AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಕುಟುಂಬ ಶಾಖೆಗಳ ಪರಿಕಲ್ಪನೆಯನ್ನು ಪರಿಚಯಿಸಲು ಆರ್​ಎಸ್​ಎಸ್​ ಚಿಂತನೆ

ಆರ್​ಎಸ್​ಎಸ್​ನ ಕೌಟುಂಬಿಕ ಶಾಖೆಯ ಪರಿಕಲ್ಪನೆ ಬಗ್ಗೆ ಈಗಾಗಲೇ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಭಾರತದಲ್ಲಿ ಕುಟುಂಬ ಶಾಖೆಗಳ ಪರಿಕಲ್ಪನೆಯನ್ನು ಪರಿಚಯಿಸಲು ಆರ್​ಎಸ್​ಎಸ್​ ಚಿಂತನೆ
ಮೋಹನ್ ಭಾಗವತ್
TV9 Web
| Updated By: ಸುಷ್ಮಾ ಚಕ್ರೆ|

Updated on:Dec 26, 2022 | 12:43 PM

Share

ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಭಾರತದಲ್ಲಿ ‘ಕುಟುಂಬ ಶಾಖಾ’ಗಳನ್ನು ರೂಪಿಸುತ್ತಿದೆ. ಇದನ್ನು ವಿದೇಶಗಳಲ್ಲಿ ವಾಸಿಸುವ ಹಿಂದೂಗಳಿಗಾಗಿ (Hindus) ವಿನ್ಯಾಸಗೊಳಿಸಲಾಗಿದೆ. ಕೌಟುಂಬಿಕ ಶಾಖೆಗಳನ್ನು ಆರಂಭಿಸುವ ಕುರಿತು ಚರ್ಚೆ ನಡೆಯುತ್ತಿದ್ದು, ಎಲ್ಲ ಕಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಹಿರಿಯ ಪದಾಧಿಕಾರಿಗಳು ಹೇಳುತ್ತಿದ್ದರೂ ಈ ಆಲೋಚನೆ ಕಾರ್ಯರೂಪಕ್ಕೆ ಬರಲು 1 ಅಥವಾ 2 ವರ್ಷ ಬೇಕಾಗಬಹುದು.

ವಿದೇಶಗಳಲ್ಲಿನ ಸಾಂಸ್ಕೃತಿಕ ಮತ್ತು ಭೌಗೋಳಿಕ ಪರಿಸ್ಥಿತಿಯನ್ನು ಗಮನಿಸಿ ಆರ್​ಎಸ್​ಎಸ್​ ಕುಟುಂಬ ಶಾಖೆಗಳ ಪರಿಕಲ್ಪನೆಯನ್ನು ಹುಟ್ಟುಹಾಕಿತು. ಜನಸಂಖ್ಯೆಯು ಚದುರಿಹೋಗಿದೆ. ಆರ್​ಎಸ್​ಎಸ್​ ಸದಸ್ಯರು ಶಾಖಾಗಳಿಗೆ ಹೋಗುವಾಗ ಅವರು ಪ್ರತ್ಯೇಕವಾಗಿ ಸಮಯ ಕಳೆಯಲು ಬಯಸುವುದಿಲ್ಲ. ಆದ್ದರಿಂದ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೂ ಒಂದು ಶಾಖಾವನ್ನು ಹೊಂದಲು ಸಂಘವು ನಿರ್ಧರಿಸಿತು. ಒಂದೇ ಆವರಣದಲ್ಲಿ ಪುರುಷರು ಮತ್ತು ಮಹಿಳೆಯರಿಗೆ ವಿವಿಧ ಕಾರ್ಯಕ್ರಮಗಳಿವೆ. ಮಕ್ಕಳಿಗಾಗಿ ಕೂಡ ಒಂದು ವಿಭಾಗವಿದೆ. ಹೀಗಾಗಿ, ಕುಟುಂಬದ ಎಲ್ಲ ಸದಸ್ಯರು ಒಂದೇ ಸ್ಥಳಕ್ಕೆ ಬಂದು ತಮ್ಮದೇ ಆದ ಗುಂಪುಗಳಲ್ಲಿ ಚಟುವಟಿಕೆಗಳನ್ನು ನಡೆಸಬಹುದು ಎಂದು ಆರ್​ಎಸ್​ಎಸ್​ ಮೂಲ ತಿಳಿಸಿದೆ.

ಇದನ್ನೂ ಓದಿ: RSS: ಅಗ್ನಿಪಥ್ ಸೇನಾ ನೇಮಕಾತಿ ರ‍್ಯಾಲಿಗೆ ಬಂದಿದ್ದಾರೆ 72 ಸಾವಿರ ಯುವಕರು! ಊಟ-ವಸತಿ ವ್ಯವಸ್ಥೆ ಮಾಡ್ತಿದೆ ಆರ್​ಎಸ್​ಎಸ್​

ಭಾರತವೂ ಬಹುತೇಕ ಇದೇ ರೀತಿಯ ಪರಿಸ್ಥಿತಿಗೆ ಸಾಕ್ಷಿಯಾಗಿದೆ. ಇಲ್ಲಿ ವಿಭಕ್ತ ಕುಟುಂಬಗಳು ಬೆಳೆದಿವೆ ಮತ್ತು ಇಬ್ಬರೂ ಪೋಷಕರು ಕೆಲಸ ಮಾಡುತ್ತಾರೆ. ಇದರಿಂದ ಕುಟುಂಬಕ್ಕೆ ಸಮಯ ನೀಡುವುದೇ ಕಡಿಮೆಯಾಗಿದೆ. ಆರ್​ಎಸ್​ಎಸ್​ನ ಕೌಟುಂಬಿಕ ಶಾಖೆಯ ಪರಿಕಲ್ಪನೆ ಬಗ್ಗೆ ಈಗಾಗಲೇ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಭಾರತದಲ್ಲಿ ಅವಿಭಕ್ತ ಕುಟುಂಬಗಳು ಕಡಿಮೆಯಾಗಿ ವಿಭಕ್ತ ಕುಟುಂಬಗಳು ಹೆಚ್ಚಾಗುತ್ತಿವೆ. ಗಂಡ-ಹೆಂಡತಿ ಇಬ್ಬರೂ ತಮ್ಮ ಮಕ್ಕಳಿಗಾಗಿ ದುಡಿಯುವ ಅನಿವಾರ್ಯತೆ ಹೆಚ್ಚಾಗಿದ್ದು, ಅವರಿಬ್ಬರೂ ಒಟ್ಟಿಗೇ ಸೇರುವ ಸಂದರ್ಭಗಳೇ ವಿರಳ ಎನಿಸಿಕೊಳ್ಳುತ್ತಿವೆ. ಈ ಹಿನ್ನೆಲೆಯಲ್ಲಿ ಕೌಟುಂಬಿಕ ಶಾಖೆಗಳನ್ನು ಪರಿಚಯಿಸಲು ಆರ್​ಎಸ್​ಎಸ್​ ಚಿಂತನೆ ನಡೆಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:41 pm, Mon, 26 December 22

ವಿಷ್ಣು ಸಮಾಧಿ ಮರು ನಿರ್ಮಾಣಕ್ಕೆ ಬಾಲಣ್ಣ ಪುತ್ರಿ ಗೀತಾ ಜಾಗ ಕೊಡ್ತಾರಾ?
ವಿಷ್ಣು ಸಮಾಧಿ ಮರು ನಿರ್ಮಾಣಕ್ಕೆ ಬಾಲಣ್ಣ ಪುತ್ರಿ ಗೀತಾ ಜಾಗ ಕೊಡ್ತಾರಾ?
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ