚುನಾವಣೆ ನಡೆಯಲಿದ್ದು. 6,800 ಕೋಟಿ ಮೌಲ್ಯದ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಪ್ರಧಾನಿ ಮೋದಿ ಅಲ್ಲಿಯ ಸಂಸ್ಕೃತಿಗೆ, ಕರಕುಶಲ ಕಲೆಗೆ ತಲೆಬಾಗಿದ್ದು, ಈಶಾನ್ಯ ರಾಜ್ಯಗಳ ಅಭಿವೃದ್ಧಿಗೆ ಮತ್ತು ಸಂಬಂಧಗಳಿಗೆ ಶ್ರಮಿಸುವಂತೆ ಕೆಲಸ ಮಾಡಲು ತಿಳಿಸಿದ್ದಾರೆ. ಅವರು ಈಶಾನ್ಯ ರಾಜ್ಯಗಳ ಸಾಂಪ್ರದಾಯಿಕ ಉಡುಪನ್ನು ಧರಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈಶಾನ್ಯ ಬ್ಯಾಂಡ್ ಆಕ್ಟೇವ್ ಗುಂಪುಗಳು ‘ವಂದೇ ಮಾತರಂ’ ಹಾಡನ್ನು ಹಾಡುವ ಮೂಲಕ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದರು. ಈ ಪ್ರದರ್ಶನವನ್ನು ಕಂಡು ಪ್ರಧಾನಿ ಮೋದಿ ಆನಂದಿಸಿದ್ದು ಇದರ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಈ ಪ್ರದರ್ಶನದ ವೀಡಿಯೊವನ್ನು ಪ್ರಧಾನಿ ಮೋದಿ ಅವರ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಹಂಚಿಕೊಂಡಿದ್ದಾರೆ .

ಈಶಾನ್ಯದಲ್ಲಿ ಆಕ್ಟೇವ್ ಬ್ಯಾಂಡ್‌ ವಂದೇ ಮಾತರಂ ‘ ಹಾಡನ್ನು ಸುಂದರವಾಗಿ ಹಾಡಿದ್ದು, ಪ್ರಧಾನಿಯವರ ಯೂಟ್ಯೂಬ್ ಚಾನೆಲ್‌ನಲ್ಲಿ ಸುಮಾರು ಮೂರು ನಿಮಿಷಗಳ ಕ್ಲಿಪ್‌ನ ವಿಡಿಯೊವನ್ನು ಶೀರ್ಷಿಕೆಯೊಂದಿಗೆ ಹಂಚಿಕೊಂಡಿದ್ದಾರೆ. ಆಕ್ಟೇವ್ ಎಂಬ ಹೆಸರನ್ನು ಈಶಾನ್ಯ ಪ್ರದೇಶದ ಅಸ್ಸಾಂ, ತ್ರಿಪುರಾ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮೇಘಾಲಯ, ಮಿಜೋರಾಂ, ಮಣಿಪುರ ಮತ್ತು ಸಿಕ್ಕಿಂ ಒಟ್ಟು ಎಂಟು ರಾಜ್ಯಗಳಿಗೆ ಲಿಂಕ್ ಮಾಡಬಹುದು.

ಬಿಜೆಪಿ ನಾಯಕರಾದ ಸಂಬಿತ್ ಪಾತ್ರ, ಪೂರ್ಣೇಶ್ ಮೋದಿ ಮತ್ತು ಡಾ ಕೆಕೆ ಲಕ್ಷ್ಮಣ್ ಅವರು ಈ ಪ್ರದರ್ಶನದ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಈ ರಾಜ್ಯಗಳಲ್ಲಿ ಪ್ರಧಾನಿ ಮೋದಿಯವರ ಭಾನುವಾರ ಚುನಾವಣೆಯ ಕಣಕಹಳೆಯನ್ನ ಮೊಗಳಿಸಿದರು. ಪಕ್ಷವು NPP (ನ್ಯಾಷನಲ್ ಪೀಪಲ್ಸ್ ಪಾರ್ಟಿ) ಜೊತೆಗೆ ಮೇಘಾಲಯದಲ್ಲಿ ಆಡಳಿತಾರೂಢ ಒಕ್ಕೂಟದ ಒಂದು ಭಾಗವಾಗಿದೆ ಮತ್ತು ತ್ರಿಪುರಾದಲ್ಲಿಯೂ ಅಧಿಕಾರದಲ್ಲಿದೆ. ಇದು ಎರಡೂ ರಾಜ್ಯಗಳು ಮುಂದಿನ ಚುನಾವಣೆಯಲ್ಲೂ ಗೆದ್ದು, ತಮ್ಮ ಅಧಿಕಾರವನ್ನು ಉಳಿಸಿಕೊಳ್ಳುವ ಗುರಿ ಹೊಂದಿದೆ. ಭಾರತ, ಮ್ಯಾನ್ಮಾರ್ ಮತ್ತು ಥೈಲ್ಯಾಂಡ್ ರಸ್ತೆಗಳ ಮೂಲಕ ಸಂಪರ್ಕಿಸಲು ಈಶಾನ್ಯವು ತನ್ನ ಸಂಪರ್ಕ ಮತ್ತು ಸಂಬಂಧಗಳನ್ನು ಅಭಿವೃದ್ಧಿಪಡಿಸುತ್ತಿದೆ ಎಂದು ತ್ರಿಪುರಾದಲ್ಲಿ ಮಾಡಿದ ಭಾಷಣದಲ್ಲಿ ಪ್ರಧಾನಿ ಮೋದಿ ಹೇಳಿದರು.

ಇದನ್ನು ಓದಿ:ಶಿಲ್ಲಾಂಗ್‌ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ಪ್ರಧಾನಿ ಮೋದಿಯ ಈ ಭೇಟಿ ಈಶಾನ್ಯ ಪ್ರದೇಶದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಯ ನೋಡಲ್ ಏಜೆನ್ಸಿಯಾದ ಈಶಾನ್ಯ ಕೌನ್ಸಿಲ್ (ಎನ್‌ಇಸಿ) ಯ 50 ವರ್ಷಗಳನ್ನು ಆಚರಿಸಲು ಉದ್ದೇಶಿಸಲಾಗಿತ್ತು. ಪ್ರಮುಖ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಸರ್ಕಾರವು ಈಗ ‘ಭವಿಷ್ಯ ನೋಡಿ’ ಮತ್ತು ‘ಭವಿಷ್ಯಕ್ಕೆ ವರ್ತಿಸಿ’, ಈಶಾನ್ಯ ವೇಗವಾಗಿ ಕಾರ್ಯನಿರ್ವಹಿಸಲು ವಿಕಸನಗೊಂಡಿದೆ ಎಂದು ಹೇಳಿದರು.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:18 am, Mon, 19 December 22

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್